ದೆಹಲಿಯಲ್ಲಿ ಲೆಫ್ಟಿನೆಂಟ್ ಗೌರ್ನರ್ ಗೆ ಪರಮಾಧಿಕಾರ ಪ್ರಶ್ನಿಸಿ ಸಲ್ಲಿಸಿದ್ದ ಪಿಐಎಲ್ ವಿಚಾರಣೆಗೆ ಸುಪ್ರೀಂ ಕೋರ್ಟ್ ನಕಾರ

ದೆಹಲಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗಿಂತ ಲೆಫ್ಟಿನೆಂಟ್ ಗೌರ್ನರ್ ಗೆ ಪರಮಾಧಿಕಾರ ನೀಡಿರುವ ಕಾನೂನನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ಮಾಡಲು ನಿರಾಕರಸಿದೆ. 
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ನವದೆಹಲಿ: ದೆಹಲಿಯಲ್ಲಿ ಚುನಾಯಿತ ಪ್ರತಿನಿಧಿಗಳಿಗಿಂತ ಲೆಫ್ಟಿನೆಂಟ್ ಗೌರ್ನರ್ ಗೆ ಪರಮಾಧಿಕಾರ ನೀಡಿರುವ ಕಾನೂನನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ಮಾಡಲು ನಿರಾಕರಸಿದೆ. 

ಈಗಾಗಲೇ ದೆಹಲಿ ಸರ್ಕಾರ ಈ ಕುರಿತು ಅರ್ಜಿ ಸಲ್ಲಿಸಿದೆ. ಹೊಸ ಪಿಐಎಲ್ ನ ಅವಶ್ಯಕತೆ ಇಲ್ಲ ಎಂದು ಸಿಜೆಐ ಡಿವೈ ಚಂದ್ರಚೂಡ್ ಹಾಗೂ ನ್ಯಾ. ಪಿಎಸ್ ನರಸಿಂಹ, ನ್ಯಾ. ಮನೋಜ್ ಮಿಶ್ರಾ ಅವರಿದ್ದ ಪೀಠ ಹೇಳಿದೆ.

ಈಗಾಗಲೇ ದೆಹಲಿ ಸರ್ಕಾರ ಅರ್ಜಿ ಸಲ್ಲಿಸಿದೆ ಈಗ ನೀವೇಕೆ ಬಂದಿದ್ದು? ಎಂದು ಪ್ರಶ್ನಿಸಿ ಅರ್ಜಿದಾರರಿಗೆ ದಂಡ ಹಾಕುವುದನ್ನು ಪರಿಗಣಿಸುವುದಾಗಿ ಕೋರ್ಟ್ ಹೇಳಿದ್ದು, ಅರ್ಜಿದಾರರಾದ ವಕೀಲ ಮುಖೇಶ್ ಕುಮಾರ್ ಪಿಐಎಲ್ ನ್ನು ಹಿಂಪಡೆಯಲಾಗಿದೆ. 

ಕೇಂದ್ರ ಸರ್ಕಾರದ ಹೊಸ ಕಾನೂನನ್ನು ಪ್ರಶ್ನಿಸಿ ಆ.25 ರಂದು ದೆಹಲಿ ಸರ್ಕಾರದ ಅರ್ಜಿಯನ್ನು ಪರಿಗಣಿಸಿದ್ದ ಕೋರ್ಟ್ ವಿಚಾರಣೆ ನಡೆಸುವುದಾಗಿ ಹೇಳಿತ್ತು.

ದೆಹಲಿಯಲ್ಲಿ ವರ್ಗಾವಣೆ ಸೇರಿದಂತೆ ಅನೇಕ ಆಡಳಿತಾತ್ಮಕ ವಿಚಾರದಲ್ಲಿ ಕೇಂದ್ರ ಸರ್ಕಾರ ಚುನಾಯಿತ ಸರ್ಕಾರಕ್ಕಿಂತ ಲೆಫ್ಟಿನೆಂಟ್ ಗೌರ್ನರ್ ಗೆ ಹೆಚ್ಚಿನ ಅಧಿಕಾರ ನೀಡುವ ಸುಗ್ರೀವಾಜ್ಞೆಯನ್ನು ಮೇ.19 ರಂದು ಹೊರಡಿಸಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com