ಹಳೆ ಸಂಸತ್ ಭವನ ಕಾರ್ಯಕ್ರಮಕ್ಕೆ ರಾಷ್ಟ್ರಪತಿಗಳಿಗೆ ಏಕೆ ಆಹ್ವಾನ ನೀಡಿಲ್ಲ?: ಟಿಎಂಸಿ

ಹೊಸ ಸಂಸತ್ ಭವನಕ್ಕೆ ಸ್ಥಳಾಂತರಗೊಳ್ಳುವ ಮುನ್ನ ಹಳೆ ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕೆ ಆಹ್ವಾನಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ.
ರಾಷ್ಟ್ರಪತಿ ದ್ರೌಪದಿ ಮುರ್ಮು
ರಾಷ್ಟ್ರಪತಿ ದ್ರೌಪದಿ ಮುರ್ಮು
Updated on

ನವದೆಹಲಿ: ಹೊಸ ಸಂಸತ್ ಭವನಕ್ಕೆ ಸ್ಥಳಾಂತರಗೊಳ್ಳುವ ಮುನ್ನ ಹಳೆ ಸಂಸತ್ ಭವನದಲ್ಲಿ ನಡೆದ ಕಾರ್ಯಕ್ರಮಕ್ಕೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಏಕೆ ಆಹ್ವಾನಿಸಿಲ್ಲ ಎಂದು ತೃಣಮೂಲ ಕಾಂಗ್ರೆಸ್ ಮಂಗಳವಾರ ಪ್ರಶ್ನಿಸಿದೆ.

ಇಂದು ಹಳೆಯ ಕಟ್ಟಡದ ಐತಿಹಾಸಿಕ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಕರ್ ವಹಿಸಿದ್ದರು.

"ಸೆಂಟ್ರಲ್ ಹಾಲ್‌ನಲ್ಲಿ(ಹಳೆಯ ಸಂಸತ್ತಿನ ಕಟ್ಟಡ) ಇಂದಿನ ಕಾರ್ಯಕ್ರಮದಲ್ಲಿ ಭಾರತದ ರಾಷ್ಟ್ರಪತಿಗಳು ಎಲ್ಲಿದ್ದರು? ಅವರನ್ನು ಆಹ್ವಾನಿಸಲಾಗಿದೆಯೇ? ಏಕೆ ಅವರನ್ನು ನಿರ್ಲಕ್ಷಿಸಲಾಗಿದೆ?" ಎಂದು ಟಿಎಂಸಿ ನಾಯಕ ಡೆರೆಕ್ ಒ'ಬ್ರಿಯಾನ್ ಅವರು ಪ್ರಶ್ನಿಸಿದ್ದಾರೆ.

ಲೋಕಸಭೆ ಮತ್ತು ರಾಜ್ಯಸಭಾ ಸದಸ್ಯರು ಹಳೆ ಸಂಸತ್ ಭವನದ ಸೆಂಟ್ರಲ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕಳೆದ ಮೇ ತಿಂಗಳಲ್ಲಿ ನೂತನ ಸಂಸತ್ ಭವನದ ಉದ್ಘಾಟನೆಗೆ ರಾಷ್ಟ್ರಪತಿಯನ್ನು ಆಹ್ವಾನಿಸದಿರುವ ಬಗ್ಗೆ ವಿರೋಧ ಪಕ್ಷಗಳು ಈ ಹಿಂದೆಯೇ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು.

ಕನಿಷ್ಠ 21 ವಿರೋಧ ಪಕ್ಷಗಳು ನೂತನ ಸಂಸತ್ ಭವನ ಉದ್ಘಾಟನೆಯನ್ನು ಬಹಿಷ್ಕರಿಸಿದ್ದವು ಮತ್ತು ರಾಷ್ಟ್ರಪತಿ ಮುರ್ಮು ಅವರು ಹೊಸ ಸಂಸತ್ ಭವನವನ್ನು ಉದ್ಘಾಟಿಸಬೇಕೇ ಹೊರತು ಪ್ರಧಾನಿ ನರೇಂದ್ರ ಮೋದಿಯಲ್ಲ ಎಂದು ಪ್ರತಿಪಾದಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com