ವೋಟರ್ ಐಡಿಗೆ ಆಧಾರ್ ಸಂಖ್ಯೆ ಲಿಂಕ್ ಮಾಡುವುದು ಕಡ್ಡಾಯವಲ್ಲ: ಸುಪ್ರೀಂ ಕೋರ್ಟ್ ಗೆ ಚುನಾವಣಾ ಆಯೋಗ ಮಾಹಿತಿ

ಮತದಾರರ ಪಟ್ಟಿಯನ್ನು (ವೋಟರ್ ಐಡಿ) ದೃಢೀಕರಿಸಲು ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. 
ಆಧಾರ್ ಮತ್ತು ವೋಟರ್ ಐಡಿ
ಆಧಾರ್ ಮತ್ತು ವೋಟರ್ ಐಡಿ

ನವದೆಹಲಿ: ಮತದಾರರ ಪಟ್ಟಿಯನ್ನು (ವೋಟರ್ ಐಡಿ) ದೃಢೀಕರಿಸಲು ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ. 

ಇದೇ ವೇಳೆ ಮತದಾರರ ಪಟ್ಟಿ ನೋಂದಣಿ ನಮೂನೆಗಳಲ್ಲಿ ಸೂಕ್ತವಾದ “ಸ್ಪಷ್ಟೀಕರಣ” ಬದಲಾವಣೆಗಳನ್ನು ನೀಡುವುದನ್ನು ಸಹ ಪರಿಶೀಲಿಸುತ್ತಿದೆ ಎಂದು ಚುನಾವಣಾ ಆಯೋಗ ಸ್ಪಷ್ಟಪಡಿಸಿದೆ. ಮತದಾರರ ನೋಂದಣಿ (ತಿದ್ದುಪಡಿ) ನಿಯಮಗಳು 2022 ರ ನಿಯಮ 26-ಬಿ ಅಡಿಯಲ್ಲಿ ಆಧಾರ್ ಸಂಖ್ಯೆಯನ್ನು ಸಲ್ಲಿಸುವುದು ಕಡ್ಡಾಯವಲ್ಲ ಮತ್ತು ಆದ್ದರಿಂದ ಚುನಾವಣಾ ಆಯೋಗವು ಆ ಉದ್ದೇಶಕ್ಕಾಗಿ ಪರಿಚಯಿಸಲಾದ ನಮೂನೆಗಳಲ್ಲಿ ಸೂಕ್ತ ಸ್ಪಷ್ಟೀಕರಣ ಬದಲಾವಣೆಗಳನ್ನು ನೀಡಲು ಪರಿಶೀಲಿಸುತ್ತಿದೆ ಎಂದು ಇಸಿಐ ವಕೀಲರು ಸುಪ್ರೀಂ ಕೋರ್ಟ್ ಗೆ ಹೇಳಿದ್ದಾರೆ. 

ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ ಮತ್ತು ಮನೋಜ್ ಮಿಶ್ರಾ ಅವರನ್ನೊಳಗೊಂಡ ಪೀಠಕ್ಕೆ ಈ ಮಾಹಿತಿ ನೀಡಿದ್ದು, ಇಸಿಐ ವಕೀಲರು ಸಲ್ಲಿಸಿದ ಸಲ್ಲಿಕೆಗಳನ್ನು ದಾಖಲಿಸಿದ ಪೀಠ, ಹೊಸ ಮತದಾರರ ಮಾಹಿತಿಯ ದೃಢೀಕರಣಕ್ಕೆ ಸಂಬಂಧಿಸಿದ ನಮೂನೆಗಳಲ್ಲಿ ಆಧಾರ್ ವಿವರಗಳ ಅಗತ್ಯವನ್ನು ಪ್ರಶ್ನಿಸುವ ರಿಟ್ ಅರ್ಜಿಯನ್ನು ಕೋರ್ಟ್ ವಿಲೇವಾರಿ ಮಾಡಿದೆ.

ತೆಲಂಗಾಣ ಕಾಂಗ್ರೆಸ್ ನಾಯಕ ಜಿ ನಿರಂಜನ್ ಅವರು ಈ ಅರ್ಜಿ ಸಲ್ಲಿಸಿದ್ದು, ಮತದಾರರ ಪಟ್ಟಿಯನ್ನು ಅಂತಿಮಗೊಳಿಸುವ ಪ್ರಕ್ರಿಯೆಯಲ್ಲಿ ಈಗಾಗಲೇ ಸುಮಾರು 66,23,00,000 ಆಧಾರ್ ಸಂಖ್ಯೆಗಳನ್ನು ಅಪ್‌ಲೋಡ್ ಮಾಡಲಾಗಿದೆ ಎಂದು ಇಸಿಐನ ವಕೀಲರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com