ಪಾಕ್-ಬಾಂಗ್ಲಾ ವಿಶ್ವಕಪ್ ಪಂದ್ಯದಲ್ಲಿ ಪ್ಯಾಲೆಸ್ತೇನ್ ಧ್ವಜ ಹಾರಾಟ!

ಈಡೆನ್ ಗಾರ್ಡನ್ ನಲ್ಲಿ ನಡೆದ ಪಾಕ್-ಬಾಂಗ್ಲಾದೇಶದ ಪಂದ್ಯದಲ್ಲಿ ಗುಂಪೊಂದು ಉದ್ದೇಶಪೂರ್ವಕವಾಗಿ ಪ್ಯಾಲೆಸ್ತೇನ್ ಧ್ವಜವನ್ನು ಪ್ರದರ್ಶಿಸಿದೆ.
ಪಾಕ್-ಬಾಂಗ್ಲಾ ವಿಶ್ವಕಪ್ ಪಂದ್ಯದಲ್ಲಿ ಪ್ಯಾಲೆಸ್ತೇನ್ ಧ್ವಜ ಹಾರಾಟ!
ಪಾಕ್-ಬಾಂಗ್ಲಾ ವಿಶ್ವಕಪ್ ಪಂದ್ಯದಲ್ಲಿ ಪ್ಯಾಲೆಸ್ತೇನ್ ಧ್ವಜ ಹಾರಾಟ!
Updated on

ಕೋಲ್ಕತ್ತ: ಈಡೆನ್ ಗಾರ್ಡನ್ ನಲ್ಲಿ ನಡೆದ ಪಾಕ್-ಬಾಂಗ್ಲಾದೇಶದ ಪಂದ್ಯದಲ್ಲಿ ಗುಂಪೊಂದು ಉದ್ದೇಶಪೂರ್ವಕವಾಗಿ ಪ್ಯಾಲೆಸ್ತೇನ್ ಧ್ವಜವನ್ನು ಪ್ರದರ್ಶಿಸಿದೆ.
 
ಪಂದ್ಯದ ಪಾರ್ಶ್ವದಲ್ಲಿ ಪ್ಯಾಲೆಸ್ತೇನ್ ಮುಕ್ತಗೊಳಿಸಿ ಎಂಬ ಅಭಿಯಾನ ನಡೆದಿತ್ತು. ಸಾಮಾಜಿಕ ಜಾಲತಾಣಗಳಲ್ಲಿ ಪ್ಯಾಲೆಸ್ತೇನ್ ಧ್ವಜವನ್ನು ಹಾರಿಸಿರುವುದು ವೈರಲ್ ಆಗತೊಡಗಿವೆ.

ಈ ಕುರಿತು ಐಸಿಸಿಯಿಂದ ಈ ವರೆಗೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ. ಆದರೆ ವರದಿಗಳ ಪ್ರಕಾರ, ಈ ಘಟನೆಗೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಸ್ಥಳೀಯ ಅಧಿಕಾರಿಗಳು ತಿಳಿಸಿದ್ದಾರೆ. 

ಪ್ಯಾಲೆಸ್ತೇನ್ ಬೆಂಬಲಿಗರು ಬಾಂಗ್ಲಾದೇಶದವರೇ ಅಥವಾ ಭಾರತದವರೇ ಎಂಬುದು ಸ್ಪಷ್ಟವಾಗಿಲ್ಲ. ಪಂದ್ಯ ವೀಕ್ಷಿಸಲು ಬಾಂಗ್ಲಾದೇಶದ ಸಾವಿರಾರು ಅಭಿಮಾನಿಗಳು ಆಗಮಿಸಿದ್ದರು. ಬಂಧಿತ ವ್ಯಕ್ತಿಗಳು ಯಾವ ದೇಶಕ್ಕೆ ಸಂಬಂಧಿಸಿದವರು ಎಂಬುದು ಈ ವರೆಗೂ ತಿಳಿದುಬಂದಿಲ್ಲ. ಇಂದು ಮೈದಾನದಲ್ಲಿ 27,940 ಮಂದಿ ಪಂದ್ಯ ವೀಕ್ಷಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com