ಪಾಣಿಪತ್: ಗಂಡ, ಮಕ್ಕಳ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ

ಹರಿಯಾಣದ ಪಾಣಿಪತ್‌ನಲ್ಲಿ ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಚಂಡೀಗಢ: ಹರಿಯಾಣದ ಪಾಣಿಪತ್‌ನಲ್ಲಿ ಕುಟುಂಬ ಸದಸ್ಯರ ಎದುರೇ ಮೂವರು ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ವರದಿಯಾಗಿದೆ.

ನಾಲ್ಕು ಕುಟುಂಬಗಳು ವಾಸಿಸುತ್ತಿದ್ದ ಮನೆಗೆ ನುಗ್ಗಿ ಅತ್ಯಾಚಾರ ಮಾಡುವ ಮೊದಲು ಆರೋಪಿಗಳು ಮೂವರು ಮಹಿಳೆಯ ಕುಟುಂಬ ಸದಸ್ಯರನ್ನು ಹಗ್ಗಗಳಿಂದ ಕಟ್ಟಿಹಾಕಿದ್ದರು. ಆರೋಪಿಗಳು ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.  ಘಟನೆ ಬುಧವಾರ ತಡರಾತ್ರಿ ನಡೆದಿದ್ದು, ಆರೋಪಿಗಳು ಚಾಕುಗಳು ಮತ್ತು ಇತರ ಹರಿತವಾದ ಆಯುಧಗಳಿಂದ ಶಸ್ತ್ರಸಜ್ಜಿತರಾಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ಸಂಭವಿಸಿದ ಸ್ಥಳದಿಂದ ಸುಮಾರು ಒಂದು ಕಿಮೀ ದೂರದಲ್ಲಿ ಬುಧವಾರ ತಡರಾತ್ರಿ ನಡೆದ ಪ್ರತ್ಯೇಕ ಘಟನೆಯಲ್ಲಿ, ಅಸ್ವಸ್ಥ ಮಹಿಳೆಯ ಮೇಲೆ ದಾಳಿ ಮಾಡಲಾಗಿದ್ದು, ಆಕೆ ಸ್ಥಳದಲ್ಲೇ ಸಾವನ್ನಪ್ಪಿದ್ದಾಳೆ, ಆಕೆಯ ಪತಿ ಬಳಿ ಇದ್ದ ಎಲ್ಲಾ ಬೆಲೆಬಾಳುವ ವಸ್ತುಗಳನ್ನು ಕದ್ದು ಆರೋಪಿಗಳು ಪರಾರಿಯಾಗಿದ್ದಾರೆ  ಎರಡು ಘಟನೆಗಳು ಒಂದೇ ಗ್ರಾಮದಲ್ಲಿ ನಡೆದಿವೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಸುಮಾರು ಒಂದು ತಿಂಗಳ ಹಿಂದೆ ನಿವೇಶನಗಳನ್ನು ಖಾಲಿ ಮಾಡುವಂತೆ ತಮ್ಮ ಕುಟುಂಬಕ್ಕೆ ಬೆದರಿಕೆ ಹಾಕಿಲಾಗಿತ್ತು, ನಿನ್ನೆ ನಡೆದ ಕೃತ್ಯದಲ್ಲಿ ಅದೇ ವ್ಯಕ್ತಿಗಳು ಭಾಗಿಯಾಗಿರಬಹುದು ಎಂದು  ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

ನಿದ್ದೆಯಲ್ಲಿದ್ದಾಗ ದುಷ್ಕರ್ಮಿಗಳು ತಮ್ಮ ಗಂಡ ಮತ್ತು ಮಕ್ಕಳನ್ನು ಹೊರಗೆ ಕರೆದೊಯ್ದು ಹಗ್ಗದಿಂದ ಕಟ್ಟಿ ಹಾಕಿದ್ದಾರೆ ಎಂದು ಮಹಿಳೆಯರು ಆರೋಪಿಸಿದ್ದಾರೆ. ಆಗ ಗ್ಯಾಂಗ್ ಅವರನ್ನು ಕೊಠಡಿಯೊಂದರಲ್ಲಿ ಲಾಕ್ ಮಾಡಿದೆ. ನಂತರ, ಅವರು ನಮ್ಮನ್ನು (ಮಹಿಳೆಯರನ್ನು) ವರಾಂಡಾಕ್ಕೆ ಎಳೆದುಕೊಂಡು ಸರದಿಯಲ್ಲಿ ಅತ್ಯಾಚಾರ ಮಾಡಿದರು. ಕಿರುಚದಂತೆ ಬೆದರಿಸಿ ಬೆಳಗಿನ ಜಾವ 4 ಗಂಟೆಯವರೆಗೂ ಚಿತ್ರಹಿಂಸೆ ನೀಡುತ್ತಿದ್ದರು ಎಂದು ಸಂತ್ರಸ್ತರಲ್ಲಿ ಒಬ್ಬರು ಪೊಲೀಸರಿಗೆ ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com