ರಾಜಸ್ಥಾನ: ಸೇತುವೆ ಮೇಲೆ ಕೆಟ್ಟು ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ, 11 ಮಂದಿ ಸಾವು; 12 ಜನರಿಗೆ ಗಂಭೀರ ಗಾಯ

ಭರತ್‌ಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.  ಹಂತ್ರಾ ಬಳಿಯ ಜೈಪುರ-ಆಗ್ರಾ ಹೆದ್ದಾರಿಯಲ್ಲಿ ಟ್ರೈಲರ್ ವಾಹನ ಬಸ್‌ಗೆ ಡಿಕ್ಕಿಯಾಗಿ 11 ಜನರು ಸಾವನ್ನಪ್ಪಿದ್ದಾರೆ ಇತರೆ 12 ಮಂದಿ ಗಾಯಗೊಂಡಿದ್ದಾರೆ.
ರಾಜಸ್ಥಾನ: ಸೇತುವೆ ಮೇಲೆ ಕೆಟ್ಟು ನಿಂತಿದ್ದ ಬಸ್​ಗೆ ಲಾರಿ ಡಿಕ್ಕಿ, 11 ಮಂದಿ ಸಾವು; 12 ಜನರಿಗೆ ಗಂಭೀರ ಗಾಯ

ರಾಜಸ್ಥಾನ : ಭರತ್‌ಪುರ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ.  ಹಂತ್ರಾ ಬಳಿಯ ಜೈಪುರ-ಆಗ್ರಾ ಹೆದ್ದಾರಿಯಲ್ಲಿ ಟ್ರೈಲರ್ ವಾಹನ ಬಸ್‌ಗೆ ಡಿಕ್ಕಿಯಾಗಿ 11 ಜನರು ಸಾವನ್ನಪ್ಪಿದ್ದಾರೆ ಇತರೆ 12 ಮಂದಿ ಗಾಯಗೊಂಡಿದ್ದಾರೆ.

ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದಾಗ ಮುಂಜಾನೆ 4.30 ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸೇತುವೆ ಮೇಲೆ ಬಸ್ ಕೆಟ್ಟು ನಿಂತಿದ್ದರಿಂದ ಈ ಘಟನೆ ನಡೆದಿದೆ. ಬಸ್ ಚಾಲಕ ಮತ್ತು ಕೆಲವು ಪ್ರಯಾಣಿಕರು ಬಸ್‌ನ ಹಿಂದೆ ನಿಂತಿದ್ದಾಗ ವೇಗವಾಗಿ ಬಂದ ಟ್ರಕ್ ವಾಹನಕ್ಕೆ ಡಿಕ್ಕಿ ಹೊಡೆದಿದೆ ಎಂದು ಬದುಕುಳಿದವರು ಹೇಳಿದ್ದಾರೆ.

ಇಂಧನ ಖಾಲಿಯಾದ ನಂತರ ಲಖನ್‌ಪುರ ಪ್ರದೇಶದ ಅಂಟ್ರಾ ಫ್ಲೈಓವರ್‌ನಲ್ಲಿ ಬಸ್ ನಿಂತಿತ್ತು. ಈ ವೇಳೆ ವೇಗವಾಗಿ ಬಂದ ಟ್ರಕ್ ಬಸ್ ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಐವರು ಪುರುಷರು ಮತ್ತು ಆರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com