ರಾಜಸ್ಥಾನದಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ 7 ಮಂದಿ ದುರ್ಮರಣ

ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ದುರ್ಮರವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್​ಗಡ್ ಜಿಲ್ಲೆಯಲ್ಲಿ ಶನಿವಾರ ಸಂಜೆ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 

ಜೈಪುರ: ಕಾರು ಮತ್ತು ಟ್ರಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 7 ಮಂದಿ ದುರ್ಮರವನ್ನಪ್ಪಿರುವ ಘಟನೆ ರಾಜಸ್ಥಾನದ ಹನುಮಾನ್​ಗಡ್ ಜಿಲ್ಲೆಯಲ್ಲಿ ಶನಿವಾರ ಸಂಜೆ ನಡೆದಿದೆ.

ಮೃತರನ್ನು ಪರಮ್‌ಜೀತ್ ಕೌರ್ (60), ಖುಶ್ವಿಂದರ್ ಸಿಂಗ್ (25), ಅವರ ಪತ್ನಿ ಪರಮ್‌ಜೀತ್ ಕೌರ್ (22), ಮಗ ಮಂಜೋತ್ ಸಿಂಗ್ (5), ರಾಂಪಾಲ್ (36), ಅವರ ಪತ್ನಿ ರೀನಾ (35) ಮತ್ತು ಮಗಳು ರೀತ್ (12) ಎಂದು ಗುರುತಿಸಲಾಗಿದೆ.

ಗಾಯಗೊಂಡವರನ್ನು ಆಕಾಶದೀಪ್ ಸಿಂಗ್ (14) ಮತ್ತು ಮನರಾಜ್ ಕೌರ್ (2) ಎಂದು ಗುರುತಿಸಲಾಗಿದ್ದು, ಅವರನ್ನು ಬಿಕಾನೇರ್‌ನ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ದುರಂತದ ಬಳಿಕ ಟ್ರಕ್ ವಾಹನವನ್ನು ಸ್ಥಳದಲ್ಲೇ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ. ಹನುಮಾನ್​ಗಡ್ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಎಸ್​ಪಿ ರಾಜೀವ್ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಕಾರಿನಲ್ಲಿ 9 ಜನ ಪ್ರಯಾಣಿಸುತ್ತಿದ್ದು, ಈ ಪೈಕಿ ಏಳು ಜನ ಸಾವನ್ನಪ್ಪಿದ್ದಾರೆ. ಮೃತರ ಗುರುತು ಪತ್ತೆಯಾಗಿದ್ದು, ಎಲ್ಲರೂ ಒಂದೇ ಕುಟುಂಬದವರು ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com