ಮಹಿಳಾ ಮೀಸಲಾತಿ ಮಸೂದೆಯನ್ನು ಬಿಜೆಡಿ ಬಲವಾಗಿ ಬೆಂಬಲಿಸುತ್ತದೆ: ಒಡಿಶಾ ಸಿಎಂ ಪಟ್ನಾಯಕ್

ಸಂಸತ್ತಿನಲ್ಲಿ ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ತಮ್ಮ ಪಕ್ಷ ಬಲವಾಗಿ ಬೆಂಬಲಿಸುತ್ತದೆ ಎಂದು ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಗುರುವಾರ ಹೇಳಿದ್ದಾರೆ.
ನವೀನ್ ಪಟ್ನಾಯಕ್
ನವೀನ್ ಪಟ್ನಾಯಕ್

ಭುವನೇಶ್ವರ: ಸಂಸತ್ತಿನಲ್ಲಿ ಮಂಡಿಸಲಾದ ಮಹಿಳಾ ಮೀಸಲಾತಿ ಮಸೂದೆಯನ್ನು ತಮ್ಮ ಪಕ್ಷ ಬಲವಾಗಿ ಬೆಂಬಲಿಸುತ್ತದೆ ಎಂದು ಬಿಜೆಡಿ ಅಧ್ಯಕ್ಷ ಮತ್ತು ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಗುರುವಾರ ಹೇಳಿದ್ದಾರೆ.

"ನಿಮಗೆ ತಿಳಿದಿರುವಂತೆ, ನಮ್ಮ ಪಕ್ಷ ಯಾವಾಗಲೂ ಅಸೆಂಬ್ಲಿಯಲ್ಲಿ ಮತ್ತು ಇತರೆಡೆಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯ ಪರವಾಗಿದೆ. ಅದನ್ನು ಶೀಘ್ರದಲ್ಲೇ ಅಂಗೀಕರಿಸಲಾಗುವುದು ಎಂದು ನಾನು ಭಾವಿಸುತ್ತೇನೆ" ಎಂದು ಪಟ್ನಾಯಕ್ ಅವರು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಇದಕ್ಕೂ ಮುನ್ನ, ಬಿಜೆಡಿ ತನ್ನ ರಾಜ್ಯಸಭಾ ಸಂಸದರಿಗೆ ಸದನದಲ್ಲಿ ಹಾಜರಿರಲು ಮತ್ತು ಮಹಿಳಾ ಮೀಸಲಾತಿ ಮಸೂದೆ ಅಂಗೀಕಾರಕ್ಕೆ ಬೆಂಬಲ ನೀಡುವಂತೆ ಮೂರು ಸಾಲಿನ ವಿಪ್ ಜಾರಿಗೊಳಿಸಿತ್ತು.

ಗಮನಾರ್ಹ ವಿಚಾರ ಎಂದರೆ, ಬಿಜೆಡಿ ಮಹಿಳಾ ಮೀಸಲಾತಿ ಮಸೂದೆಗಾಗಿ ದೀರ್ಘಕಾಲದಿಂದ ಒತ್ತಾಯಿಸುತ್ತಿದೆ ಮತ್ತು ಉಭಯ ಸದನಗಳಲ್ಲಿ ಅದನ್ನು ಅಂಗೀಕರಿಸುವಂತೆ ಆಗ್ರಹಿಸಿದೆ. ಮಾಜಿ ಸಿಎಂ ಬಿಜು ಪಟ್ನಾಯಕ್ ಅವರು 1991 ರಲ್ಲಿ ಪಂಚಾಯತ್ ಮತ್ತು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಮಹಿಳೆಯರಿಗೆ ಮೊದಲ ಬಾರಿಗೆ 1/3 ರ ಮೀಸಲಾತಿಯನ್ನು ಪರಿಚಯಿಸಿದ್ದರಿಂದ ಒಡಿಶಾ ಮಹಿಳಾ ಕೋಟಾಕ್ಕೆ ಮಾದರಿ ರಾಜ್ಯವಾಗಿದೆ ಎಂದು ಹಿರಿಯ ಬಿಜೆಡಿ ಸಂಸದ ಭರ್ತೃಹರಿ ಮಹತಾಬ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com