ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮರಾಠಾ ಸಮುದಾಯಕ್ಕೆ ಮೀಸಲಾತಿ: ನಾನಾ ಪಟೋಲೆ

ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮರಾಠ ಸಮುದಾಯಕ್ಕೆ ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಹೆಚ್ಚಿಸುವ ಮೂಲಕ ಮೀಸಲಾತಿ ಕಲ್ಪಿಸಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ...
ನಾನಾ ಪಟೋಲೆ
ನಾನಾ ಪಟೋಲೆ

ನಾಗ್‌ಪುರ: ಮುಂದಿನ ಚುನಾವಣೆಯಲ್ಲಿ ರಾಜ್ಯದಲ್ಲಿ ಮತ್ತು ಕೇಂದ್ರದಲ್ಲಿ ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಮರಾಠ ಸಮುದಾಯಕ್ಕೆ ಶೇ. 50ರಷ್ಟು ಮೀಸಲಾತಿ ಮಿತಿಯನ್ನು ಹೆಚ್ಚಿಸುವ ಮೂಲಕ ಮೀಸಲಾತಿ ಕಲ್ಪಿಸಲಾಗುವುದು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಅವರು ಗುರುವಾರ ಹೇಳಿದ್ದಾರೆ.

ಕಾಂಗ್ರೆಸ್‌ನ ಜನಸಂವಾದ ಯಾತ್ರೆಯ ಹಿನ್ನೆಲೆಯಲ್ಲಿ ಇಂದು ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪಟೋಲೆ ಅವರು, ಮೀಸಲಾತಿ ಸಮಸ್ಯೆಗೆ ಶಾಶ್ವತ ಪರಿಹಾರ ನೀಡಲು ಜಾತಿವಾರು ಜನಗಣತಿಯೊಂದೇ ಪರಿಹಾರ ಎಂದು ಹೇಳಿದ್ದಾರೆ.

ಮರಾಠಾ ಮೀಸಲಾತಿ ವಿಚಾರವಾಗಿ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಪಟೋಲೆ ಅವರು, ''ಸಮಾಜದ ಎಲ್ಲಾ ವರ್ಗದವರಿಗೂ ಮೀಸಲಾತಿ ಒದಗಿಸಲು ಮತ್ತು ನ್ಯಾಯ ದೊರಕಿಸಲು, ಶಾಶ್ವತ ಪರಿಹಾರಕ್ಕೆ ಜಾತಿ ಆಧಾರಿತ ಜನಗಣತಿಯೊಂದೇ ಏಕೈಕ ಮಾರ್ಗ ಎಂದರು.

ಹಿಂದಿನ ಪ್ರಧಾನಿ ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರ ಈ ಅಂಶದ ಮೇಲೆ ಕೆಲಸ ಮಾಡಿದೆ ಮತ್ತು 2011 ರಲ್ಲಿ ಜನಗಣತಿಯನ್ನು ನಡೆಸಲಾಯಿತು. ಆದರೆ, 2014 ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ, ಅದು ಜಾತಿ ಆಧಾರಿತ ಜನಗಣತಿಯನ್ನು ಮುಂದಕ್ಕೆ ಕೊಂಡೊಯ್ಯಲಿಲ್ಲ. ಅಂದರೆ ಭಾರತೀಯ ಜನತಾ ಪಕ್ಷ(ಬಿಜೆಪಿ) ಅದನ್ನು ಒಪ್ಪಿಕೊಳ್ಳಲಿಲ್ಲ’’ ಎಂದು ಆರೋಪಿಸಿದರು.

"ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದರೆ ಮರಾಠರಿಗೆ ಮೀಸಲಾತಿ ನೀಡುವುದಾಗಿ 2014ರ ಚುನಾವಣೆಯ ಸಂದರ್ಭದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಭರವಸೆ ನೀಡಿದ್ದರು. ಅಲ್ಲದೆ ಅವರು ಧಂಗರ್(ಕುರುಬ) ಸಮುದಾಯಕ್ಕೆ ಕೋಟಾದ ಭರವಸೆ ನೀಡಿದ್ದರು. ಆದರೆ ಇದುವರೆಗೂ ಭರವಸೆ ಈಡೇರಿಸಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com