ಚೆನ್ನೈ: ಕಾವೇರಿ ನದಿ ನೀರಿನ ವಿಚಾರಕ್ಕೆ ಸಂಬಂಧಿಸಿದಂತೆ ಕರ್ನಾಟಕ ನೆಲದ ಕಾನೂನನ್ನು ಪಾಲಿಸಬೇಕು ಎಂದು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ.
ಕಾವೇರಿ ನೀರು ಬಿಡುಗಡೆ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕರ್ನಾಟಕ ಸರ್ಕಾರದ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂಬ ನಿರ್ಣಯಕ್ಕೆ ಬರಲಾಗಿದೆ. ಇದೀಗ ಇದೇ ವಿಚಾರವಾಗಿ ಪ್ರತಿಕ್ರಿಯೆ ನೀಡಿರುವ ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಕರ್ನಾಟಕ ನೆಲದ ಕಾನೂನನ್ನು ಪಾಲಿಸಬೇಕು. ತಮಿಳುನಾಡು ಪಾಲಿನ ನೀರು ಬಿಡಬೇಕು ಎಂದು ಹೇಳಿದ್ದಾರೆ.
ತಮಿಳುನಾಡಿನ ದಿಂಡಿಗಲ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಕರ್ನಾಟಕವು ನೆಲದ ಕಾನೂನನ್ನು ಅನುಸರಿಸಬೇಕು. ನೆಲದ ಕಾನೂನು ಬಹಳ ಸ್ಪಷ್ಟವಾಗಿದೆ. 2018 ರ ನಂತರ ಕಾವೇರಿ ನೀರು ನಿರ್ವಹಣಾ ಮಂಡಳಿಯನ್ನು ರಚಿಸಲಾಯಿತು ಮತ್ತು ಅದು ತನ್ನ ತೀರ್ಪನ್ನು ನೀಡಿದೆ, ಸಮಸ್ಯೆಯಿದ್ದರೆ, ಅವರು ಸುಪ್ರೀಂ ಕೋರ್ಟ್‌ಗೆ ಹೋಗಿ ಮೇಲ್ಮನವಿ ಸಲ್ಲಿಸಬೇಕು, ತಮಿಳುನಾಡು ವಾದವನ್ನು ಸುಪ್ರೀಂ ಕೋರ್ಟ್ ವಿವರವಾಗಿ ಪರಿಶೀಲಿಸುತ್ತದೆ ಎಂದು ನನಗೆ ಖಾತ್ರಿಯಿದೆ...ತಮಿಳುನಾಡಿಗೆ ಹೆಚ್ಚುವರಿ ನೀರು ಬೇಡ, ನಮ್ಮ ಪಾಲಿನ ನೀರನ್ನು ಕರ್ನಾಟಕ ಬಿಡಬೇಕು ಎಂದು ಹೇಳಿದ್ದಾರೆ.
Advertisement