ಶ್ರೀನಗರ: 4 ವರ್ಷಗಳ ಕಾಲ ಗೃಹ ಬಂಧನದಲ್ಲಿದ್ದ ಹುರಿಯತ್ ಕಾನ್ಫರೆನ್ಸ್‌ನ ಅಧ್ಯಕ್ಷ ಮಿರ್ವೈಜ್ ಉಮರ್ ಫಾರೂಕ್ ಅವರನ್ನು ಶುಕ್ರವಾರ ಬಿಡುಗಡೆ ಮಾಡಲಾಗಿದೆ.
ಸಂವಿಧಾನದ 370ನೇ ವಿಧಿಯಡಿ ಈ ಹಿಂದಿನ ಜಮ್ಮು–ಕಾಶ್ಮೀರ ರಾಜ್ಯಕ್ಕೆ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು ಹಿಂಪಡೆಯುವ ಪ್ರಸ್ತಾವನೆಗೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ 2019ರಲ್ಲಿ ಮಿರ್ವೈಜ್ ಫಾರೂಕ್ ಅವರನ್ನು ವಶಕ್ಕೆ ಪಡೆದಿದ್ದ ಪೊಲೀಸರು, ಗೃಹ ಬಂಧನದಲ್ಲಿಸಿದ್ದರು. ನಾಲ್ಕು ವರ್ಷಗಳ ಬಳಿಕ ಫಾರೂಕ್ ಅವರನ್ನು ಬಿಡುಗಡೆ ಮಾಡಲಾಗಿದೆ.
ಗೃಹಬಂಧನದಿಂದ ಮುಕ್ತರಾದ ನಂತರ ಫಾರೂಕ್ ಅವರು, ಐತಿಹಾಸಿಕ ಜಾಮಿಯಾ ಮಸೀದಿಯಲ್ಲಿ ಶುಕ್ರವಾರದ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು.
‘ಮಿರ್ವೈಜ್ ಅವರ ನಿವಾಸಕ್ಕೆ ಗುರುವಾರ ಸಂಜೆ ಭೇಟಿ ನೀಡಿದ ಅಧಿಕಾರಿಗಳು, ಗೃಹಬಂಧನದಿಂದ ಮುಕ್ತಗೊಳಿಸುತ್ತಿರುವ ವಿಚಾರವನ್ನು ತಿಳಿಸಿದ್ದರು. ಇದರಂತೆ ಜಾಮಿಯಾ ಮಸೀದಿಯಲ್ಲಿ ಶುಕ್ರವಾರ ನಡೆಯಲಿರುವ ಪಾರ್ಥನೆಯಲ್ಲಿ ಪಾಲ್ಗೊಳ್ಳಲು ಅವಕಾಶ ಮಾಡಿಕೊಟ್ಟಿದ್ದರು.
Advertisement