ಎಸ್‌ಪಿಜಿ ಮುಖ್ಯಸ್ಥ ಅರುಣ್ ಕುಮಾರ್ ಸಿನ್ಹಾ ನಿಧನ

ವಿಶೇಷ ಭದ್ರತಾ ಪಡೆ(ಎಸ್‌ಪಿಜಿ) ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ ಅವರು ಬುಧವಾರ ಗುರುಗ್ರಾಮ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.
ಅರುಣ್ ಕುಮಾರ್
ಅರುಣ್ ಕುಮಾರ್

ನವದೆಹಲಿ: ವಿಶೇಷ ಭದ್ರತಾ ಪಡೆ(ಎಸ್‌ಪಿಜಿ) ನಿರ್ದೇಶಕ ಅರುಣ್ ಕುಮಾರ್ ಸಿನ್ಹಾ ಅವರು ಬುಧವಾರ ಗುರುಗ್ರಾಮ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಅವರಿಗೆ 61 ವರ್ಷ ವಯಸ್ಸಾಗಿತ್ತು.

1987ರ ಬ್ಯಾಚ್‌ನ ಕೇರಳ ಕೇಡರ್‌ನ ಐಪಿಎಸ್ ಅಧಿಕಾರಿ ಸಿನ್ಹಾ ಅವರು ಕಳೆದ ಮೇ 31 ರಂದು ನಿವೃತ್ತಿಯಾಗಿದ್ದು, ಅವರ ಸೇವೆಯನ್ನು ಒಂದು ವರ್ಷ ವಿಸ್ತರಿಸಲಾಗಿತ್ತು.

ಯಕೃತ್ತು ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಸಿನ್ಹಾ ಅವರನ್ನು ಕೆಲವು ದಿನಗಳ ಹಿಂದೆ ಚಿಕಿತ್ಸೆಗಾಗಿ ಗುರುಗ್ರಾಮ್‌ನ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ.

ಅರುಣ್ ಕುಮಾರ್ ಸಿನ್ಹಾ ಅವರು 2016 ರಿಂದ ಎಸ್‌ಪಿಜಿ ಮುಖ್ಯಸ್ಥರಾಗಿ ಸೇವೆ ಸಲ್ಲಿಸುತ್ತಿದ್ದರು. ಪ್ರಧಾನಿ ನರೇಂದ್ರ ಮೋದಿ ಮತ್ತು ಮಾಜಿ ಪ್ರಧಾನಿಗಳ ಭದ್ರತೆಯ ಉಸ್ತುವಾರಿ ವಹಿಸಿಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com