ರಾಜಭವನದಲ್ಲಿ ಪ್ರತಿಭಟನೆ ನಡೆಸಲು ಮಮತಾಗೆ ಸ್ವಾಗತ: ಬಂಗಾಳ ರಾಜ್ಯಪಾಲ

ಪಶ್ಚಿಮ ಬಂಗಾಳ ರಾಜಭವನದ ಎದುರು ಪ್ರತಿಭಟನೆ ನಡೆಸಲು ಮಮತಾ ಬ್ಯಾನರ್ಜಿ ಅವರಿಗೆ ಸ್ವಾಗತವಿದೆ ಎಂದು ರಾಜ್ಯಪಾಲ ಸಿವಿ ಆನಂದ್ ಬೋಸ್ ಹೇಳಿದ್ದಾರೆ. 
ಬಂಗಾಳ ರಾಜ್ಯಪಾಲ- ಮಮತಾ ಬ್ಯಾನರ್ಜಿ
ಬಂಗಾಳ ರಾಜ್ಯಪಾಲ- ಮಮತಾ ಬ್ಯಾನರ್ಜಿ

ಕೋಲ್ಕತ್ತ: ಪಶ್ಚಿಮ ಬಂಗಾಳ ರಾಜಭವನದ ಎದುರು ಪ್ರತಿಭಟನೆ ನಡೆಸಲು ಮಮತಾ ಬ್ಯಾನರ್ಜಿ ಅವರಿಗೆ ಸ್ವಾಗತವಿದೆ ಎಂದು ರಾಜ್ಯಪಾಲ ಸಿವಿ ಆನಂದ್ ಬೋಸ್ ಹೇಳಿದ್ದಾರೆ. 

ರಾಜ್ಯದ ವಿಶ್ವವಿದ್ಯಾನಿಲಯಗಳಲ್ಲಿ ರಾಜ್ಯಪಾಲರ ಹಸ್ತಕ್ಷೇಪವನ್ನು ವಿರೋಧಿಸಿ ರಾಜಭವನದ ಎದುರು ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ರಾಜ್ಯಪಾಲರು, ರಾಜಭವನದ ಆವರಣದಲ್ಲಿ ಎಲ್ಲಿ ಬೇಕಾದರೂ ಪ್ರತಿಭಟನೆ ನಡೆಸಬಹುದು ಆದರೆ ರಾಜಭವನದ ಎದುರು ಮಾಡುವಂತಿಲ್ಲ ಸಿಎಂ ಬ್ಯಾನರ್ಜಿ ಅವರನ್ನು ಸ್ವಾಗತಿಸುತ್ತೇನೆ ಎಂದು ಹೇಳಿದ್ದಾರೆ. 

ಸಿಎಂ ನನ್ನ ಗೌರವಾನ್ವಿತ ಸಹೋದ್ಯೋಗಿಯಾಗಿದ್ದಾರೆ. ಅವರಿಗೆ ರಾಜಭವನಕ್ಕೆ ಸ್ವಾಗತವಿದೆ. ರಾಜಭವನದಲ್ಲಿ ಪ್ರತಿಭಟನೆ ನಡೆಸಲು ಗೌರವಾನ್ವಿತ ಅತಿಥಿಯಾಗಿ ಆಗಮಿಸಿ ಪ್ರತಿಭಟನೆ ನಡೆಸಬಹುದು ಎಂದು ಬೋಸ್ ಹೇಳಿದ್ದಾರೆ. 

ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ 16 ವಿವಿಗಳಿಗೆ ಉಪಕುಲಪತಿಗಳನ್ನು ನೇಮಕ ಮಾಡಿದ್ದರು. ಇದನ್ನು ವಿರೋಧಿಸಿ ಮಮತಾ ಬ್ಯಾನರ್ಜಿ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದ್ದರು. 

ವಿವಿಗಳಲ್ಲಿನ ಹಿಂಸಾಚಾರ, ಭ್ರಷ್ಟಾಚಾರ ನಿರ್ಮೂಲನೆಗಾಗಿ ಹೋರಾಟ- ರಾಜ್ಯಪಾಲರು 

ಇನ್ನು ರಾಜ್ಯಪಾಲರು ತಮ್ಮ ನಡೆಯನ್ನು ಸಮರ್ಥಿಸಿಕೊಂಡಿದ್ದು, ರಾಜ್ಯಾದ್ಯಂತ ಇರುವ ವಿವಿಗಳಲ್ಲಿನ ಹಿಂಸಾಚಾರ, ಭ್ರಷ್ಟಾಚಾರಗಳ ನಿರ್ಮೂಲನೆಗಾಗಿ ಹೋರಾಟ ಮಾಡುವುದಾಗಿ ರಾಜ್ಯಪಾಲರು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com