'ಹೆಮ್ಮೆಯ ಹಿಂದೂ' ಬ್ರಿಟನ್ ಪ್ರಧಾನಿ ರಿಷಿ ಸುನಕ್ ಪತ್ನಿ ಜೊತೆಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ

ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರು ಇಂದು ಭಾನುವಾರ ಬೆಳ್ಳಂಬೆಳಗ್ಗೆಯೇ ಜಿ20 ಶೃಂಗಸಭೆ ಮುಂದುವರಿಯುವಿಕೆಗೆ ಮುನ್ನವೇ ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೂಡಿ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಪೂಜೆ ಸಲ್ಲಿಸಿದರು.
ಅಕ್ಷರಧಾಮ ದೇವಸ್ಥಾನದಲ್ಲಿ ಪತ್ನಿ ಅಕ್ಷತಾ ಜೊತೆ ಬ್ರಿಟನ್ ಪ್ರಧಾನಿ ರಿಷಿ ಸುನಕ
ಅಕ್ಷರಧಾಮ ದೇವಸ್ಥಾನದಲ್ಲಿ ಪತ್ನಿ ಅಕ್ಷತಾ ಜೊತೆ ಬ್ರಿಟನ್ ಪ್ರಧಾನಿ ರಿಷಿ ಸುನಕ

ನವದೆಹಲಿ: ಇಂಗ್ಲೆಂಡ್ ಪ್ರಧಾನಿ ರಿಷಿ ಸುನಕ್ ಅವರು ಇಂದು ಭಾನುವಾರ ಬೆಳ್ಳಂಬೆಳಗ್ಗೆಯೇ ಜಿ20 ಶೃಂಗಸಭೆ ಮುಂದುವರಿಯುವಿಕೆಗೆ ಮುನ್ನವೇ ತಮ್ಮ ಪತ್ನಿ ಅಕ್ಷತಾ ಮೂರ್ತಿ ಜೊತೆಗೂಡಿ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ತೆರಳಿ ಪ್ರಾರ್ಥನೆ ಪೂಜೆ ಸಲ್ಲಿಸಿದರು.

ದೇವಾಲಯದಲ್ಲಿ ಪ್ರಾರ್ಥನೆ, ಪೂಜೆ ಸಲ್ಲಿಸಿದ ನಂತರ ರಾಜ್ ಘಾಟ್ ಗೆ ತೆರಳಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ನಮನ ಸಲ್ಲಿಸಿದರು.ಸುನಕ್ ಅವರ ಭೇಟಿಯ ಹಿನ್ನೆಲೆಯಲ್ಲಿ ವಿಸ್ತಾರವಾದ ಭದ್ರತಾ ವ್ಯವಸ್ಥೆಗಳನ್ನು ಮಾಡಲಾಗಿದೆ.

ಎರಡು ದಿನಗಳ G20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಸುನಕ್ ಅವರು ತಮ್ಮ ಪತ್ನಿ ಅಕ್ಷತಾ ಮೂರ್ತಿ ಅವರೊಂದಿಗೆ ಭಾರತಕ್ಕೆ ಬಂದಿದ್ದಾರೆ.ಕಳೆದ ವರ್ಷ ಅಕ್ಟೋಬರ್‌ನಲ್ಲಿ ಯುಕೆ ಪ್ರಧಾನ ಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ರಿಷಿ ಸುನಕ್ ಅವರು ಪ್ರಧಾನಿಯಾಗಿ ಭಾರತಕ್ಕೆ ನೀಡಿದ ಮೊದಲ ಭೇಟಿ ಇದಾಗಿದೆ.

ಬ್ರಿಟನ್ ಪ್ರಧಾನಿ ರಿಷಿ ಸುನಕ್ ಅವರು ಅಕ್ಷರಧಾಮ ದೇವಾಲಯಕ್ಕೆ ಭೇಟಿ ನೀಡಿದ ಕುರಿತು ಅಕ್ಷರಧಾಮ ದೇವಾಲಯದ ನಿರ್ದೇಶಕ ಜ್ಯೋತಿಂದ್ರ ದವೆ ಸುದ್ದಿ ಮಾಧ್ಯಮಗಳೊಂದಿಗೆ ಮಾತನಾಡಿ, ಅವರ ಅನುಭವ ಅಸಾಧಾರಣವಾಗಿತ್ತು. ಅವರು ಬಹಳ ನಂಬಿಕೆಯಿಂದ ಪೂಜೆ ಮತ್ತು ಆರತಿಯನ್ನು ಮಾಡಿದರು. ನಾವು ಅವರಿಗೆ ದೇವಾಲಯವನ್ನು ತೋರಿಸಿದ್ದೇವೆ. ನಂತರ ದೇವಸ್ಥಾನದ ಮಾದರಿಯನ್ನು ಉಡುಗೊರೆಯಾಗಿ ನೀಡಿದೆವು. ಅವರು ಇಲ್ಲಿ ಪ್ರತಿ ನಿಮಿಷವನ್ನು ಆನಂದಿಸಿದರು. ಅವರ ಪತ್ನಿ ಅಕ್ಷತಾ ಮೂರ್ತಿ ಸಹ ಖುಷಿಪಟ್ಟರು ಎಂದರು.

ಜಿ 20 ಸಭೆಯ ಮೊದಲು, ರಿಷಿ ಸುನಕ್ ಅವರು ಜಿ 20 ಶೃಂಗಸಭೆಗೆ ಭಾರತಕ್ಕೆ ಬಂದಿಳಿದ ಸಂದರ್ಭದಲ್ಲಿ, ನಾನೊಬ್ಬ ಹೆಮ್ಮೆಯ ಹಿಂದೂ. ನಾನು ಹೇಗೆ ಬೆಳೆದೆ, ನಾನು ಹಾಗೇ ಇದ್ದೇನೆ. ಮುಂದಿನ ಒಂದೆರಡು ದಿನ ಇಲ್ಲಿರುವಾಗ ಮಂದಿರಕ್ಕೆ ಭೇಟಿ ನೀಡಬೇಕೆಂದಿದ್ದೇನೆ. ನಾವು ರಕ್ಷಾಬಂಧನವನ್ನು ಆಚರಿಸುತ್ತೇವೆ. ಕೃಷ್ಣ ಜನ್ಮಾಷ್ಠಮಿಯನ್ನು ಆಚರಿಸುತ್ತೇವೆ, ಆದರೆ ಈ ಬಾರಿ ಕೆಲಸದ ಒತ್ತಡದಿಂದ ಆಚರಿಸಲು ಸಾಧ್ಯವಾಗಲಿಲ್ಲ, ಹೀಗಾಗಿ ದೇವಾಲಯಕ್ಕೆ ಭೇಟಿ ನೀಡಿ ಸರಿದೂಗಿಸುತ್ತೇವೆ ಎಂದಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com