ಬಿಜೆಪಿ ವರಿಷ್ಠರ ಭೇಟಿಗೆ ಕುಮಾರಸ್ವಾಮಿ ಗುರುವಾರ ದೆಹಲಿಗೆ ಭೇಟಿ, ಮೈತ್ರಿ ಕುರಿತು ಮಾತುಕತೆ

2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಸಂಭವನೀಯ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿಯ ಕೇಂದ್ರ ನಾಯಕರನ್ನು ಭೇಟಿ ಮಾಡಲು ಗುರುವಾರ ನವದೆಹಲಿಗೆ ತೆರಳುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. 
ಎಚ್ ಡಿ ಕುಮಾರಸ್ವಾಮಿ
ಎಚ್ ಡಿ ಕುಮಾರಸ್ವಾಮಿ

ರಾಮನಗರ: 2024ರ ಲೋಕಸಭೆ ಚುನಾವಣೆಗೆ ಕರ್ನಾಟಕದಲ್ಲಿ ಉಭಯ ಪಕ್ಷಗಳ ನಡುವೆ ಸಂಭವನೀಯ ಮೈತ್ರಿ ಕುರಿತು ಚರ್ಚಿಸಲು ಬಿಜೆಪಿಯ ಕೇಂದ್ರ ನಾಯಕರನ್ನು ಭೇಟಿ ಮಾಡಲು ಗುರುವಾರ ನವದೆಹಲಿಗೆ ತೆರಳುವುದಾಗಿ ಜೆಡಿಎಸ್ ಮುಖಂಡ ಎಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ. 

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಬಿಜೆಪಿ ನಡುವಿನ ಸೀಟು ಹಂಚಿಕೆ ಮಾತುಕತೆ ಕುರಿತ ಮಾಧ್ಯಮ ವರದಿಗಳು  ಕೇವಲ ಊಹಾಪೋಹ ಎಂದು ತಳ್ಳಿಹಾಕಿದ ಅವರು, ಈ ನಿಟ್ಟಿನಲ್ಲಿ ಇದುವರೆಗೆ ಯಾವುದೇ ಮಾತುಕತೆ ನಡೆದಿಲ್ಲ ಎಂದರು. 

ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ವಿರೋಧ ಪಕ್ಷದ ಅಗತ್ಯತೆಯನ್ನು ಒತ್ತಿ ಹೇಳಿದ ಕುಮಾರಸ್ವಾಮಿ, ಈ ಬಗ್ಗೆ ಚರ್ಚೆ ನಡೆಸಲಾಗುವುದು, ಗುರುವಾರ ಬೆಳಗ್ಗೆ ದೆಹಲಿಗೆ ಹೋಗುತ್ತಿದ್ದು, ಬಿಜೆಪಿ ಹೈಕಮಾಂಡ್ ಭೇಟಿ ಮಾಡುತ್ತೇನೆ ಎಂದು  ತಿಳಿಸಿದರು.

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯನ್ನು ತಳ್ಳಿಹಾಕಿದ ಅವರು, ಚನ್ನಪಟ್ಟಣ ಕ್ಷೇತ್ರದ ಜನರು ನನಗೆ ಮತ ಹಾಕಿದ್ದು, ಆ ಜನರಿಗಾಗಿ ಇಲ್ಲಿಯೇ ಉಳಿಯುತ್ತೇನೆ. ಗುರುವಾರದ  ಸಭೆಯಲ್ಲಿ ಆಗುವ ಚರ್ಚೆಯ ನಂತರ ಫಲಿತಾಂಶ ತಿಳಿಯಲಿದೆ .ಮಾಧ್ಯಮಗಳ ವರದಿಗಳು ಬರೀ ಊಹಾಪೋಹ, ಸೀಟು ಹಂಚಿಕೆ ಅಥವಾ ಇತರ ವಿಷಯಗಳ ಬಗ್ಗೆ ಯಾವುದೇ ಚರ್ಚೆ ನಡೆದಿಲ್ಲ ಎಂದು ಸ್ಪಷ್ಟಪಡಿಸಿದರು. 

ಪಕ್ಷದ ಸಂಸದೀಯ ಮಂಡಳಿಯ ಸದಸ್ಯರೂ ಆಗಿರುವ ಹಿರಿಯ ಬಿಜೆಪಿ ನಾಯಕ ಬಿ ಎಸ್ ಯಡಿಯೂರಪ್ಪ ಈ ತಿಂಗಳ ಆರಂಭದಲ್ಲಿ ತಮ್ಮ ಪಕ್ಷ ಸಂಸತ್ ಚುನಾವಣೆಗೆ ಜೆಡಿಎಸ್‌ನೊಂದಿಗೆ ಮೈತ್ರಿ ಹೊಂದಲಿದೆ ಎಂದು ಹೇಳಿದಾಗಿನಿಂದ ಎರಡೂ ಪಕ್ಷಗಳ ನಡುವಿನ ಮೈತ್ರಿ ಕುರಿತು ಚರ್ಚೆಗಳು ನಡೆಯುತ್ತಿವೆ. ಒಟ್ಟು 28 ಕ್ಷೇತ್ರಗಳನ್ನು ಹೊಂದಿರುವ ಕರ್ನಾಟಕದಲ್ಲಿ ಪ್ರಾದೇಶಿಕ ಪಕ್ಷವು ನಾಲ್ಕು ಲೋಕಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಕೆಲವೇ ದಿನಗಳಲ್ಲಿ  ಚರ್ಚಿಸಿ ಅಂತಿಮ ನಿರ್ಧಾರವನ್ನು ತೆಗೆದುಕೊಳ್ಳಲಿದ್ದಾರೆ ಎಂದು ತಿಳಿಸಿದ್ದರು. ಬಿಜೆಪಿ ಮತ್ತು ಜೆಡಿಎಸ್ ಒಟ್ಟಾಗಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಚರ್ಚೆ ಇನ್ನೂ ಆರಂಭಿಕ ಹಂತದಲ್ಲಿದೆ ಎಂಬುದನ್ನು ಕುಮಾರಸ್ವಾಮಿ ಒಪ್ಪಿಕೊಂಡಿದ್ದಾರೆ. 

ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲು ಯತ್ನಿಸುತ್ತಿರುವ ಜೆಡಿಎಸ್‌ನ ಜಾತ್ಯತೀತ ನಿಲುವಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಕುಮಾರಸ್ವಾಮಿ, ತಮ್ಮ ಪಕ್ಷ ಎಲ್ಲಾ ಸಮುದಾಯಗಳನ್ನು ಗೌರವಿಸುತ್ತದೆ. ಮೈತ್ರಿ ಕುರಿತು ಮಾತುಕತೆ ವೇಳೆ ಮೈತ್ರಿ ವಿಷಯ ಪಕ್ಷದ ನಿಲುವಿಗಿಂತ ಭಿನ್ನವಾಗಿದ್ದು, ಇದರಲ್ಲಿ ಯಾವುದೇ ರಾಜಿ ಇಲ್ಲ, ಎಲ್ಲ ಸಮುದಾಯಗಳನ್ನು ಗೌರವಿಸುವುದು ನಮ್ಮ ಪಕ್ಷದ ಜವಾಬ್ದಾರಿಯಾಗಿದೆ ಎಂದರು.

ಜೆಡಿಎಸ್‌ಗೆ ಹೋಲಿಸಿದರೆ ಯಾವುದೇ ಪಕ್ಷವು ಮುಸ್ಲಿಂ ಸಮುದಾಯದ ಕಲ್ಯಾಣಕ್ಕೆ ಕೊಡುಗೆ ನೀಡಿಲ್ಲ ಎಂದು ಹೇಳಿದ ಮಾಜಿ ಸಿಎಂ, ಯಾವುದೇ ತಾರತಮ್ಯವಿಲ್ಲದೆ ರಾಜ್ಯದ ಪ್ರತಿ ಮನೆಯ ಕಲ್ಯಾಣ ಖಾತ್ರಿಪಡಿಸುವ ವಾತಾವರಣ ಒದಗಿಸುವಲ್ಲಿ ಯಾವುದೇ ರಾಜಿ ಇಲ್ಲ. ನಮ್ಮ ಸಿದ್ಧಾಂತದ ಬಗ್ಗೆ ನಾನು ಯಾವುದೇ ಪಕ್ಷದ ಜೊತೆ ಚರ್ಚೆಗೆ ಬರಲು ಬಯಸುವುದಿಲ್ಲ. ನನಗೆ ಕಾಂಗ್ರೆಸ್ಸಿನ ಸಿದ್ಧಾಂತ ಗೊತ್ತು, ಕಳೆದ 50 ವರ್ಷಗಳಿಂದ ಬಿಜೆಪಿ ಜೊತೆಗಿದ್ದ ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡು ರಾಜಕೀಯ ಮಾಡಿದ್ದಾರೆ. ಜೆಡಿಎಸ್‌ನವರನ್ನು ಮಾತ್ರ ಏಕೆ ಪ್ರಶ್ನಿಸಬೇಕು ಎಂದು ಪ್ರಶ್ನಿಸಿದರು.

ಕರ್ನಾಟಕದಲ್ಲಿ 2019 ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25 ಸ್ಥಾನಗಳನ್ನು ಗೆಲ್ಲುವ ಮೂಲಕ ಮುನ್ನಡೆದಿತ್ತು, ಆದರೆ ಸ್ವತಂತ್ರ (ಮಂಡ್ಯದಿಂದ ಸುಮಲತಾ ಅಂಬರೀಶ್) ಒಂದು ಸ್ಥಾನದಲ್ಲಿ ಗೆದ್ದಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ತಲಾ ಒಂದು ಸ್ಥಾನ ಗಳಿಸಿವೆ. ಈ ವರ್ಷ ಮೇನಲ್ಲಿ ನಡೆದ 224 ಸದಸ್ಯ ಬಲದ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳನ್ನು ಗಳಿಸಿದರೆ, ಬಿಜೆಪಿ 66 ಮತ್ತು ಜೆಡಿಎಸ್ 19 ಸ್ಥಾನಗಳನ್ನು ಪಡೆದುಕೊಂಡಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com