ಜಿ-20 ಶೃಂಗಸಭೆ ಔತಣಕೂಟದಲ್ಲಿ ಪಾಲ್ಗೊಳ್ಳುತ್ತಿಲ್ಲ: ಹೆಚ್.ಡಿ. ದೇವೇಗೌಡ

ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಹಾಗೂ ಹೆಚ್. ಡಿ. ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಆರೋಗ್ಯದ ಕಾರಣದಿಂದ ಜಿ20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ ಶುಕ್ರವಾರ ಹೇಳಿದ್ದಾರೆ. 
ಹೆಚ್ ಡಿ ದೇವೇಗೌಡ
ಹೆಚ್ ಡಿ ದೇವೇಗೌಡ

ಬೆಂಗಳೂರು: ರಾಷ್ಟ್ರಪತಿ ದ್ರೌಪದಿ ಮುರ್ಮು ನಾಳೆ ಆಯೋಜಿಸಿರುವ ಜಿ-20 ಶೃಂಗಸಭೆಯ ಔತಣಕೂಟಕ್ಕೆ ಮಾಜಿ ಪ್ರಧಾನಿಗಳಾದ ಮನಮೋಹನ್ ಸಿಂಗ್ ಹಾಗೂ ಹೆಚ್. ಡಿ. ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿತ್ತು. ಆದರೆ, ಆರೋಗ್ಯದ ಕಾರಣದಿಂದ ಜಿ20 ಔತಣಕೂಟದಲ್ಲಿ ಭಾಗವಹಿಸುವುದಿಲ್ಲ ಎಂದು ಅವರು ಶುಕ್ರವಾರ ಹೇಳಿದ್ದಾರೆ. 

ಹೈ-ಪ್ರೊಫೈಲ್ ಔತಣಕೂಟಕ್ಕೆ ಆಹ್ವಾನಿತರಾಗಿರುವ ದೇವೇಗೌಡರು, ತಮ್ಮ ನಿರ್ಧಾರವನ್ನು ಸರ್ಕಾರಕ್ಕೆ ತಿಳಿಸಿದ್ದು, ಜಿ20 ಶೃಂಗಸಭೆ ಯಶಸ್ವಿಯಾಗಲಿ ಎಂದು ಹಾರೈಸಿದ್ದಾರೆ. ಈ ಕುರಿತು ಎಕ್ಸ್ ನಲ್ಲಿ ಅವರು ಮಾಹಿತಿ ನೀಡಿದ್ದಾರೆ. 

ಭಾರತದ ಅಧ್ಯಕ್ಷತೆಯಲ್ಲಿ ನಡೆಯಲಿರುವ ಜಿ-20 ಶೃಂಗಸಭೆಯಲ್ಲಿ ಭಾಗವಹಿಸಲು ವಿಶ್ವದಾದ್ಯಂತ ಗಣ್ಯರು ದೆಹಲಿಗೆ ಆಗಮಿಸಲು ಪ್ರಾರಂಭಿಸಿದ್ದಾರೆ. 

ಜಿ20 ಶೃಂಗಸಭೆ ನಿಮಿತ್ತ ಸೆಪ್ಟೆಂಬರ್ 9ರಂದು ರಾಷ್ಟ್ರಪತಿ ಭವನದಲ್ಲಿ ಆಯೋಜಿಸಿರುವ ಔತಣಕೂಟಕ್ಕೆಂದು ಕಳುಹಿಸಿರುವ ಆಹ್ವಾನ ಪತ್ರಿಕೆಯಲ್ಲಿ ರಾಷ್ಟ್ರಪತಿಯನ್ನು 'ಪ್ರೆಸಿಡೆಂಟ್ ಆಫ್ ಇಂಡಿಯಾ' ಬದಲಿಗೆ 'ಪ್ರೆಸಿಡೆಂಟ್ ಆಫ್ ಭಾರತ್' ಎಂದು ಉಲ್ಲೇಖಿಸಿದ ನಂತರ ದೇಶಾದ್ಯಂತ ವ್ಯಾಪಕ ಚರ್ಚೆಯಾಗುತ್ತಿದ್ದು, ಪರ ಹಾಗೂ ವಿರುದ್ಧವಾದ ಅಭಿಪ್ರಾಯಗಳು ಕೇಳಿಬರುತ್ತಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com