ಸರ್ವಪಕ್ಷ ಸಭೆ: ಮಹಿಳಾ ಮೀಸಲಾತಿ ಮಸೂದೆಗೆ ಹಲವು ಪ್ರಾದೇಶಿಕ ಪಕ್ಷಗಳು ಆಗ್ರಹ

ಸೋಮವಾರದಿಂದ ಪ್ರಾರಂಭವಾಗುವ ಐದು ದಿನಗಳ ಸಂಸತ್ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ ಅಂಗೀಕರಿಸುವಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ಭಾನುವಾರ ಆಗ್ರಹಿಸಿವೆ.
ಸರ್ವಪಕ್ಷ ಸಭೆ
ಸರ್ವಪಕ್ಷ ಸಭೆ

ನವದೆಹಲಿ: ಸೋಮವಾರದಿಂದ ಪ್ರಾರಂಭವಾಗುವ ಐದು ದಿನಗಳ ಸಂಸತ್ ವಿಶೇಷ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಮಂಡಿಸಿ ಅಂಗೀಕರಿಸುವಂತೆ ಆಡಳಿತ ಮತ್ತು ವಿರೋಧ ಪಕ್ಷಗಳು ಸೇರಿದಂತೆ ಹಲವು ಪ್ರಾದೇಶಿಕ ಪಕ್ಷಗಳು ಭಾನುವಾರ ಆಗ್ರಹಿಸಿವೆ.
  
ಕೇಂದ್ರ ಸರ್ಕಾರ ಕರೆದಿದ್ದ ಸರ್ವಪಕ್ಷಗಳ ಸಭೆಯಲ್ಲಿ ಹಲವು ನಾಯಕರು, ಬಹುಕಾಲದಿಂದ ಬಾಕಿ ಉಳಿದಿರುವ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಬೇಕು ಎಂದು ಹೇಳಿದ್ದು, ಒಮ್ಮತದಿಂದ ಅಂಗೀಕಾರವಾಗಬಹುದೆಂದು ಆಶಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗದಷ್ಟು ಸ್ಥಾನಗಳನ್ನು ಮೀಸಲಿಡಲು ಮಹಿಳಾ ಮೀಸಲಾತಿ ಮಸೂದೆ ಪ್ರಯತ್ನಿಸುತ್ತಿದೆ.

ಬಿಜೆಡಿ ಮತ್ತು ಬಿಆರ್ ಎಸ್ ಸೇರಿದಂತೆ ಹಲವಾರು ಪ್ರಾದೇಶಿಕ ಪಕ್ಷಗಳು ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಲು ಒತ್ತಾಯಿಸಿವೆ.

"ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸಲು ಎಲ್ಲಾ ವಿರೋಧ ಪಕ್ಷಗಳು ಒತ್ತಾಯಿಸಿವೆ" ಎಂದು ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ ಹೇಳಿದ್ದಾರೆ.

ಭಾರತೀಯ ಜನತಾ ಪಕ್ಷದ ಮಿತ್ರ ಪಕ್ಷ ಎನ್ ಸಿಪಿ ನಾಯಕ ಪ್ರಫುಲ್ ಪಟೇಲ್ ಅವರು, "ಈ ಬಾರಿಯ ಸಂಸತ್ ಅಧಿವೇಶನದಲ್ಲಿ ಮಹಿಳಾ ಮೀಸಲಾತಿ ಮಸೂದೆ ಅಂಗೀಕರಿಸುವಂತೆ ನಾವು ಸರ್ಕಾರಕ್ಕೆ ಮನವಿ ಮಾಡುತ್ತೇವೆ" ಎಂದು ತಿಳಿಸಿದ್ದಾರೆ.

ಸಂಸತ್ತಿನಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಮಂಡಿಸಿದರೆ ಒಮ್ಮತದಿಂದ ಅಂಗೀಕಾರವಾಗುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com