ಮುಂಬೈ: ಟಿವಿ ಧಾರಾವಾಹಿ ಸೆಟ್‌ನಲ್ಲಿ ವಿದ್ಯುತ್ ಸ್ಪರ್ಶ, ಎಲೆಕ್ಟ್ರಿಷಿಯನ್ ಸಾವು
ಮುಂಬೈ: ಧಾರಾವಾಹಿಯೊಂದರ ಶೂಟಿಂಗ್ ಸೆಟ್‌ನಲ್ಲಿ ಎಲೆಕ್ಟ್ರಿಷಿಯನ್ ಒಬ್ಬರು ವಿದ್ಯುತ್ ಸ್ಪರ್ಶದಿಂದ ಸಾವನ್ನಪ್ಪಿರುವ ಘಟನೆ ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ನಡೆದಿರುವುದಾಗಿ ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಮಹೇಂದ್ರ ಯಾದವ್ ಎಂದು ಗುರುತಿಸಲಾಗಿದೆ. ಮಂಗಳವಾರ ಈ ದುರ್ಘಟನೆ ನಡೆದಿದ್ದು, ಧಾರಾವಾಹಿಯ ಶೂಟಿಂಗ್ ಸೆಟ್‌ನಲ್ಲಿ ಅವರು ಕೆಲಸ ಮಾಡುತ್ತಿದ್ದಾಗ ವಿದ್ಯುತ್ ತಂತಿ ತಗುಲಿ ಸಾವನ್ನಪ್ಪಿದ್ದಾರೆ ಎಂದು ಅಖಿಲ ಭಾರತೀಯ ಸಿನಿ ಕಾರ್ಮಿಕರ ಸಂಘದ ಅಧ್ಯಕ್ಷ ಸುರೇಶ್ ಶ್ಯಾಮಲ್ ಗುಪ್ತಾ ತಿಳಿಸಿದ್ದಾರೆ.
ಅವಘಡ ಸಂಭವಿಸಿದ ಕೂಡಲೇ ಆತನನ್ನು ಆಸ್ಪತ್ರೆಗೆ ಕೊಂಡೊಯ್ಯಲಾಯಿತಾದರೂ ವೈದ್ಯರು ಆತ ಸಾವನ್ನಪ್ಪಿರುವುದಾಗಿ ಘೋಷಿಸಿದರು. ಮೃತರ ಮುಂದಿನ ಕುಟುಂಬಕ್ಕೆ ಮಹಾರಾಷ್ಟ್ರ ಸರ್ಕಾರ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು ಎಂದು ಗುಪ್ತಾ ಒತ್ತಾಯಿಸಿದ್ದಾರೆ.
''ಧಾರಾವಾಹಿಯ ನಿರ್ಮಾಪಕ ಹಾಗೂ ನಿರ್ಮಾಣ ಸಂಸ್ಥೆಯ ವಿರುದ್ಧ ಪ್ರಕರಣ ದಾಖಲಿಸಬೇಕು, ಮೃತರ ಮುಂದಿನ ಕುಟುಂಬಕ್ಕೆ 50 ಲಕ್ಷ ಪರಿಹಾರ ನೀಡಬೇಕು ಹಾಗೂ ಫಿಲಂ ಸಿಟಿಯ ವ್ಯವಸ್ಥಾಪಕ ನಿರ್ದೇಶಕ ಹಾಗೂ ಕಾರ್ಮಿಕ ಆಯುಕ್ತರ ರಾಜೀನಾಮೆಯನ್ನು ತಕ್ಷಣದಿಂದ ಜಾರಿಗೆ ತರಬೇಕು. ," ಅವರು ಹೇಳಿದರು. ಈ ಬಗ್ಗೆ ಹೆಚ್ಚಿನ ತನಿಖೆ ನಡೆಯುತ್ತಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ