ಕೇಂದ್ರದಿಂದ ಐಫೋನ್ ಹ್ಯಾಕ್: ಆಪಲ್ ಕಂಪನಿಯ ಎಚ್ಚರಿಕೆ ಸಂದೇಶ ಹಂಚಿಕೊಂಡ ಪ್ರತಿಪಕ್ಷಗಳ ಸಂಸದರು

ಸರ್ಕಾರಿ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್ ಗಳನ್ನು ಹ್ಯಾಕ್ ಮಾಡಬಹುದು ಎಂದು ತಂತ್ರಜ್ಞಾನ ಕಂಪನಿ ಆಪಲ್ ಮಂಗಳವಾರ ಪ್ರತಿಪಕ್ಷಗಳ ಐವರು ಸಂಸದರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು, ಅದನ್ನು ವಿರೋಧ ಪಕ್ಷಗಳು ಸಂಸದರು..
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಸರ್ಕಾರಿ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್ ಗಳನ್ನು ಹ್ಯಾಕ್ ಮಾಡಬಹುದು ಎಂದು ತಂತ್ರಜ್ಞಾನ ಕಂಪನಿ ಆಪಲ್ ಮಂಗಳವಾರ ಪ್ರತಿಪಕ್ಷಗಳ ಐವರು ಸಂಸದರಿಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು, ಅದನ್ನು ವಿರೋಧ ಪಕ್ಷಗಳು ಸಂಸದರು ತಮ್ಮ ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದಾರೆ.

ಪ್ರತಿಪಕ್ಷಗಳ ಐವರು ಸಂಸದರು ತಾವು ಆಪಲ್‌ನಿಂದ ಸ್ವೀಕರಿಸಿದ, ''ತಮ್ಮ ಐಫೋನ್‌ಗಳನ್ನು ಸರ್ಕಾರಿ ಪ್ರಾಯೋಜಿತ ದಾಳಿಕೋರರು ದೂರದಿಂದಲೇ ಹ್ಯಾಕ್ ಮಾಡಲು ಪ್ರಯತ್ನಿಸಬಹುದು" ಎಂಬ ಎಚ್ಚರಿಕೆ ಸಂದೇಶವನ್ನು ಟ್ವೀಟ್ ಮೂಲಕ ಬಹಿರಂಗಪಡಿಸಿದ್ದಾರೆ.

ವರದಿಗಳ ಪ್ರಕಾರ, ಟಿಎಂಸಿಯ ಮಹುವಾ ಮೊಯಿತ್ರಾ, ಶಿವಸೇನೆಯ(ಯುಬಿಟಿ) ಪ್ರಿಯಾಂಕಾ ಚತುರ್ವೇದಿ ಮತ್ತು ಎಎಪಿಯ ರಾಘವ್ ಚಡ್ಡಾ, ಕಾಂಗ್ರೆಸ್ ನಾಯಕ ಶಾಹಿ ತರೂರ್ ಮತ್ತು ಎಐಎಂಐಎಂನ ಅಸಾದುದ್ದೀನ್ ಓವೈಸಿ ಅವರು ಆಪಲ್‌ನಿಂದ ಈ ರೀತಿಯ ಎಚ್ಚರಿಕೆ ಸಂದೇಶಗಳನ್ನು ಸ್ವೀಕರಿಸಿದ್ದಾರೆ ಮತ್ತು ಈ ಸಂಬಂಧ ಕೇಂದ್ರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

"ಸರ್ಕಾರಿ ಪ್ರಾಯೋಜಿತ ದಾಳಿಕೋರರು ನಿಮ್ಮ ಐಫೋನ್ ಅನ್ನು ಗುರಿಯಾಗಿಸಬಹುದು- ನಿಮ್ಮ Apple ID ಯೊಂದಿಗೆ ಸಂಬಂಧಿಸಿರುವ iPhone ಅನ್ನು ರಿಮೋಟ್ ಆಗಿ ಪ್ರವೇಶ ಪಡೆಯುವ ಸಾಧ್ಯತೆ ಇದೆ ಎಂದು Apple ನಂಬುತ್ತಿದೆ" ಎಂಬ ಆಪಲ್ ಸಂದೇಶವನ್ನು ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಟ್ವೀಟ್ ಮಾಡಿದ್ದಾರೆ.

"ಸರ್ಕಾರಿ ಪ್ರಾಯೋಜಿತ ದಾಳಿಕೋರರು ನಿಮ್ಮ ಫೋನ್ ಗೆ ಪ್ರವೇಶ ಮಾಡಿದರೆ, ಅವರು ನಿಮ್ಮ ಸೂಕ್ಷ್ಮ ಸಂವಹನಕ್ಕೆ ಸಂಬಂಧಿಸಿದ ಡೇಟಾ, ಕ್ಯಾಮರಾ ಅಥವಾ ಮೈಕ್ರೊಫೋನ್‌ಗಳನ್ನು ದೂರದಿಂದಲೇ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ದಯವಿಟ್ಟು ಈ ಎಚ್ಚರಿಕೆಯನ್ನು ಗಂಭೀರವಾಗಿ ಪರಿಗಣಿಸಿ" ಎಂದು ಆಪಲ್ ಕೇಳಿಕೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com