ಸನಾತನ ಧರ್ಮದ ಕುರಿತು ಉದಯನಿಧಿ ಸ್ಚಾಲಿನ್ ಹೇಳಿಕೆ: ರಾಹುಲ್, ಖರ್ಗೆ ಮೌನ ಕುರಿತು ಬಿಜೆಪಿ ಕಿಡಿ

ಸನಾತನ ಧರ್ಮದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಚಾಲಿನ್ ವಿವಾದಾತ್ಮಕ ಹೇಳಿಕೆ ನೀಡಿರುವ ಕುರಿತು ಮೌನ ತಾಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.
ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್.
ಬಿಜೆಪಿ ನಾಯಕ ರವಿಶಂಕರ್ ಪ್ರಸಾದ್.

ನವದೆಹಲಿ: ಸನಾತನ ಧರ್ಮದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಚಾಲಿನ್ ವಿವಾದಾತ್ಮಕ ಹೇಳಿಕೆ ನೀಡಿರುವ ಕುರಿತು ಮೌನ ತಾಳಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಮಲ್ಲಿಕಾರ್ಜುನ ಖರ್ಗೆ, ನಿತೀಶ್ ಕುಮಾರ್ ಹಾಗೂ ತೇಜಸ್ವಿ ಯಾದವ್ ವಿರುದ್ಧ ಬಿಜೆಪಿ ತೀವ್ರವಾಗಿ ಕಿಡಿಕಾರಿದೆ.

ಸುದ್ದಿಗಾರರೊದಿಗೆ ಮಾತನಾಡಿದ ಕೇಂದ್ರದ ಮಾಜಿ ಸಚಿವ ಮತ್ತು ಬಿಜೆಪಿಯ ಹಿರಿಯ ನಾಯಕ ರವಿಶಂಕರ್ ಪ್ರಸಾದ್ ಅವರು, ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ಪ್ರತಿಪಕ್ಷಗಳು ಹಿಂದೂ ಧರ್ಮವನ್ನು ವಿರೋಧಿಸುತ್ತಿವೆ. ತಮ್ಮದೇ ನಾಯಕರೊಬ್ಬರು ವಿವಾದಾತ್ಮಕ ಹೇಳಿಕೆ ನೀಡಿದ್ದು, ರಾಹುಲ್ ಗಾಂಧಿ,  ಮಲ್ಲಿಕಾರ್ಜುನ ಖರ್ಗೆ, ನಿತೀಶ್ ಕುಮಾರ್ ಹಾಗೂ ತೇಜಸ್ವಿಯವರು ಮೌನ ತಾಳಿರುವುದು ನಾಚಿಕೆಗೇಡಿನ ಸಂಗತಿ ಎಂದು ವಾಗ್ದಾಲಿ ನಡೆಸಿದ್ದಾರೆ.

ಈ ಹಿಂದೆ ಹೇಳಿಕೆ ನೀಡಿದ್ದ ಉದಯನಿಧಿ ಸ್ಟಾಲಿನ್ ಅವರು, ಸನಾತನ ಧರ್ಮವನ್ನು ಸೊಳ್ಳೆಗಳು, ಡೆಂಗ್ಯೂ, ಮಲೇರಿಯಾ ಮತ್ತು ಕರೋನಾದೊಂದಿಗೆ ಸಮೀಕರಿಸಿದ ದ್ರಾವಿಡ ಮುನ್ನೇಟ್ರ ಕಳಗಂ ನಾಯಕ ಉದಯನಿಧಿ ಸ್ಟಾಲಿನ್, ಅದನ್ನು ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಹೇಳಿಕೆ ರಾಷ್ಟ್ರದಾದ್ಯಂತ ತೀವ್ರ ವಿರೋಧ, ಟೀಕಗಳು ವ್ಯಕ್ತವಾಗಿದ್ದವು.

ಟೀಕೆ, ವಿರೋಧ ಬಳಿಕ ತಮ್ಮ ಹೇಳಿಕೆಗೆ ನಾನು ಬದ್ಧ ಎಂದೂ ಮತ್ತೆ ತಮ್ಮ ಹೇಳಿಕೆಯನ್ನು ಪುನರುಚ್ಛರಿಸಿದ್ದರು.

ಸಾಮಾಜಿಕ ಜಾಲತಾಣ ’ಎಕ್ಸ್‌‘ನಲ್ಲಿ ಪೋಸ್ಟ್ ಮಾಡಿದ್ದ ಉದಯನಿಧಿ ಸ್ಟಾಲಿನ್ ಅವರು, ನಾನು ನನ್ನ ಹೇಳಿಕೆಗೆ ಬದ್ಧನಾಗಿದ್ದೇನೆ. ಕಾನೂನು ಹೋರಾಟ ಸೇರಿದಂತೆ ಯಾವುದೇ ಹೋರಾಟಕ್ಕೂ ನಾನು ಸಿದ್ಧನಿದ್ದೇನೆಂದು ಹೇಳಿದ್ದರು.

ಯಾವ ಬೆದರಿಕೆಗಳಿಗೂ ನಾನು ಹೆದರುವುದಿಲ್ಲ. ಪೆರಿಯಾರ್, ಅಣ್ಣಾ ಮತ್ತು ಕಲೈನಾರ್ ಅವರ ಅನುಯಾಯಿಗಳಾದ ನಾವು ಸಾಮಾಜಿಕ ನ್ಯಾಯವನ್ನು ಎತ್ತಿಹಿಡಿಯಲು ಹಾಗೂ ತಂದೆ ಎಂ.ಕೆ.ಸ್ಟಾಲಿನ್ ಅವರ ಮಾರ್ಗದರ್ಶನದಲ್ಲಿ ಸಮಾನತೆಯ ಸಮಾಜವನ್ನು ಸ್ಥಾಪಿಸಲು ಹೋರಾಡುತ್ತೇವೆ. ಈ ದ್ರಾವಿಡ ನೆಲದಿಂದ ಸನಾತನ ಧರ್ಮ ನಿರ್ಮೂಲನೆ ಮಾಡುವ ನಮ್ಮ ಸಂಕಲ್ಪ ಸ್ವಲ್ಪವೂ ಕಡಿಮೆಯಾಗುವುದಿಲ್ಲ ಎಂದು ತಿಳಿಸಿದ್ದರು.

ಈ ಹೇಳಿಕೆಗೆ ರವಿಶಂಕರ್ ಪ್ರಸಾದ್ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದರು, INDIA ಮೈತ್ರಿಕೂಟವು ಮತಕ್ಕಾಗಿ ಯಾವ ಮಟ್ಟಕ್ಕೂ ಹೋಗಬಹುದು. ಉದಯನಿಧಿ ಸ್ಟಾಲಿನ್ ಸನಾತನ ಧರ್ಮವನ್ನು ಡೆಂಗ್ಯೂ ಮತ್ತು ಮಲೇರಿಯಾಕ್ಕೆ ಹೋಲಿಸಿದ್ದಾರೆ. ರಾಹುಲ್ ಗಾಂಧಿ ಏಕೆ ಮೌನವಾಗಿದ್ದಾರೆ ಎಂಬುದೇ ದೊಡ್ಡ ಪ್ರಶ್ನೆ. ಅವರು ಹೇಳಿಕೆ ನೀಡಿ ಎರಡು ದಿನಗಳಾಗಿವೆ. ಹಿಂದೂ ಎಂದು ಹೇಳಿಕೊಳ್ಳುತ್ತಾರೆ. ದೇವಸ್ಥಾನಗಳಿಗೆ ಹೋಗುತ್ತಾರೆ. ಇವೆಲ್ಲೆವೂ ಮತಕ್ಕಾಗಿ ಮಾಡಿದ್ದು ಎಂಬುದನ್ನು ಸಾಬೀತುಪಡಿಸುತ್ತಿವೆ. ನಿತೀಶ್ ಕುಮಾರ್ ಮತ್ತು ತೇಜಸ್ವಿ ಯಾದವ್ ಅವರೂ ಯಾವ ಕಾರಣಕ್ಕೆ ಮೌನವಾಗಿದ್ದಾರೆ? INDIA ಮೈತ್ರಿಕೂಟ ಮತಕ್ಕಾಗಿ ಹಿಂದೂ ಧರ್ಮವನ್ನು ವಿರೋಧಿಸುತ್ತಿದೆ. ಅವರ ಮೂಲ ಚಿಂತನೆ ಹಿಂದೂ ವಿರೋಧಿಯಾಗಿದೆ. ಮತಕ್ಕಾಗಿ ಯಾವ ಮಟ್ಟಕ್ಕೂ ಹೋಗುವುದು ಅವರ ಟ್ರೆಂಡ್ ಆಗಿದೆ ಎಂದು ಹೇಳಿದರು.

ಇದೇ ವೇಳೆ ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಆಧಾರ ಸ್ತಂಭ ಸನಾತನ ಎಂದ ಅವರು, ಸನಾತನ ಎಂದಿಗೂ ಶಾಶ್ವತವಾಗಿರುತ್ತದೆ ಎಂದು ಪ್ರತಿಪಾದಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com