ಶ್ರೀನಗರ: ಕ್ರಿಕೆಟ್ ಆಡುತ್ತಿದ್ದ ಪೊಲೀಸ್ ಅಧಿಕಾರಿ ಮೇಲೆ ಉಗ್ರರಿಂದ ಗುಂಡಿನ ದಾಳಿ

ಶ್ರೀನಗರದ ಡೌನ್‌ಟೌನ್‌ನಲ್ಲಿ ಭಾನುವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಶ್ರೀನಗರ: ಶ್ರೀನಗರದ ಡೌನ್‌ಟೌನ್‌ನಲ್ಲಿ ಭಾನುವಾರ ಜಮ್ಮು ಮತ್ತು ಕಾಶ್ಮೀರ ಪೊಲೀಸ್ ಅಧಿಕಾರಿಯೊಬ್ಬರ ಮೇಲೆ ಭಯೋತ್ಪಾದಕರು ಗುಂಡಿನ ದಾಳಿ ನಡೆಸಿದ್ದು, ದಾಳಿಯಲ್ಲಿ ಅಧಿಕಾರಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ಸ್‌ಪೆಕ್ಟರ್ ಮಸ್ರೂರ್ ಅಹ್ಮದ್ ವಾನಿ ಅವರು ಇಂದು ಈದ್ಗಾ ಮೈದಾನದಲ್ಲಿ ಸ್ಥಳೀಯ ಹುಡುಗರೊಂದಿಗೆ ಕ್ರಿಕೆಟ್ ಆಡುತ್ತಿದ್ದಾಗ ಉಗ್ರರು ಗುಂಡಿನ ದಾಳಿ ನಡೆಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗಾಯಗೊಂಡ ಅಧಿಕಾರಿಯನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

"ಶ್ರೀನಗರದ ಈದ್ಗಾ ಬಳಿ ಇನ್‌ಸ್ಪೆಕ್ಟರ್ ಮಸ್ರೂರ್ ಅಹ್ಮದ್ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಅಧಿಕಾರಿ ಗಾಯಗೊಂಡಿದ್ದಾರೆ. ತಕ್ಷಣ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಗ್ರರು ಪಿಸ್ತೂಲ್ ನಿಂದ ಗುಂಡು ಹಾರಿಸಿದ್ದಾರೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಈ ಪ್ರದೇಶವನ್ನು ಸುತ್ತುವರಿಯಲಾಗಿದೆ ಎಂದು ಇದಕ್ಕು ಮುನ್ನ ಕಾಶ್ಮೀರ ವಲಯ ಪೊಲೀಸರು ಟ್ವೀಟ್ ಮಾಡಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com