ಉತ್ತರ ಪ್ರದೇಶ: ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ದಾಳಿ ನಡೆಸಿದ್ದ ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಇಬ್ಬರಿಗೆ ಗಾಯ

ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್ ನಡೆದಿದ್ದು ಈ ಹಿಂದೆ ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಅನೀಸ್ ಖಾನ್‌ನನ್ನುಉತ್ತರ ಪ್ರದೇಶ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.
ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್
ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್

ಲಖನೌ: ಉತ್ತರ ಪ್ರದೇಶದಲ್ಲಿ ಮತ್ತೊಂದು ಎನ್ಕೌಂಟರ್ ನಡೆದಿದ್ದು ಈ ಹಿಂದೆ ರೈಲಿನಲ್ಲಿ ಮಹಿಳಾ ಪೇದೆ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದ ಆರೋಪಿ ಅನೀಸ್ ಖಾನ್‌ನನ್ನುಉತ್ತರ ಪ್ರದೇಶ ಪೊಲೀಸರು ಎನ್ಕೌಂಟರ್ ಮಾಡಿದ್ದಾರೆ.

ಹೌದು.. ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ಸರಯು ಎಕ್ಸ್‌ಪ್ರೆಸ್‌ನಲ್ಲಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಅನೀಸ್ ಖಾನ್‌ನನ್ನು ಉತ್ತರ ಪ್ರದೇಶ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಎನ್‌ಕೌಂಟರ್‌ನಲ್ಲಿ ಮತ್ತೋರ್ವ ಆರೋಪಿ ಸಾವನ್ನಪ್ಪಿದ್ದು, ಇಬ್ಬರು ವ್ಯಕ್ತಿಗಳು ಗಾಯಗೊಂಡಿದ್ದಾರೆ.

20 ದಿನಗಳ ಹಿಂದೆ ಅಂದರೆ ಆಗಸ್ಟ್ 30 ರಂದು ರೈಲಿನಲ್ಲಿ ಮಹಿಳಾ ಪೇದೆಯೊಬ್ಬರ ಮೇಲೆ ಅನೀಸ್ ಖಾನ್ ಭೀಕರವಾಗಿ ಹಲ್ಲೆ ಮಾಡಿದ್ದ. ರಕ್ತ ಮಡುವಿನಲ್ಲಿ ಬಿದ್ದಿದ್ದ ಮಹಿಳಾ ಪೊಲೀಸ್ ಪೇದೆಯನ್ನು ಅಧಿಕಾರಿಗಳು ಆಸ್ಪತ್ರೆಗೆ ದಾಖಲಿಸಿದ್ದು ಈಗಲೂ ಆಕೆ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತ ಜೀವನ್ಮರಣದ ನಡುವೆ ಹೋರಾಟ ನಡೆಸಿದ್ದಾರೆ. 

ಈ ಘಟನೆ ನಡೆದ 20 ದಿನಗಳ ನಂತರ ಪೊಲೀಸರು ಆರೋಪಿಗಳನ್ನು ಎನ್‌ಕೌಂಟರ್‌ನಲ್ಲಿ ಬಲಿ ಹಾಕಿದ್ದಾರೆ. ಎನ್‌ಕೌಂಟರ್‌ನಲ್ಲಿ ಹತನಾದ ಅನೀಶ್, ಮಹಿಳಾ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಪ್ರಮುಖ ಆರೋಪಿಯಾಗಿದ್ದಾನೆ.

ಎನ್‌ಕೌಂಟರ್‌ನಲ್ಲಿ ದಾಳಿ ಆರೋಪಿ ಹತ್ಯೆ
ರೈಲಿನಲ್ಲಿ ಮಹಿಳಾ ಕಾನ್‌ಸ್ಟೆಬಲ್ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಎನ್‌ಕೌಂಟರ್‌ನಲ್ಲಿ ಕೊಲ್ಲಲಾಗಿದೆ ಎಂದು ಯುಪಿ ಪೊಲೀಸರು ಇಂದು ಬೆಳಿಗ್ಗೆ ತಿಳಿಸಿದ್ದಾರೆ. ಗುಂಡಿನ ದಾಳಿಯಲ್ಲಿ ಆತನ ಇಬ್ಬರು ಸಹಚರರು ಗಾಯಗೊಂಡಿದ್ದು, ಅವರನ್ನು ಬಂಧಿಸಲಾಗಿದೆ. ಆಗಸ್ಟ್ 30 ರಂದು ಅಯೋಧ್ಯೆ ಬಳಿಯ ಸರಯು ಎಕ್ಸ್‌ಪ್ರೆಸ್‌ನಲ್ಲಿ ಮಹಿಳಾ ಕಾನ್‌ಸ್ಟೆಬಲ್ ರಕ್ತದಲ್ಲಿ ತೊಯ್ದ ಸ್ಥಿತಿಯಲ್ಲಿ ಪತ್ತೆಯಾಗಿದ್ದರು. ಅವರ ಮುಖ ಮತ್ತು ತಲೆಯ ಮೇಲೂ ಗಾಯದ ಗುರುತುಗಳಿದ್ದವು.

ಸದ್ಯ ಅವರು ಲಕ್ನೋದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.  ಅಯೋಧ್ಯೆಯ ಪುರ ಖಲಂದರ್‌ನಲ್ಲಿ ಈ ಎನ್‌ಕೌಂಟರ್ ನಡೆದಿದೆ. ಅವರ ಇಬ್ಬರು ಸಹಚರರಾದ ಆಜಾದ್ ಮತ್ತು ವಿಷಂಭರ್ ದಯಾಳ್ ದುಬೆ ಎನ್‌ಕೌಂಟರ್‌ನಲ್ಲಿ ಗಾಯಗೊಂಡಿದ್ದಾರೆ. ಇಬ್ಬರನ್ನೂ ಬಂಧಿಸಲಾಗಿದೆ ಎಂದು ಉತ್ತರ ಪ್ರದೇಶದ ವಿಶೇಷ ಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com