ಮುಕೇಶ್ ಅಂಬಾನಿ
ಮುಕೇಶ್ ಅಂಬಾನಿ

ಉದ್ಯಮಿ ಮುಕೇಶ್ ಅಂಬಾನಿಗೆ ಮೂರನೇ ಬಾರಿಗೆ ಜೀವ ಬೆದರಿಕೆ; 400 ಕೋಟಿ ರೂ. ಗೆ ಬೇಡಿಕೆ!

ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಗೆ ಅಪರಿಚಿತ ವ್ಯಕ್ತಿಯಿಂದ 400 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಇಮೇಲ್ ಬಂದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ. ಅಂಬಾನಿ ಕಂಪನಿಗೆ ಸೋಮವಾರ ಇಮೇಲ್ ಬಂದಿದೆ.
Published on

ಮುಂಬೈ: ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿಗೆ ಅಪರಿಚಿತ ವ್ಯಕ್ತಿಯಿಂದ 400 ಕೋಟಿ ರೂಪಾಯಿ ನೀಡುವಂತೆ ಬೆದರಿಕೆ ಇಮೇಲ್ ಬಂದಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಅಂಬಾನಿ ಕಂಪನಿಗೆ ಸೋಮವಾರ ಇಮೇಲ್ ಬಂದಿದೆ. ಕಳೆದ ನಾಲ್ಕು ದಿನಗಳಲ್ಲಿ ಅಂಬಾನಿಗೆ ಕಳುಹಿಸಲಾದ ಮೂರನೇ ಬೆದರಿಕೆ ಇಮೇಲ್ ಇದಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದಕ್ಕೂ ಮೊದಲು, ಶುಕ್ರವಾರ ಅಪರಿಚಿತ ವ್ಯಕ್ತಿಯಿಂದ 20 ಕೋಟಿ ರೂ. ನೀಡಬೇಕು. ಇಲ್ಲದಿದ್ದರೆ ಗುಂಡಿಕ್ಕಿ ಕೊಲ್ಲುವುದಾಗಿ ಮೊದಲ ಇಮೇಲ್ ಬಂದಿತ್ತು. ನಂತರ ಅಂಬಾನಿ ಅವರ ಭದ್ರತಾ ಉಸ್ತುವಾರಿ ನೀಡಿದ ದೂರಿನ ಆಧಾರದ ಮೇಲೆ ಇಲ್ಲಿನ ಗಾಮ್‌ದೇವಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಶನಿವಾರ ಕಂಪನಿಗೆ 200 ಕೋಟಿ ರೂಪಾಯಿ ಬೇಡಿಕೆಯ ಇಮೇಲ್ ಬಂದಿದೆ. ಅದರಂತೆ ಕಂಪನಿಗೆ ಸೋಮವಾರ ಮೂರನೇ ಇಮೇಲ್ ಬಂದಿದ್ದು, ಅದನ್ನು ಕಳುಹಿಸಿದವರು ತಮ್ಮ ಹಣದ ಬೇಡಿಕೆಯನ್ನು ದ್ವಿಗುಣಗೊಳಿಸಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ.

ಮುಂಬೈ ಪೊಲೀಸರು, ಅವರ ಅಪರಾಧ ವಿಭಾಗ ಮತ್ತು ಸೈಬರ್ ತಂಡಗಳು ಇಮೇಲ್ ಕಳುಹಿಸಿದವರನ್ನು ಪತ್ತೆಹಚ್ಚಲು ಕೆಲಸ ಮಾಡುತ್ತಿವೆ ಎಂದು ಅವರು ಹೇಳಿದರು.

ಕಳೆದ ವರ್ಷ ಮುಂಬೈ ಪೊಲೀಸರು ಬಿಹಾರದ ದರ್ಭಾಂಗ್‌ನಿಂದ ಅಂಬಾನಿ ಮತ್ತು ಅವರ ಕುಟುಂಬ ಸದಸ್ಯರಿಗೆ ಕೊಲೆ ಬೆದರಿಕೆ ಕರೆಗಳನ್ನು ಮಾಡಿದ್ದ ವ್ಯಕ್ತಿಯನ್ನು ಬಂಧಿಸಿದ್ದರು.

ಮುಂಬೈನ ಸರ್ ಎಚ್‌ಎನ್ ರಿಲಯನ್ಸ್ ಫೌಂಡೇಶನ್ ಆಸ್ಪತ್ರೆಯನ್ನು ಸ್ಫೋಟಿಸುವುದಾಗಿ ಆರೋಪಿಗಳು ಬೆದರಿಕೆ ಹಾಕಿದ್ದರು.

X

Advertisement

X
Kannada Prabha
www.kannadaprabha.com