ಬೈಬಲ್ ಹಂಚುವುದು ಮತಾಂತರಕ್ಕೆ ಆಮಿಷವಲ್ಲ: ಅಲಹಾಬಾದ್ ಹೈಕೋರ್ಟ್

ಬೈಬಲ್‌ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ನವದೆಹಲಿ: ಬೈಬಲ್‌ಗಳನ್ನು ವಿತರಿಸುವುದು ಮತ್ತು ಉತ್ತಮ ಶಿಕ್ಷಣ ನೀಡುವುದನ್ನು ಮತಾಂತರಕ್ಕೆ ಪ್ರೇರಣೆ ಎಂದು ಹೇಳಲಾಗದು. ಇದು ಉತ್ತರ ಪ್ರದೇಶದ ಕಾನೂನುಬಾಹಿರ ಮತಾಂತರ ನಿಷೇಧ ಕಾಯಿದೆಯಡಿ ಅಪರಾಧ ಎಂದು ಕರೆಯಲು ಬರುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಜನರನ್ನು ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳಿಸುವಂತೆ ಆಮಿಷ ಒಡ್ಡುತ್ತಿದ್ದಾರೆ ಎಂದು ಇಬ್ಬರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಹೈಕೋರ್ಟ್ ಇಬ್ಬರು ಆರೋಪಿಗಳಿಗೆ ಜಾಮೀನು ನೀಡಿದೆ.

ಕೆಳ ನ್ಯಾಯಾಲಯ ಆರೋಪಿಗಳಿಗೆ ಜಾಮೀನು ತಿರಸ್ಕರಿಸಿತ್ತು. ಈ ಸಂಬಂಧ ಜೋಸ್ ಪಾಪಚೆನ್ ಮತ್ತು ಶೀಜಾ ಅವರ ಮೇಲ್ಮನವಿಯನ್ನು ನ್ಯಾಯಮೂರ್ತಿ ಶಮೀಮ್ ಅಹ್ಮದ್ ಅವರ ಪೀಠವು ಅಂಗೀಕರಿಸಿತು. ಅಂಬೇಡ್ಕರ್ ನಗರ ಜಿಲ್ಲೆಯ ಬಿಜೆಪಿ ಪದಾಧಿಕಾರಿಯೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಜನವರಿ 24 ರಂದು ಪೊಲೀಸರು ಎಫ್‌ಐಆರ್ ದಾಖಲಿಸಿದ ನಂತರ ಮೇಲ್ಮನವಿದಾರರನ್ನು ಜೈಲಿಗೆ ಕಳುಹಿಸಲಾಯಿತು.

ಇಬ್ಬರೂ ಆರೋಪಿಗಳು ಪರಿಶಿಷ್ಟ ಜಾತಿ ಮತ್ತು ಪಂಗಡದ ಜನರಿಗೆ ಕ್ರಿಶ್ಚಿಯನ್ ಧರ್ಮಕ್ಕೆ ಮತಾಂತರಗೊಳ್ಳಲು ಆಮಿಷ ಒಡ್ಡುತ್ತಿದ್ದಾರೆ ಎಂದು ಬಿಜೆಪಿ ನಾಯಕ ಆರೋಪಿಸಿದ್ದರು.

ನ್ಯಾಯಮೂರ್ತಿ ಅಹ್ಮದ್ ಅವರು, 'ಬೋಧನೆ ನೀಡುವುದು, ಬೈಬಲ್ ವಿತರಣೆ, ಶಿಕ್ಷಣಕ್ಕಾಗಿ ಮಕ್ಕಳನ್ನು ಪ್ರೋತ್ಸಾಹಿಸುವುದು, ಗ್ರಾಮಸ್ಥರ ಸಭೆಗಳನ್ನು ಆಯೋಜಿಸುವುದು, ವಿವಾದ ಮಾಡದಂತೆ ಮತ್ತು ಮದ್ಯಪಾನ ಮಾಡದಂತೆ ಗ್ರಾಮಸ್ಥರಿಗೆ ಸೂಚನೆ ನೀಡುವುದು ಅಪರಾಧವಲ್ಲ ಎಂದು ಪೀಠ ಹೇಳಿದೆ.

ಪ್ರಕರಣದಲ್ಲಿ ಸಂತ್ರಸ್ತೆ ಅಥವಾ ಅವರ ಕುಟುಂಬದವರು ಮಾತ್ರ ಎಫ್‌ಐಆರ್ ದಾಖಲಿಸಲು ಕಾಯಿದೆಯಲ್ಲಿ ಅವಕಾಶವಿದೆ ಎಂದು ಪೀಠವು ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com