ಧಾರ್ಮಿಕ ಮತಾಂತರ ನಿಲ್ಲಿಸಲು ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ: ಸುಪ್ರೀಂ ಕೋರ್ಟ್ ವಜಾ

ದೇಶದಲ್ಲಿ ನಡೆಯುವ ವಂಚನೆಯ ಧಾರ್ಮಿಕ ಮತಾಂತರಗಳನ್ನು ತಡೆಯಲು ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ದೇಶದಲ್ಲಿ ನಡೆಯುವ ವಂಚನೆಯ ಧಾರ್ಮಿಕ ಮತಾಂತರಗಳನ್ನು ತಡೆಯಲು ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ನಿರಾಕರಿಸಿದೆ.

ನ್ಯಾಯಾಲಯವು ಈ ವಿಷಯದಲ್ಲಿ ಏಕೆ ಮಧ್ಯೆ ಪ್ರವೇಶಿಸಬೇಕು ನ್ಯಾಯಾಲಯವು ಸರ್ಕಾರಕ್ಕೆ ಸುಗ್ರೀವಾಜ್ಞೆ ನೀಡಲು ಹೇಗೆ ಸಾಧ್ಯ ಎಂದು ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆ ಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠ ಹೇಳಿದೆ.

ಕರ್ನಾಟಕ ಮೂಲದ ಸಾರ್ವಜನಿಕ ಹಿತಾಸಕ್ತಿ ಅರ್ಜಿದಾರ ಜೆರೋಮ್ ಆಂಟೊ ಪರ ವಕೀಲರು, ಹಿಂದೂಗಳು ಮತ್ತು ಅಪ್ರಾಪ್ತರನ್ನು ಗುರಿಯಾಗಿಸಿಕೊಂಡು ಅವರನ್ನು ಮೋಸದಿಂದ ಮತಾಂತರ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.

ಈ ವಿಚಾರದಲ್ಲಿ ತಕ್ಷಣದ ಕಣ್ಣಮುಂದಿರುವ ಪ್ರಕರಣವಿದ್ದರೆ ಮತ್ತು ಯಾರನ್ನಾದರೂ ಮತಾಂತರ ಶಿಕ್ಷೆಗೆ ಗುರಿಪಡಿಸಿದ್ದರೆ ನಾವು ಅರ್ಜಿ ವಿಚಾರಣೆ ನಡೆಸಬಹುದು ಎಂದು ಪಿಐಎಲ್ ವಜಾಗೊಳಿಸಿ ಸುಪ್ರೀಂ ಕೋರ್ಟ್ ಹೇಳಿದೆ. ಇದು ಯಾವ ರೀತಿಯ ಪಿಐಎಲ್, ಪಿಐಎಲ್ ಒಂದು ಅಸ್ತ್ರವಾಗಿ ಮಾರ್ಪಟ್ಟಿದೆ, ಪ್ರತಿಯೊಬ್ಬರೂ ಪಿಐಎಲ್ ನೊಂದಿಗೆ ಕೋರ್ಟ್ ಗೆ ಬರುತ್ತಾರೆ" ಎಂದು ಛೀಮಾರಿ ಹಾಕಿದೆ.

ಹಾಗಾದರೆ ಅರ್ಜಿದಾರರು ಈ ರೀತಿಯ ಕುಂದುಕೊರತೆಗಳನ್ನು ಎಲ್ಲಿಗೆ ತೆಗೆದುಕೊಂಡು ಹೋಗಬೇಕು ಎಂದು ಕೇಳಿದಾಗ, ನಾವು ಸಲಹೆ ನೀಡುವ ವ್ಯಾಪ್ತಿಯಲ್ಲಿಲ್ಲ ಎಂದು ಹೇಳಿ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com