ಜಿ-20 ಸಭೆಗೆ ಮಮತಾ ಹೋಗಿದ್ದೇಕೆ?; ಗೊಂದಲದಲ್ಲಿ ಕಾಂಗ್ರೆಸ್!

ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜಿ-20 ಸಭೆಯ ಔತಣಕೂಟಕ್ಕೆ ಹೋಗಿದ್ದನ್ನು ಪ್ರಶ್ನಿಸಿದ್ದಾರೆ. 
ಮಮತಾ ಬ್ಯಾನರ್ಜಿ
ಮಮತಾ ಬ್ಯಾನರ್ಜಿ

ನವದೆಹಲಿ: ಹಿರಿಯ ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರು ಜಿ-20 ಸಭೆಯ ಔತಣಕೂಟಕ್ಕೆ ಹೋಗಿದ್ದನ್ನು ಪ್ರಶ್ನಿಸಿದ್ದಾರೆ. 

ಜಿ-20 ಸಭೆಯ ಹಿನ್ನೆಲೆಯಲ್ಲಿ ಆಯೋಜಿಸಲಾಗಿದ್ದ ಔತಣಕೂಟದಲ್ಲಿ ಮಮತಾ ಬ್ಯಾನರ್ಜಿ, ಬಿಹಾರ ಸಿಎಂ ನಿತೀಶ್ ಕುಮಾರ್ ಸೇರಿದಂತೆ ಇಂಡಿಯಾ ಮೈತ್ರಿಕೂಟದ ಅನೇಕ ನಾಯಕರು ಭಾಗಿಯಾಗಿದ್ದರು. 

ಮಮತಾ ಬ್ಯಾನರ್ಜಿ ಅವರು ಜಿ-20 ಔತಣಕೂಟದಲ್ಲಿ ಭಾಗಿಯಾಗಿರುವುದರಿಂದ ಮೋದಿ ಸರ್ಕಾರದ ವಿರುದ್ಧದ ಅವರ ನಿಲುವು ದುರ್ಬಲವಾಗುವುದಿಲ್ಲವೇ? ಎಂದು ಅಧೀರ್ ರಂಜನ್ ಚೌಧರಿ ಪ್ರಶ್ನಿಸಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆಯೋಜಿಸಿದ್ದ ಜಿ-20 ಔತಣಕೂಟದಲ್ಲಿ ಭಾಗಿಯಾಗುವುದಕ್ಕೆ ತೃಣಮೂಲ ಕಾಂಗ್ರೆಸ್ ಮುಖ್ಯಸ್ಥರಿಗೆ ಬೇರೆ ಯಾವುದಾದರೂ ಕಾರಣ ಇದೆಯೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕಾಂಗ್ರೆಸ್ ನ ಪ್ರಶ್ನೆಗೆ ತಿರುಗೇಟು ನೀಡಿರುವ ಟಿಎಂಸಿ, ಮಮತಾ ಬ್ಯಾನರ್ಜಿ, ಬಿಜೆಪಿ ವಿರೋಧಿ ಇಂಡಿಯಾ ಮೈತ್ರಿಕೂಟದ ಪ್ರಮುಖ ನಾಯಕರಾಗಿದ್ದಾರೆ. ಕಾಂಗ್ರೆಸ್ ನಾಯಕರು ಆಡಳಿತಾತ್ಮಕ ದೃಷ್ಟಿಯಿಂದ ಪಾಲಿಸಬೇಕಾದ ಶಿಷ್ಟಾಚಾರದ ಬಗ್ಗೆ ಮಮತಾ ಬ್ಯಾನರ್ಜಿಗೆ ಉಪನ್ಯಾಸ ನೀಡುವ ಅಗತ್ಯವಿಲ್ಲ ಎಂದು ಹೇಳಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com