ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಜೊತೆಗಿನ ದ್ವಿಪಕ್ಷೀಯ ಮಾತುಕತೆ ಅತ್ಯಂತ ಫಲಪ್ರದವಾಗಿತ್ತು: ಪ್ರಧಾನಿ ಮೋದಿ

ಜಿ 20 ಶೃಂಗಸಭೆಯ ಅಂತಿಮ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಔತಣಕೂಟ ಆಯೋಜನೆ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಲವು ವಿಚಾರಗಳು ಕುರಿತು ಉಭಯ ದೇಶಗಳ ನಾಯಕರು ಚರ್ಚೆ ನಡೆಸಿದ್ದಾರೆ.
ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ
ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್ ಅವರೊಂದಿಗೆ ಪ್ರಧಾನಿ ಮೋದಿ ಮಾತುಕತೆ

ನವದೆಹಲಿ: ಜಿ 20 ಶೃಂಗಸಭೆಯ ಅಂತಿಮ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ಔತಣಕೂಟ ಆಯೋಜನೆ ಜೊತೆಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಹಲವು ವಿಚಾರಗಳು ಕುರಿತು ಉಭಯ ದೇಶಗಳ ನಾಯಕರು ಚರ್ಚೆ ನಡೆಸಿದ್ದಾರೆ.

ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ನೀಡಿರುವ ಪ್ರಧಾನಿ ಮೋದಿ, ಫ್ರೆಂಚ್ ಅಧ್ಯಕ್ಷ ಮ್ಯಾಕ್ರೋನ್ ಅವರೊಂದಿಗಿನ ದ್ವಿಪಕ್ಷೀಯ ಮಾತುಕತೆ ಅತ್ಯಂತ ಫಲಪ್ರದವಾಗಿತ್ತು. ಅನೇಕ ವಿಚಾರಗಳ ಕುರಿತು ಚರ್ಚಿಸಿದ್ದೇವೆ. ಅಲ್ಲದೇ, ಭಾರತ-ಫ್ರಾನ್ಸ್ ಸಂಬಂಧಗಳನ್ನು ಹೊಸ ಎತ್ತರಕ್ಕೆ ಕೊಂಡೊಯ್ಯಲು ಎದುರು ನೋಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. 

ಮತ್ತೊಂದೆಡೆ ಪ್ರತಿಕ್ರಿಯಿಸಿರುವ ಮ್ಯಾಕ್ರೋನ್ , ಜಾಗತಿಕ ಆಡಳಿತ ಆಳವಾದ ಸುಧಾರಣೆಗೆ ಬೆಂಬಲಿಸುತ್ತೇವೆ. ಭದ್ರತಾ ಮಂಡಳಿ, ವಿಶ್ವಬ್ಯಾಂಕ್ ಮತ್ತು ಐಎಂಎಫ್  ಜನಸಂಖ್ಯೆ ಮತ್ತು ಆರ್ಥಿಕತೆಯ ವಿಷಯದಲ್ಲಿ ಇಂದಿನ ವಾಸ್ತವತೆಯನ್ನು ಪ್ರತಿಬಿಂಬಿಸಬೇಕು. ತದನಂತರ ಲಭ್ಯವಿರುವ ಸಾಧನಗಳನ್ನು ಹೆಚ್ಚಿಸಲು ಬಯಸುತ್ತೇವೆ. ಆದ್ದರಿಂದ ಅಭಿವೃದ್ಧಿ ಶೀಲ ದೇಶಗಳು ಹೆಚ್ಚಿನ ಪಾತ್ರ  ವಹಿಸುತ್ತವೆ ಎಂದು ತಿಳಿಸಿದ್ದಾರೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com