ಲಕ್ನೋ: ಕೇಂದ್ರ ಸಚಿವ ಕೌಶಲ್ ಕಿಶೋರ್ ಮನೆಯಲ್ಲಿ ಗುಂಡಿನ ದಾಳಿ; ಮಗನ ಸ್ನೇಹಿತನ ಹತ್ಯೆ, ಮೂವರ ಬಂಧನ

ಕೇಂದ್ರ ಸಚಿವ ಕೌಶಲ್ ಕಿಶೋರ್ರ ನಿವಾಸದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.
ಕೊಲೆಯಾದ  ವಿನಯ್ ಶ್ರೀವಾಸ್ತವ್
ಕೊಲೆಯಾದ ವಿನಯ್ ಶ್ರೀವಾಸ್ತವ್

ಲಕ್ನೋ: ಕೇಂದ್ರ ಸಚಿವ ಕೌಶಲ್ ಕಿಶೋರ್ರ ನಿವಾಸದಲ್ಲಿ ಯುವಕನೊಬ್ಬನನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ಶುಕ್ರವಾರ ಮುಂಜಾನೆ ಬೆಳಕಿಗೆ ಬಂದಿದೆ.

ಉತ್ತರ ಪ್ರದೇಶದ ಲಕ್ನೋದಲ್ಲಿ ಕೇಂದ್ರ ಸಚಿವ ಕೌಶಲ್ ಕಿಶೋರ್ ಅವರ ನಿವಾಸದಲ್ಲೇ ಈ ಘಟನೆ ನಡೆದಿದ್ದು ಅಲ್ಲದೆ ಸ್ಥಳದಲ್ಲಿ ಸಚಿವರ ಪುತ್ರನ ಹೆಸರಿನಲ್ಲಿ ಪರವಾನಗಿ ಪಡೆದ ಪಿಸ್ತೂಲ್ ಕೂಡ ಪತ್ತೆಯಾಗಿರುವುದು ಭಾರಿ ಅನುಮಾನಕ್ಕೆ ಎಡೆಮಾಡಿದೆ.

ಲಕ್ನೋದ ಠಾಕುರ್‌ಗಂಜ್ ಪೊಲೀಸ್ ಠಾಣಾ ವ್ಯಾಪ್ತಿಯ ಬೆಗಾರಿಯಾ ಗ್ರಾಮದಲ್ಲಿರುವ ಕೇಂದ್ರ ರಾಜ್ಯ ಸಚಿವ ಕೌಶಲ್ ಕಿಶೋರ್ ಅವರ ಹೊಸ ನಿವಾಸದಲ್ಲಿ ವಿನಯ್ ಶ್ರೀವಾಸ್ತವ್ ಅವರನ್ನು ಪಿಸ್ತೂಲ್‌ನಿಂದ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿ ಪೊಲೀಸರು ಸಚಿವರ ನಿವಾಸವನ್ನು ಶೋಧ ನಡೆಸಿದ್ದು ಬಲಿಯಾದ ಯುವಕ ವಿಕಾಸ್ ಶ್ರೀವಾಸ್ತವ ಎನ್ನಲಾಗಿದ್ದು, ಈತ ಕೌಶಲ್ ಕಿಶೋರ್ ಅವರ ಮಗನ ಸ್ನೇಹಿತ ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿ ಪಡೆದ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣದ ಪರಿಶೀಲನೆ ನಡೆಯುತ್ತಿದೆ. ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ವಿನಯ್ ಶ್ರೀವಾಸ್ತವ್ ಅವರ ಕುಟುಂಬಸ್ಥರು ಕೊಲೆ ಆರೋಪದಡಿ ದೂರು ದಾಖಲಿಸಿದ್ದಾರೆ. ಪಶ್ಚಿಮ ಡಿಸಿಪಿ ರಾಹುಲ್ ರಾಜ್, ಎಡಿಸಿಪಿ ಚಿರಂಜೀವ್ ನಾಥ್ ಸಿನ್ಹಾ ಸೇರಿದಂತೆ ಭಾರಿ ಪೊಲೀಸ್ ಬಂದೋಬಸ್ತ್​ ಕಲ್ಪಿಸಲಾಗಿದೆ.

ಯುವಕನ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕಳುಹಿಸಲಾಗಿದ್ದು ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಬೇಗೇರಿಯ ನಿವಾಸಿ ವಿನಯ್ ಶ್ರೀವಾಸ್ತವ್ ಬಿಜೆಪಿ ಕಾರ್ಯಕರ್ತ, ಕೇಂದ್ರ ಸಚಿವರ ಪುತ್ರ ವಿಕಾಸ್ ಕಿಶೋರ್ ಜತೆ ವಾಸವಿದ್ದರು.

ಶುಕ್ರವಾರ ಬೆಳಗಿನ ಜಾವ 4 ಗಂಟೆಗೆ ವಿನಯ್ ತಲೆಗೆ ಪಿಸ್ತೂಲಿನಿಂದ ಗುಂಡು ಹಾರಿಸಿ ಹತ್ಯೆ ಮಾಡಲಾಗಿದೆ. ಮೃತದೇಹ ಹಾಸಿಗೆ ಬಳಿ ನೆಲದ ಮೇಲೆ ಬಿದ್ದಿತ್ತು. ಈ ಸಂದರ್ಭದಲ್ಲಿ ಅಜಯ್ ರಾವತ್, ಅಂಕಿತ್ ಶರ್ಮಾ, ಶಮೀಮ್ ಬಾಬಾ, ಬಂಟಿ ಮತ್ತು ಇನ್ನಿಬ್ಬರು ಅಪರಿಚತರು ಸ್ಥಳದಲ್ಲಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com