ಆರು ರಾಜ್ಯಗಳ ಏಳು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಮತದಾನ ಆರಂಭ: INDIA ಬಣಕ್ಕೆ ಅಗ್ನಿ ಪರೀಕ್ಷೆ

ದೇಶದ 6 ರಾಜ್ಯಗಳಲ್ಲಿನ 7 ವಿಧಾನಸಭೆ ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಎಲ್ಲ ಕ್ಷೇತ್ರಗಳಲ್ಲೂ ಮತದಾನ ಬಿರುಸುಗೊಂಡಿದೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ದೇಶದ 6 ರಾಜ್ಯಗಳಲ್ಲಿನ 7 ವಿಧಾನಸಭೆ ಸ್ಥಾನಗಳಿಗೆ ಉಪ ಚುನಾವಣೆ ನಡೆಯುತ್ತಿದ್ದು ಎಲ್ಲ ಕ್ಷೇತ್ರಗಳಲ್ಲೂ ಮತದಾನ ಬಿರುಸುಗೊಂಡಿದೆ ಎಂದು ಚುನಾವಣಾಧಿಕಾರಿಗಳು ಹೇಳಿದ್ದಾರೆ.

ಉತ್ತರಪ್ರದೇಶದ ಘೋಸಿ, ಪಶ್ಚಿಮ ಬಂಗಾಳದ ಧುಗ್ಪುರಿ, ಕೇರಳದ ಪುತುಪಲ್ಲಿ, ಉತ್ತರಾಖಂಡದ ಬಾಗೇಶ್ವರ್, ಜಾರ್ಖಂಡ್‌ನ ದುಮ್ರಿ, ತ್ರಿಪುರಾದ ಬಾಕ್ಸ್‌ನಗರ್ ಮತ್ತು ದಾಂಪುರ ವಿಧಾನಸಭೆ ಕ್ಷೇತ್ರಗಳಲ್ಲಿ ಉಪಚುನಾವಣೆ ನಡೆಯುತ್ತಿದೆ.

ಬೆಳಗ್ಗೆ 7ಗಂಟೆಯಿಂದ ಮತದಾನ ಆರಂಭವಾಗಿದ್ದು ಸಂಜೆ 5 ಗಂಟೆಯವರೆಗೂ ಮತದಾನ ನಡೆಯಲಿದೆ. ಎಲ್ಲ ಕಡೆ ಪೊಲೀಸ್‌ ಬಿಗಿಭದ್ರತೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಅಲ್ಲಲ್ಲಿ ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿದರೆ ಮತದಾನ ಶಾಂತಿಯುತವಾಗಿ ನಡೆಯುತ್ತಿದ್ದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ, ಈ ಎಲ್ಲ ಕ್ಷೇತ್ರಗಳ ಉಪಚುನಾವಣೆ ಫಲಿತಾಂಶ ಸೆ. 8ರಂದು ಪ್ರಕಟವಾಗಲಿದೆ.

ಇತ್ತೀಗಷ್ಟೇ ಮೈತ್ರಿಕೂಟ ರಚಿಸುವ ಮೂಲಕ ಬಿಜೆಪಿ ವಿರುದ್ಧ ಬಲ ಪ್ರದರ್ಶನಕ್ಕೆ ಸಜ್ಜಾಗಿರುವ ವಿರೋಧ ಪಕ್ಷಗಳ ಐಎನ್‌ಡಿಐಎ ಬಣಕ್ಕೆ ಮೊದಲ ಪರೀಕ್ಷೆ ಎದುರಾಗಿದೆ. ಆರು ರಾಜ್ಯಗಳಲ್ಲಿ ವಿಪಕ್ಷ ಮೈತ್ರಿಕೂಟ ಹಾಗೂ ಬಿಜೆಪಿ ನೇತೃತ್ವದ ಎನ್‌ಡಿಎ ಬಣಗಳ ನಡುವಿನ ಚುನಾವಣಾ ಕದನ ಶುರುವಾಗಿದೆ.

ಮುಂಬರುವ ಲೋಕಸಭೆ ಅಖಾಡದಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರವನ್ನು ಉರುಳಿಸಲು ಪಣತೊಟ್ಟು 'ಸಾಧ್ಯವಾದಷ್ಟು ಒಗ್ಗಟ್ಟಿನಿಂದ' ಚುನಾವಣೆಗಳನ್ನು ಎದುರಿಸಲು ವಿರೋಧ ಪಕ್ಷಗಳು ಸೇರಿ ಭಾರತ ರಾಷ್ಟ್ರೀಯ ಅಭಿವೃದ್ಧಿ ಒಳಗೊಳ್ಳುವಿಕೆಯ ಮೈತ್ರಿಕೂಟ (ಐಎನ್‌ಡಿಐಎ) ರಚಿಸಿದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ.

ಘೋಸಿ ವಿಧಾನಸಭಾ ಉಪಚುನಾವಣೆಯ ಮತದಾನ ಮಂಗಳವಾರ ಬೆಳಗ್ಗೆ 7 ಗಂಟೆಗೆ ಆರಂಭವಾಯಿತು. 455 ಮತಗಟ್ಟೆಗಳಲ್ಲಿ ಮತದಾನ ನಡೆಯುತ್ತಿದ್ದು, ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com