ಜಿ 20 ಶೃಂಗಸಭೆ: ಶುಕ್ರವಾರ ಜೋ ಬೈಡನ್ ಜೊತೆಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ

ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಪಾಲ್ಗೊಳ್ಳದಿರುವುದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿರಾಸೆ ವ್ಯಕ್ತಪಡಿಸಿದ್ದು, ಈ ವಾರ ಭಾರತ ಪ್ರವಾಸಕ್ಕಾಗಿ ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. 
ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆಗೆ ಪ್ರಧಾನಿ ಮೋದಿ
ಅಮೆರಿಕ ಅಧ್ಯಕ್ಷ ಜೋ ಬೈಡನ್ ಜೊತೆಗೆ ಪ್ರಧಾನಿ ಮೋದಿ

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಚೀನಾದ ಅಧ್ಯಕ್ಷ ಕ್ಸಿ- ಜಿನ್ ಪಿಂಗ್ ಪಾಲ್ಗೊಳ್ಳದಿರುವುದಕ್ಕೆ ಅಮೆರಿಕ ಅಧ್ಯಕ್ಷ ಜೋ ಬೈಡನ್ ನಿರಾಸೆ ವ್ಯಕ್ತಪಡಿಸಿದ್ದು, ಈ ವಾರ ಭಾರತ ಪ್ರವಾಸಕ್ಕಾಗಿ ಎದುರು ನೋಡುತ್ತಿರುವುದಾಗಿ ತಿಳಿಸಿದ್ದಾರೆ. 

ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಜೋ- ಬೈಡನ್ ಮುಂದಿನ ವಾರ ಭಾರತಕ್ಕೆ ಆಗಮಿಸಲಿದ್ದಾರೆ. ಅಲ್ಲದೇ, ಶೃಂಗಸಭೆಯ ಭಾಗವಾಗಿ ಸೆಪ್ಟೆಂಬರ್ 8 ರಂದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ   ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ ಎಂದು ಶ್ವೇತಭವನ ಪ್ರಕಟಣೆ ತಿಳಿಸಿದೆ.

ಭಾರತ ಮತ್ತು ವಿಯೆಟ್ನಾಂ ಭೇಟಿಗಳನ್ನು ಎದುರು ನೋಡುತ್ತಿರುವುದಾಗಿ ಅವರು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ್ದಾರೆ.  ಸೆಪ್ಟೆಂಬರ್ 9 ಮತ್ತು 10 ರಂದು ರಾಷ್ಟ್ರ ರಾಜಧಾನಿಯಲ್ಲಿ ನಡೆಯುವ ಶೃಂಗಸಭೆಯಲ್ಲಿ ಜಿ 20 ನಾಯಕತ್ವಕ್ಕಾಗಿ ಪಿಎಂ ಮೋದಿಯನ್ನು ಬೈಡನ್ ಶ್ಲಾಘಿಸುತ್ತಾರೆ ಎಂದು ಶ್ವೇತಭವನವು ಈ ವಾರದ ಆರಂಭದಲ್ಲಿ ತಿಳಿಸಿತ್ತು. 

ಚೀನಾದೊಂದಿಗಿನ ಸಂಬಂಧವನ್ನು ಸರಿಪಡಿಸಲು ಅಮೆರಿಕ ಪ್ರಯತ್ನಿಸುತ್ತಿರುವಾಗ, ಸೆಪ್ಟೆಂಬರ್ 9 ಮತ್ತು 10 ರಂದು ಭಾರತದಲ್ಲಿ ನಡೆಯಲಿರುವ ಎರಡು ದಿನಗಳ ಜಿ-20 ಶೃಂಗಸಭೆಯಲ್ಲಿ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಭಾಗವಹಿಸದಿರುವ ಬಗ್ಗೆ ಜೋ- ಬೈಡನ್ ನಿರಾಶೆ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com