ನವದೆಹಲಿ: ಮುಂಬರುವ ಜಿ 20 ಶೃಂಗಸಭೆಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ರಾಷ್ಟ್ರಪತಿ ಭವನದ ಪ್ರವಾಸವನ್ನು 10 ದಿನಗಳವರೆಗೆ ಬಂದ್ ಮಾಡಲಾಗುವುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.
ಜಿ20 ಶೃಂಗಸಭೆಯು ರಾಷ್ಟ್ರ ರಾಜಧಾನಿಯಲ್ಲಿ ಸೆಪ್ಟೆಂಬರ್ 9 ರಿಂದ 10 ರವರೆಗೆ ನಡೆಯಲಿದೆ.
"ಮುಂಬರುವ G20 ಶೃಂಗಸಭೆಗೆ ಸಂಬಂಧಿಸಿದ ಪೂರ್ವಸಿದ್ಧತಾ ಕಾರ್ಯಗಳಿಂದಾಗಿ ಸಾರ್ವಜನಿಕರಿಗೆ ರಾಷ್ಟ್ರಪತಿ ಭವನದವನ್ನು ಸೆಪ್ಟೆಂಬರ್ 1 ರಿಂದ ಸೆಪ್ಟೆಂಬರ್ 10 ರವರೆಗೆ ಬಂದ್ ಮಾಡಲಾಗುವುದು" ಎಂದು ರಾಷ್ಟ್ರಪತಿ ಭವನ ಪ್ರಕಟಣೆಯಲ್ಲಿ ತಿಳಿಸಿದೆ.
Advertisement