ಮುಂಬೈ-ಗುವಾಹಟಿ ಇಂಡಿಗೋ ವಿಮಾನದಲ್ಲಿ ಲೈಂಗಿಕ ಕಿರುಕುಳ: ಪ್ರಯಾಣಿಕನ ವಿರುದ್ಧ ಕೇಸ್ ದಾಖಲು

ಇಂಡಿಗೋದ ವಿಮಾನದಲ್ಲಿ ಮುಂಬೈನಿಂದ ಗುವಾಹಟಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಸಹ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗುವಾಹಟಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು...
ಇಂಡಿಗೋ ವಿಮಾನ
ಇಂಡಿಗೋ ವಿಮಾನ

ಮುಂಬೈ: ಇಂಡಿಗೋದ ವಿಮಾನದಲ್ಲಿ ಮುಂಬೈನಿಂದ ಗುವಾಹಟಿಗೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಸಹ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಗುವಾಹಟಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಸೋಮವಾರ ತಿಳಿಸಿದೆ.

ಪ್ರಯಾಣಿಕರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಸ್ಥಳೀಯ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಮತ್ತು ಅಗತ್ಯವಿದ್ದಾಗ ವಿಮಾನಯಾನ ಸಂಸ್ಥೆಯು ತನಿಖೆಗೆ ನೆರವು ನೀಡುತ್ತದೆ ಎಂದು ಇಂಡಿಗೋ ಪ್ರಕಟಣೆಯಲ್ಲಿ ತಿಳಿಸಿದೆ.

ಆದಾಗ್ಯೂ, ವಿಮಾನಯಾನ ಸಂಸ್ಥೆಯು ಘಟನೆಯ ಬಗ್ಗೆ ಯಾವುದೇ ನಿರ್ದಿಷ್ಟ ವಿವರಗಳನ್ನು ಹಂಚಿಕೊಂಡಿಲ್ಲ.

ಮುಂಬೈ-ಗುವಾಹಟಿ ಇಂಡಿಗೋ ವಿಮಾನ 6E- 5319 ರಲ್ಲಿ ಪ್ರಯಾಣಿಸುತ್ತಿದ್ದ ಪ್ರಯಾಣಿಕರೊಬ್ಬರನ್ನು ಮತ್ತೊಬ್ಬ ಪ್ರಯಾಣಿಕರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದ ನಂತರ ಆರೋಪಿಯನ್ನು ಗುವಾಹಟಿ ಪೊಲೀಸರಿಗೆ ಒಪ್ಪಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com