ಮಲ್ಲಿಕಾರ್ಜುನ ಖರ್ಗೆ
ದೇಶ
ಮಣಿಪುರ ವಿಚಾರವಾಗಿ ಸಂಸತ್ತಿನ ವಿಶೇಷ ಅಧಿವೇಶನ ಕರೆದಿಲ್ಲ: ಮಲ್ಲಿಕಾರ್ಜುನ ಖರ್ಗೆ ಕಿಡಿ
ಸೆಪ್ಟೆಂಬರ್ 18 ರಿಂದ 22 ರವರೆಗೆ 'ಸಂಸತ್ತಿನ ವಿಶೇಷ ಅಧಿವೇಶನ" ಕರೆದಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಹೊತ್ತಿ ಉರಿಯುತ್ತಿರುವ ಮಣಿಪುರ ವಿಚಾರವಾಗಿ ವಿಶೇಷ ಅಧಿವೇಶನ ಕರೆದಿಲ್ಲ ಎಂದಿರುವ ಅವರು ದೇಶ ಸರ್ವಾಧಿಕಾರದತ್ತ ಸಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಮುಂಬೈ: ಸೆಪ್ಟೆಂಬರ್ 18 ರಿಂದ 22 ರವರೆಗೆ 'ಸಂಸತ್ತಿನ ವಿಶೇಷ ಅಧಿವೇಶನ" ಕರೆದಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಹೊತ್ತಿ ಉರಿಯುತ್ತಿರುವ ಮಣಿಪುರ ವಿಚಾರವಾಗಿ ವಿಶೇಷ ಅಧಿವೇಶನ ಕರೆದಿಲ್ಲ ಎಂದಿರುವ ಅವರು ದೇಶ ಸರ್ವಾಧಿಕಾರದತ್ತ ಸಾಗುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
INDIA ಮೈತ್ರಿಕೂಟ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿರೋಧ ಪಕ್ಷದವರನ್ನು ಕೇಳದೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯಲಾಗಿದೆ. ಮಣಿಪುರ ಹೊತ್ತಿ ಉರಿಯುತ್ತಿದ್ದಾಗ, ಕೋವಿಡ್-19 ಸಾಂಕ್ರಾಮಿಕ ಸಮಯದಲ್ಲಿ, ಚೀನಾದ ವಿಷಯ ಅಥವಾ ನೋಟು ಅಮಾನ್ಯೀಕರಣ, ವಲಸೆ ಕಾರ್ಮಿಕರ ವಿಷಯಗಳ ಬಗ್ಗೆ ಸಂಸತ್ತಿನ ವಿಶೇಷ ಅಧಿವೇಶನ ಕರೆಯಲಿಲ್ಲ ಎಂದು ದೂರಿದರು.
"ಈಗಿನ ಅಜೆಂಡಾ ಏನೆಂದು ನನಗೆ ತಿಳಿದಿಲ್ಲ. ಇದು ದೇಶವನ್ನು ನಡೆಸುವ ಮಾರ್ಗವಲ್ಲ. ನಾವು ನಿಧಾನವಾಗಿ ಸರ್ವಾಧಿಕಾರದ ಕಡೆಗೆ ಹೋಗುತ್ತಿದ್ದೇವೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ