ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂ. ಮಾನನಷ್ಟ ಮೊಕದ್ದಮೆ ದಾಖಲಿಸಿದ ಅಸ್ಸಾಂ ಸಿಎಂ ಪತ್ನಿ!

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.
ಕಾಂಗ್ರೆಸ್ ಸಂಸದ ಗೌರವ್ ಗಗೋಯ್
ಕಾಂಗ್ರೆಸ್ ಸಂಸದ ಗೌರವ್ ಗಗೋಯ್

ಗುವಾಹಟಿ: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿನಿಕಿ ಭುಯಾನ್ ಶರ್ಮಾ ಅವರು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ವಿರುದ್ಧ 10 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

ಕಮ್ರೂಪ್ ಮೆಟ್ರೋಪಾಲಿಟನ್‌ನ ಸಿವಿಲ್ ನ್ಯಾಯಾಧೀಶರ (ಹಿರಿಯ ವಿಭಾಗ) ನ್ಯಾಯಾಲಯದಲ್ಲಿ ಶುಕ್ರವಾರ ಪ್ರಕರಣ ದಾಖಲಿಸಲಾಗಿದೆ. ಸೆಪ್ಟೆಂಬರ್ 26 ರಂದು ಪ್ರಕರಣವನ್ನು ವರ್ಗಾಯಿಸಲಾಗುವುದು ಎಂದು  ಹಿರಿಯ ವಕೀಲ ದೇವಜಿತ್ ಸೈಕಿಯಾ ಪಿಟಿಐ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ಗೌರವ್ ಗೊಗೋಯ್ ವಿರುದ್ಧ 10 ಕೋಟಿ ರೂಪಾಯಿಗಳ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ. ನಾವು ಸಬ್ಸಿಡಿ ಪಡೆಯಲು ಯಾವುದೇ ಅರ್ಜಿ ಹಾಕಿಲ್ಲ ಎಂದು ನಾವು ಸ್ಪಷ್ಟವಾಗಿ ಹೇಳಿರುವುದಾಗಿ ತಿಳಿಸಿದ್ದಾರೆ.

ಸಬ್ಸಿಡಿ ಪಡೆಯುವ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿಲ್ಲ ಎಂದು ಸೈಕಿಯಾ ಹೇಳಿಕೊಂಡಿದ್ದು, ಈ ವರ್ಷ ಮೇ 26 ರಂದು ತನ್ನ ಕ್ಲೈಂಟ್‌ನ ಸಂಸ್ಥೆಗೆ ಶೋಕಾಸ್ ನೋಟಿಸ್ ಕಳುಹಿಸಲಾಗಿದೆ, ನಂತರ ಆಹಾರ ಸಂಸ್ಕರಣೆ ಸಚಿವಾಲಯದಿಂದ ಇಮೇಲ್ ಬಂದಿದೆ ಎಂದು ಹೇಳಿದ್ದಾರೆ.

ನವೆಂಬರ್ 22, 2022 ರಂದು ಯೋಜನೆಗೆ ಅನುಮೋದನೆ ನೀಡಲಾಯಿತು. ಕೊನೆಯ ಇಮೇಲ್‌ನಲ್ಲಿ, ನಾವು ನಮ್ಮ ಪ್ರಸ್ತಾವನೆಯನ್ನು ಸಲ್ಲಿಸದಿದ್ದರೆ ನಮ್ಮ ಹಕ್ಕು ಕಳೆದುಹೋಗುತ್ತದೆ ಎಂದು ನಮಗೆ ತಿಳಿಸಲಾಗಿದೆ. ನಾವು ಸಬ್ಸಿಡಿ ಪಡೆಯಲು ಯಾವುದಕ್ಕೂ ಪ್ರತಿಕ್ರಿಯಿಸಿಲ್ಲ ಎಂದು ಅವರು ವಿವರಿಸಿದ್ದಾರೆ.

ಗೊಗೊಯ್ ಅವರು ಶರ್ಮಾ ಮತ್ತು ಅವರ ಸಂಸ್ಥೆ 'ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ಸ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಏನೇ ಹೇಳಿಕೆ ನೀಡಿದ್ದರೂ, ಆ ಮಾಹಿತಿಯು ಸತ್ಯವನ್ನು ಆಧರಿಸಿಲ್ಲ ಎಂದು ಹಿರಿಯ ವಕೀಲರು ಹೇಳಿದ್ದಾರೆ.

ತನ್ನ ಕಂಪನಿ ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ವಿರುದ್ಧದ ಆರೋಪಗಳಿಗೆ ಪ್ರತಿಕ್ರಿಯೆಯಾಗಿ, ರಿನಿಕಿ ಭುಯಾನ್ ಶರ್ಮಾ ಸೆಪ್ಟೆಂಬರ್ 14 ರಂದು ಟ್ವೀಟ್ ಮಾಡಿದ್ದರು. ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ ಪ್ರೈವೇಟ್ ಲಿಮಿಟೆಡ್ 2006 ರಿಂದ ವಿವಿಧ ಕ್ಷೇತ್ರಗಳಲ್ಲಿ ವ್ಯಾಪಾರ ಹಿತಾಸಕ್ತಿಗಳೊಂದಿಗೆ ಅಸ್ತಿತ್ವದಲ್ಲಿದೆ ಇದೊಂದು ಸ್ವತಂತ್ರ ಸಂಸ್ಥೆಯಾಗಿದೆ ಎಂದಿದ್ದರು.

ಇದು ಸಾರ್ವಜನಿಕ ಡೊಮೇನ್‌ನಲ್ಲಿ ತನ್ನ ಎಲ್ಲಾ ಹಣಕಾಸಿನ ದಾಖಲೆಗಳೊಂದಿಗೆ ಕಾನೂನು ಪಾಲಿಸುವ ಕಂಪನಿಯಾಗಿದೆ ಎಂದು ಅವರು ಹೇಳಿದರು. ಸುದೀರ್ಘ ಮತ್ತು ಯಶಸ್ವಿ ವ್ಯಾಪಾರದ ದಾಖಲೆಯೊಂದಿಗೆ, ಪ್ರೈಡ್ ಈಸ್ಟ್ ಎಂಟರ್ಟೈನ್ಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಇತರ ಯಾವುದೇ ಅರ್ಹ ಉದ್ಯಮಗಳಂತೆ ಸರ್ಕಾರಿ ಬೆಂಬಲಿತ ಕಾರ್ಯಕ್ರಮಗಳು ಮತ್ತು ಪ್ರೋತ್ಸಾಹಕ ಯೋಜನೆಗಳಲ್ಲಿ ಭಾಗವಹಿಸಲು ಅರ್ಹವಾಗಿದೆ.

ಆದಾಗ್ಯೂ, ಪ್ರಸ್ತುತ ಸಂದರ್ಭದಲ್ಲಿ, ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆಗೆ ಸಂಬಂಧಿಸಿದಂತೆ, ಪ್ರೈಡ್ ಈಸ್ಟ್ ಎಂಟರ್‌ಟೈನ್‌ಮೆಂಟ್ಸ್ ಪ್ರೈವೇಟ್ ಲಿಮಿಟೆಡ್, ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರೈಸಿದ್ದರೂ, ಸರ್ಕಾರದ ಒಂದು ಪೈಸೆಯ ಸಬ್ಸಿಡಿಯನ್ನು ಕ್ಲೈಮ್ ಮಾಡಿಲ್ಲ ಅಥವಾ ಸ್ವೀಕರಿಸಿಲ್ಲ ಎಂದು ಭೂಯಾನ್ ಶರ್ಮಾ ಹೇಳಿದರು.

ಈ ತಿಂಗಳ ಆರಂಭದಲ್ಲಿ, ಗೌರವ್ ಗೊಗೊಯ್ ಅವರು ಪ್ರಧಾನ ಮಂತ್ರಿ ಕಿಸಾನ್ ಸಂಪದಾ ಯೋಜನೆಯಡಿಯಲ್ಲಿ ಕೇಂದ್ರ ಸರ್ಕಾರದಿಂದ 10 ಕೋಟಿ ರೂಪಾಯಿಗಳ ಸಬ್ಸಿಡಿ ಪಡೆಯಲು ಮುಖ್ಯಮಂತ್ರಿ ಶರ್ಮಾ ತಮ್ಮ ಪತ್ನಿಯ ಕಂಪನಿಗೆ ಸಹಾಯ ಮಾಡಿದ್ದಾರೆ ಎಂದು ಸರಣಿ ಟ್ವೀಟ್‌ಗಳಲ್ಲಿ ಆರೋಪಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com