ಮದುವೆಯಾಗುವುದಾಗಿ ನಂಬಿಸಿ ಜೆಎನ್‌ಯು ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬನಿಂದ ಅತ್ಯಾಚಾರ: ದೆಹಲಿ ಪೊಲೀಸರು

ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ಮದುವೆಯಾಗುವುದಾಗಿ ನಂಬಿಸಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ನವದೆಹಲಿ: ಉತ್ತರ ದೆಹಲಿಯ ವಜೀರಾಬಾದ್ ಪ್ರದೇಶದಲ್ಲಿ ಮದುವೆಯಾಗುವುದಾಗಿ ನಂಬಿಸಿ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ವಿದ್ಯಾರ್ಥಿನಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ದೂರುದಾರರು ದಕ್ಷಿಣ ದೆಹಲಿಯ ಜೆಎನ್‌ಯು ಕ್ಯಾಂಪಸ್‌ನ ನಿವಾಸಿಯಾಗಿದ್ದು, ಸುಮಾರು ನಾಲ್ಕು ವರ್ಷಗಳ ಹಿಂದೆ ಸಂಘಟನೆಯೊಂದರ ಮೂಲಕ ಆರೋಪಿಯನ್ನು ಭೇಟಿಯಾಗಿದ್ದೆ ಎಂದು ತಿಳಿಸಿದ್ದಾರೆ.

'ಭೇಟಿಯ ಬಳಿಕ ಇಬ್ಬರು ಸ್ನೇಹಿತರಾದರು. ಏಪ್ರಿಲ್ 3ರಂದು ಸಂತ್ರಸ್ತೆ ವಜೀರಾಬಾದ್‌ನಲ್ಲಿರುವ ಆರೋಪಿಯ ಫ್ಲಾಟ್‌ನಲ್ಲಿದ್ದರು. ಇದ್ದಕ್ಕಿದ್ದಂತೆ ಆತ ಆಕೆಯನ್ನು ಮದುವೆಯಾಗುವುದಾಗಿ ಭರವಸೆ ನೀಡಿ ಆಕೆಯ ಬಳಿಗೆ ಬಂದು ದೈಹಿಕ ಸಂಬಂಧ ಬೆಳೆಸಿದನು. ಈಗ ಆರೋಪಿ ದೂರುದಾರರನ್ನು ಮದುವೆಯಾಗಲು ನಿರಾಕರಿಸುತ್ತಿದ್ದಾನೆ' ಎಂದು ಉಪ ಪೊಲೀಸ್ ಆಯುಕ್ತ (ಉತ್ತರ) ಸಾಗರ್ ಸಿಂಗ್ ಕಲ್ಸಿ ಹೇಳಿದ್ದಾರೆ.

ಆರೋಪಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ವಜೀರಾಬಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಮತ್ತು ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com