ಸಂಸತ್ತು
ದೇಶ
ವಿಶೇಷ ಅಧಿವೇಶನಕ್ಕೂ ಮುನ್ನ ಭಾನುವಾರ ಸರ್ವಪಕ್ಷ ಸಭೆ
ಸಂಸತ್ ವಿಶೇಷ ಅಧಿವೇಶನಕ್ಕೂ ಮುನ್ನ ಭಾನುವಾರದಂದು ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.
ನವದೆಹಲಿ: ಸಂಸತ್ ವಿಶೇಷ ಅಧಿವೇಶನಕ್ಕೂ ಮುನ್ನ ಭಾನುವಾರದಂದು ಸರ್ಕಾರ ಸರ್ವಪಕ್ಷ ಸಭೆ ಕರೆದಿದೆ.
ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ್ ಜೋಶಿ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುವಂತೆ ವಿಪಕ್ಷಗಳಿಗೆ ಕರೆ ನೀಡಿದ್ದಾರೆ. ಸೆ.18 ರಿಂದ 22 ವರೆಗೆ 5 ದಿನಗಳ ಕಾಲ ಸಂಸತ್ ನ ವಿಶೇಷ ಅಧಿವೇಶನ ನಡೆಯಲಿದೆ.
ಇಂಡಿಯಾ ಮೈತ್ರಿಕೂಟದಲ್ಲಿರುವ 24 ಪಕ್ಷಗಳು ಸಂಸತ್ ನ ವಿಶೇಷ ಅಧಿವೇಶನದಲ್ಲಿ ಭಾಗಿಯಾಗುವುದಕ್ಕೆ ಒಪ್ಪಿದ್ದು, ಅಧಿವೇಶನದ ಕಾರ್ಯಸೂಚಿ ಇನ್ನಷ್ಟೇ ಬಹಿರಂಗವಾಗಬೇಕಿದೆ.
ಕಳೆದ ತಿಂಗಳು ಮುಕ್ತಾಯಗೊಂಡ ಮುಂಗಾರು ಅಧಿವೇಶನ ಹಳೆಯ ಸಂಸತ್ ಭವನದಲ್ಲಿ ನಡೆದಿತ್ತು. ಈ ಅಧಿವೇಶನ ಹಳೆಯ ಮತ್ತು ಹೊಸ ಸಂಸತ್ ಭವನಗಳಲ್ಲಿ ನಡೆಯುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ವರ್ಷಾಂತ್ಯಕ್ಕೆ ಪಂಚರಾಜ್ಯಗಳ ಚುನಾವಣೆಗಳಿಗೆ ತಯಾರಾಗುತ್ತಿರುವ ಪಕ್ಷಗಳಿಗೆ ವಿಶೇಷ ಅಧಿವೇಶನ ಕರೆದಿರುವುದು ಅಚ್ಚರಿ ಮೂಡಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ