ರಾಜ್‌ಘಾಟ್‌ನಲ್ಲಿ 12 ಅಡಿ ಎತ್ತರದ ಮಹಾತ್ಮ ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ರಾಷ್ಟ್ರಪತಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರ 12 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.
ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ರಾಷ್ಟ್ರಪತಿ ಮುರ್ಮು
ಗಾಂಧಿ ಪ್ರತಿಮೆ ಅನಾವರಣಗೊಳಿಸಿದ ರಾಷ್ಟ್ರಪತಿ ಮುರ್ಮು

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೋಮವಾರ ದೆಹಲಿಯ ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರ 12 ಅಡಿ ಎತ್ತರದ ಪ್ರತಿಮೆಯನ್ನು ಅನಾವರಣಗೊಳಿಸಿದರು.

ವಿವಿಧ ಭಂಗಿಗಳಲ್ಲಿರುವ ಮಹಾತ್ಮ ಗಾಂಧಿಯವರ ಪ್ರತಿಮೆಗಳನ್ನು ಸ್ಥಾಪಿಸಿರುವ ಗಾಂಧಿ ವಾಟಿಕಾವನ್ನು ಸಹ ರಾಷ್ಟ್ರಪತಿಗಳು ಇಂದು ಉದ್ಘಾಟಿಸಿದರು.

ಈ ವೇಳೆ ಮಾತನಾಡಿದ ರಾಷ್ಟ್ರಪತಿ ಮುರ್ಮು ಅವರು, ಮಹಾತ್ಮಾ ಗಾಂಧಿಯವರು ವಿಶ್ವ ಸಮುದಾಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಅವರ ಮೌಲ್ಯಗಳು ಮತ್ತು ಆದರ್ಶಗಳು ಜಗತ್ತಿಗೆ ಹೊಸ ದಿಕ್ಕನ್ನು ತೋರಿಸಿವೆ ಎಂದು ಹೇಳಿದರು.

"ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ ಅವರಿಂದ ಹಿಡಿದು ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರವರೆಗೂ ಮಹಾತ್ಮಾ ಗಾಂಧಿಯವರ ಅಹಿಂಸೆಯ ಮಾರ್ಗ ಜಾಗತಿಕ ಅಭಿವೃದ್ಧಿಯ ಮಾರ್ಗವೆಂದು ಒಪ್ಪಿಕೊಂಡಿದ್ದಾರೆ" ಎಂದು ರಾಷ್ಟ್ರಪತಿಗಳು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com