ಕಾಂಗ್ರೆಸ್ ಜೊತೆ ವೈಎಸ್ ಶರ್ಮಿಳಾ ಪಕ್ಷ ವಿಲೀನ ಸಾಧ್ಯತೆ

ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಮತ್ತು ಶೀಘ್ರದಲ್ಲೇ ತಮ್ಮ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ...
ಶರ್ಮಿಳಾ
ಶರ್ಮಿಳಾ

ನವದೆಹಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈಎಸ್ ರಾಜಶೇಖರ ರೆಡ್ಡಿ ಅವರ ಪುತ್ರಿ ವೈಎಸ್ ಶರ್ಮಿಳಾ ಅವರು ಕಾಂಗ್ರೆಸ್‌ ಸೇರುವ ಸಾಧ್ಯತೆ ಇದೆ ಮತ್ತು ಶೀಘ್ರದಲ್ಲೇ ತಮ್ಮ ವೈಎಸ್‌ಆರ್ ತೆಲಂಗಾಣ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಲಿದ್ದಾರೆ ಎಂದು ಮೂಲಗಳು ಸೋಮವಾರ ತಿಳಿಸಿವೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ವೈ ಎಸ್ ಜಗನ್ ಮೋಹನ್ ರೆಡ್ಡಿ ಅವರ ಸಹೋದರಿ ಶರ್ಮಿಳಾ ಅವರು ಸೆಪ್ಟೆಂಬರ್ 17 ರಂದು ಹೈದರಾಬಾದ್ ಬಳಿ ನಡೆಯಲಿರುವ ಕಾಂಗ್ರೆಸ್ ಪಕ್ಷದ ಮೆಗಾ ರ್ಯಾಲಿಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ದೆಹಲಿ ಮೂಲಗಳು ತಿಳಿಸಿವೆ.

ಶರ್ಮಿಳಾ ಅವರು ಗುರುವಾರ ರಾಷ್ಟ್ರ ರಾಜಧಾನಿಯಲ್ಲಿ ಕಾಂಗ್ರೆಸ್‌ನ ಉನ್ನತ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದರು. ಎಐಸಿಸಿ ಪ್ರಧಾನ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ ಸಿ ವೆಂಗೋಪಾಲ್ ಅವರನ್ನು ಕೇಳಿದಾಗ, "ಶರ್ಮಿಳಾ ಅವರು ಕಾಂಗ್ರೆಸ್ ಸಂಸದೀಯ ಪಕ್ಷದ ಮುಖ್ಯಸ್ಥೆ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ. ಇದು ತುಂಬಾ ಸೌಹಾರ್ದಯುತ ಭೇಟಿಯಾಗಿದೆ. ಉಳಿದ ವಿಷಯಗಳನ್ನು ನೀವು ಕಾದು ನೋಡಿ" ಎಂದಿದ್ದಾರೆ.

ಸೆಪ್ಟೆಂಬರ್ 17 ರಂದು ತೆಲಂಗಾಣ ರಾಷ್ಟ್ರೀಯ ಏಕೀಕರಣ ದಿನವಾಗಿ ಆಚರಿಸಲಾಗುತ್ತದೆ. ಕಾಂಗ್ರೆಸ್ ಹೈದರಾಬಾದ್ ಬಳಿ "ಮೆಗಾ ರ್ಯಾಲಿ" ನಡೆಸಲಿದೆ. ಅಂದು ತೆಲಂಗಾಣಕ್ಕೆ ಐದು ಖಾತರಿಗಳನ್ನು ಘೋಷಿಸಲಾಗುವುದು ಎಂದು ವೇಣುಗೋಪಾಲ್ ಅವರು ಹೇಳಿದ್ದಾರೆ.

ಶರ್ಮಿಳಾ ಅವರು ಸಭೆಯಲ್ಲಿ ಉಪಸ್ಥಿತರಿರುವ ಸಾಧ್ಯತೆಯಿದೆ ಮತ್ತು ಮುಂದಿನ ದಿನಗಳಲ್ಲಿ ಅವರ ಪಕ್ಷವನ್ನು ಕಾಂಗ್ರೆಸ್‌ನೊಂದಿಗೆ ವಿಲೀನಗೊಳಿಸಬಹುದು ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com