ಲೋಕಸಭಾ ಚುನಾವಣೆ-2024: ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ನಡೆದಿದೆ; ಮೋದಿ, ಶಾ ನಿರ್ಧಾರ ಅಂತಿಮ- ಯಡಿಯೂರಪ್ಪ

ಲೋಕಸಭಾ ಚುನಾವಣೆ-2024 ಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ನಡೆದಿದೆ, ಮೋದಿ, ಅಮಿತ್ ಶಾ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.
ಬಿ.ಎಸ್ ಯಡಿಯೂರಪ್ಪ
ಬಿ.ಎಸ್ ಯಡಿಯೂರಪ್ಪ
Updated on: 

ನವದೆಹಲಿ: ಲೋಕಸಭಾ ಚುನಾವಣೆ-2024 ಕ್ಕೆ ಬಿಜೆಪಿ-ಜೆಡಿಎಸ್ ಮೈತ್ರಿ ಚರ್ಚೆ ನಡೆದಿದೆ, ಮೋದಿ, ಅಮಿತ್ ಶಾ ಈ ಬಗ್ಗೆ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಯಡಿಯೂರಪ್ಪ ಹೇಳಿದ್ದಾರೆ.

ನರೇಂದ್ರ ಮೋದಿ, ಅಮಿತ್ ಶಾ ಮನಸ್ಸಿನಲ್ಲೇನಿದೆ ಎಂಬುದು ನಮಗೆ ತಿಳಿದಿಲ್ಲ. ಚರ್ಚೆಗಳು ಇನ್ನೂ ನಡೆಯುತ್ತಿವೆ ಎಂದು ಮಾಧ್ಯಮಗಳ ಪ್ರಶ್ನೆಗೆ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಸ್ಥಾನ ಹಂಚಿಕೆ ಬಗ್ಗೆ ಚರ್ಚೆ ನಡೆಸುವುದು ಕೇಂದ್ರ ನಾಯಕರಿಗೆ ಬಿಟ್ಟ ವಿಷಯವಾಗಿದೆ, ಈ ಬಗ್ಗೆ ತಾವು ಹೇಳುವುದು ಏನಿಲ್ಲ, ಸಲಹೆಯನ್ನೂ ನೀಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ.

ಮಾಜಿ ಸಿಎಂ ಯಡಿಯೂರಪ್ಪ ಬಿಜೆಪಿಯ ಸಂಸದೀಯ ಮಂಡಳಿ ಸದಸ್ಯರಾಗಿದ್ದು, ಕೇಂದ್ರ ಚುನಾವಣಾ ಸಮಿತಿಯ ಸಭೆಯಲ್ಲಿ ಚುನಾವಣೆ ತಯಾರಿಗೆ ಸಂಬಂಧಿಸಿದ ಸಭೆಯಲ್ಲಿ ಭಾಗವಹಿಸಲು ದೆಹಲಿಗೆ ತೆರಳಿದ್ದಾರೆ.

ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ 25-26 ಸ್ಥಾನಗಳಲ್ಲಿ ಬಿಜೆಪಿ ಗೆಲ್ಲುವ ಗುರಿ ಹೊಂದಿದ್ದೇವೆ ಇದಕ್ಕಾಗಿ  ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆ ರಾಜ್ಯಾದ್ಯಂತ ನಡೆಯಲಿದೆ ಎಂದು ಬಿಎಸ್ ವೈ ತಿಳಿಸಿದ್ದಾರೆ. 

ಇದೇ ವೇಳೆ ಇಂಡಿಯಾ ಮೈತ್ರಿಕೂಟದ ಬಗ್ಗೆ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಬಿಎಸ್ ವೈ,  ಮೋದಿ ಎದುರು ಅವರೆಲ್ಲಾ ಝಿರೋ, ಕೇಂದ್ರದಲ್ಲಿ ನಮಗೆ ಸ್ಪಷ್ಟ ಬಹುಮತ ಸಿಗಲಿದೆ,  ಮೋದಿ ಮತ್ತೊಮ್ಮೆ ಪ್ರಧಾನಿಯಾಗಲಿದ್ದಾರೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com