ಮಹಿಳಾ ಮೀಸಲಾತಿ ಮಸೂದೆಗೆ ಸಂಪುಟ ಅನುಮೋದನೆ: ಟ್ವೀಟ್ ಮಾಡಿ ಡಿಲೀಟ್ ಮಾಡಿದ ಕೇಂದ್ರ ಸಚಿವ

ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಟ್ವೀಟ್ ಮಾಡಿ ನಂತರ ಟ್ವೀಟ್'ನ್ನು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಡಿಲೀಟ್ ಮಾಡಿದ್ದಾರೆ.
ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್
ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್

ನವದೆಹಲಿ: ಮಹಿಳಾ ಮೀಸಲಾತಿ ಮಸೂದೆ ಮಂಡನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಟ್ವೀಟ್ ಮಾಡಿ ನಂತರ ಟ್ವೀಟ್'ನ್ನು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಅವರು ಡಿಲೀಟ್ ಮಾಡಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿದ್ದ ಪ್ರಹ್ಲಾದ್ ಸಿಂಗ್ ಪಟೇಲ್ ಅವರು, ಬಹುನಿರೀಕ್ಷಿತ ಮಹಿಳೆಯರಿಗೆ ಶೇ.33 ಮೀಸಲಾತಿಯನ್ನು ಒದಗಿಸುವ ಮಸೂದೆಯ ಮಂಡನೆಯ ಕುರಿತು ಕೇಂದ್ರ ಸಚಿವ ಪ್ರಹ್ಲಾದ್ ಸಿಂಗ್ ಪಟೇಲ್ ಟ್ವೀಟ್ ಮಾಡಿದ್ದರು. "ಮಹಿಳಾ ಮೀಸಲಾತಿಯ ಬೇಡಿಕೆಯನ್ನು ಈಡೇರಿಸುವ ನೈತಿಕ ಧೈರ್ಯ ಮೋದಿ ಸರ್ಕಾರಕ್ಕೆ ಮಾತ್ರ ಇತ್ತು. ಇದು ಸಂಪುಟದ ಸಭೆಯಲ್ಲಿ ಸಾಬೀತಾಗಿದೆ. ನರೇಂದ್ರ ಮೋದಿ ಹಾಗೂ ಮೋದಿಯವರ ಸರ್ಕಾರಕ್ಕೆ ಅಭಿನಂದನೆಗಳು ಎಂದು ಹೇಳಿದ್ದರು. ಟ್ವೀಟ್ ಮಾಡಿ ಕೆಲವೇ ನಿಮಿಷಗಳ ಬಳಿಕ ಪೋಸ್ಟ್ ನ್ನು ಡಿಲೀಟ್ ಮಾಡಿದ್ದರು.

ಪಟೇಲ್ ಅವರು ಕೇಂದ್ರದಲ್ಲಿ ಆಹಾರ ಸಂಸ್ಕರಣಾ ಕೈಗಾರಿಕೆಗಳು ಮತ್ತು ಜಲಶಕ್ತಿ ರಾಜ್ಯ ಸಚಿವರಾಗಿದ್ದಾರೆ.

ಸಂಸತ್ತಿನ ಐದು ದಿನಗಳ ವಿಶೇಷ ಅಧಿವೇಶನದ ಮೊದಲ ದಿನದ ಅಧಿವೇಶನ ಭಾನುವಾರ ಸಂಸತ್ತಿನ ಹಳೆಯ ಕಟ್ಟಡದಲ್ಲಿ ನಡೆಯಿತು. ಬಳಿಕ ಸಂಜೆ ಕೇಂದ್ರಸಚಿವ ಸಂಪುಟ ಸಭೆ ನಡೆದಿತ್ತು.

ಸಭೆಯಲ್ಲಿ ಮುಂದಿನ ದಿನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಹಿಳೆಯನ್ನು ಸಂಸತ್ತಿಗೆ ಕರೆ ತರುವಂತೆ ಬಿಜೆಪಿಯ ಹಲವು ಸಚಿವರು ಹಾಗೂ ಸಂಸದರು ಮನವಿ ಮಾಡಿಕೊಂಡಿದ್ದರು ಎಂದು ಮೂಲಗಳು ತಿಳಿಸಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com