ಜಮ್ಮು ಮತ್ತು ಕಾಶ್ಮೀರದ ಕಥುವಾದಲ್ಲಿ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಆರೋಪದ ಮೇಲೆ ಯೋಧನ ಬಂಧನ!

ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ತನ್ನ ಪತ್ನಿಯನ್ನು ಕೊಂದ ಆರೋಪದ ಮೇಲೆ ಯೋಧನನ್ನು ಭಾನುವಾರ ಬಂಧಿಸಲಾಗಿದೆ. ಶನಿವಾರ ಬೆಳಗ್ಗೆ ಕುಂಡೆ ಚಕ್ ಮರ್ಹೀನ್ ಗ್ರಾಮದ ಮನೆಯಲ್ಲಿ ಪತ್ನಿ ಸರಬ್ಜೀತ್ ಕೌರ್ ಅವರನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ನಂತರ ಯೋಧ ಭೋಪಿಂದರ್ ಸಿಂಗ್ ಅವರನ್ನು ಬಂಧಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯಲ್ಲಿ ತನ್ನ ಪತ್ನಿಯನ್ನು ಕೊಂದ ಆರೋಪದ ಮೇಲೆ ಯೋಧನನ್ನು ಭಾನುವಾರ ಬಂಧಿಸಲಾಗಿದೆ.

ಶನಿವಾರ ಬೆಳಗ್ಗೆ ಕುಂಡೆ ಚಕ್ ಮರ್ಹೀನ್ ಗ್ರಾಮದ ಮನೆಯಲ್ಲಿ ಪತ್ನಿ ಸರಬ್ಜೀತ್ ಕೌರ್ ಅವರನ್ನು ಕತ್ತು ಹಿಸುಕಿ ಹತ್ಯೆ ಮಾಡಲಾಗಿದೆ. ನಂತರ ಯೋಧ ಭೋಪಿಂದರ್ ಸಿಂಗ್ ಅವರನ್ನು ಬಂಧಿಸಲಾಗಿದೆ.

ಈ ಸಂಬಂಧ ಕಥುವಾ ಜಿಲ್ಲೆಯ ರಾಜ್‌ಬಾಗ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

'ಭೋಪಿಂದರ್ ಸಿಂಗ್ ಅವರನ್ನು ಬಂಧಿಸಲಾಗಿದ್ದು, ಅವರು ತಮ್ಮ ಕರ್ತವ್ಯದಿಂದ ರಜೆಯ ಮೇಲೆ ಮನೆಗೆ ಬಂದಿದ್ದಾಗ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ಒಪ್ಪಿಕೊಂಡಿದ್ದಾರೆ'. ಕೊಲೆಯ ಹಿಂದಿನ ಕಾರಣ ಏನೆಂಬುದನ್ನು ಪತ್ತೆ ಮಾಡಲಾಗುತ್ತಿದೆ.

'ವೈದ್ಯಕೀಯ-ಕಾನೂನು ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ, ಶವವನ್ನು ಅಂತ್ಯಕ್ರಿಯೆಗಾಗಿ ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com