Telangana polls: 45 ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆ ಮಾಡಿದ ಕಾಂಗ್ರೆಸ್; ಮಾಜಿ ಕ್ರಿಕೆಟಿಗ ಅಜರುದ್ದೀನ್‌ ಕಣಕ್ಕೆ!

ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 45 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ.
ಮೊಹಮ್ಮದ್ ಅಜರುದ್ದೀನ್ ಗೆ ಟಿಕೆಟ್
ಮೊಹಮ್ಮದ್ ಅಜರುದ್ದೀನ್ ಗೆ ಟಿಕೆಟ್

ಹೈದರಾಬಾದ್: ಮುಂಬರುವ ತೆಲಂಗಾಣ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು 45 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಇಂದು ಬಿಡುಗಡೆ ಮಾಡಿದೆ. 

ಜುಬಿಲಿ ಹಿಲ್ಸ್‌ನಿಂದ ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಮೊಹಮ್ಮದ್‌ ಅಜರುದ್ದೀನ್‌ ಮತ್ತು ಲಾಲ್‌ ಬಹದ್ದೂರ್‌ ನಗರದಿಂದ ಲೋಕಸಭೆಯ ಮಾಜಿ ಸಂಸದ ಮಧು ಗೌರ್‌ ಯಾಸ್ಕಿ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದೆ. ಪಕ್ಷದ ಪಟ್ಟಿಯ ಪ್ರಕಾರ, ಹುಸ್ನಾಬಾದ್‌ನಿಂದ ಪೊನ್ನಂ ಪ್ರಭಾಕರ್, ಆದಿಲಾಬಾದ್‌ನಿಂದ ಕಾಂಡಿ ಶ್ರೀನಿವಾಸ್ ರೆಡ್ಡಿ, ಖಮ್ಮಂನಿಂದ ತುಮಲ ನಾಗೇಶ್ವರ ರಾವ್, ಮುನುಗೋಡಿನಿಂದ ಕೆ ರಾಜ್ ಗೋಪಾಲ್ ರೆಡ್ಡಿ ಅವರನ್ನು ಕಣಕ್ಕಿಳಿಸಲಾಗಿದೆ.

ಇದರೊಂದಿಗೆ ನವೆಂಬರ್ 30ರಂದು ನಡೆಯಲಿರುವ ತೆಲಂಗಾಣ ವಿಧಾನಸಭೆ ಚುನಾವಣೆಗೆ ಪಕ್ಷವು ಇದುವರೆಗೆ ಒಟ್ಟು 100 ಅಭ್ಯರ್ಥಿಗಳನ್ನು ಘೋಷಿಸಿದೆ. ರಾಜ್ಯದಲ್ಲಿ 119 ವಿಧಾನಸಭಾ ಕ್ಷೇತ್ರಗಳಿವೆ.

ನವದೆಹಲಿಯ ಅಖಿಲ ಭಾರತ ಕಾಂಗ್ರೆಸ್ ಸಮಿತಿ(ಎಐಸಿಸಿ) ಕಚೇರಿಯಲ್ಲಿ ತೆಲಂಗಾಣ ಕುರಿತ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆದ ಒಂದು ದಿನದ ನಂತರ ಈ ಘೋಷಣೆ ಹೊರಬಿದ್ದಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ನಡೆದ ಸಿಇಸಿ ಸಭೆಯಲ್ಲಿ ಸೋನಿಯಾ ಗಾಂಧಿ, ಸಲ್ಮಾನ್ ಖುರ್ಷಿದ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಭಾಗವಹಿಸಿದ್ದರು. ಅಕ್ಟೋಬರ್ 15ರಂದು ಕಾಂಗ್ರೆಸ್ 55 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿತ್ತು.

ತೆಲಂಗಾಣ ಚುನಾವಣೆಗೆ ನವೆಂಬರ್ 3 ರಂದು ಅಧಿಸೂಚನೆ ಹೊರಡಿಸಲಿದ್ದು, ನವೆಂಬರ್ 30ರಂದು ಮತದಾನ ನಡೆಯಲಿದೆ. ಡಿಸೆಂಬರ್ 3 ರಂದು ಫಲಿತಾಂಶ ಪ್ರಕಟವಾಗಲಿದೆ.

ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್ ಬಿರುಸಿನ ಪ್ರಚಾರ ನಡೆಸುತ್ತಿದೆ. ರಾಜ್ಯ ರಚನೆಯಾದಾಗಿನಿಂದ ಕೆ.ಚಂದ್ರಶೇಖರ ರಾವ್ ಅವರ ಬಿಆರ್‌ಎಸ್ ಆಡಳಿತದಲ್ಲಿದೆ. 2018ರ ವಿಧಾನಸಭಾ ಚುನಾವಣೆಯಲ್ಲಿ, ಆಡಳಿತಾರೂಢ ಭಾರತ್ ರಾಷ್ಟ್ರ ಸಮಿತಿಯು 119 ಸ್ಥಾನ ಗೆದ್ದಿದ್ದರೆ ಕಾಂಗ್ರೆಸ್ 19 ಕ್ಷೇತ್ರಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com