ಮುಂಬರುವ ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ಗೆಲುವು ಎಷ್ಟರಲ್ಲಿ?: ರಾಹುಲ್ ಗಾಂಧಿ ಕೊಟ್ಟ ವಿವರಣೆ ಹೀಗಿದೆ...

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸದ್ಯದ ಪ್ರಕಾರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಖಂಡಿತವಾಗಿಯೂ ಗೆಲ್ಲುತ್ತಿದೆ, ಬಹುಶಃ ತೆಲಂಗಾಣವನ್ನು ಗೆಲ್ಲಬಹುದು.
ರಾಹುಲ್ ಗಾಂಧಿ
ರಾಹುಲ್ ಗಾಂಧಿ

ನವದೆಹಲಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವನ್ನು ವ್ಯಕ್ತಪಡಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಸದ್ಯದ ಪ್ರಕಾರ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್ ಖಂಡಿತವಾಗಿಯೂ ಗೆಲ್ಲುತ್ತಿದೆ, ಬಹುಶಃ ತೆಲಂಗಾಣವನ್ನು ಗೆಲ್ಲಬಹುದು. ರಾಜಸ್ಥಾನದಲ್ಲಿ ತುಂಬಾ ನಿಕಟ ಕಠಿಣ ಸ್ಪರ್ಧೆಯಿದ್ದು, ಪಕ್ಷ ಜಯಭೇರಿ ಬಾರಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಲೋಕಸಭೆಯಲ್ಲಿ ಬಹುಜನ ಸಮಾಜ ಪಕ್ಷದ ನಾಯಕ ಡ್ಯಾನಿಶ್ ಅಲಿ ವಿರುದ್ಧ ಭಾರತೀಯ ಜನತಾ ಪಕ್ಷದ ಸಂಸದ ರಮೇಶ್ ಬಿಧುರಿ ಅವಹೇಳನಕಾರಿ ಹೇಳಿಕೆಗಳನ್ನು ಉಲ್ಲೇಖಿಸಿದ ಗಾಂಧಿ, ಜಾತಿ ಜನಗಣತಿಯ ಬೇಡಿಕೆಯಿಂದ ಗಮನವನ್ನು ಬೇರೆಡೆ ಸೆಳೆಯಲು ಬಿಜೆಪಿ ಇಂತಹ ತಂತ್ರಗಳಲ್ಲಿ ತೊಡಗಿದೆ ಎಂದು ಆರೋಪಿಸಿದರು.

ಪ್ರತಿಪಕ್ಷಗಳು ಹೊಂದಾಣಿಕೆ ಮಾಡಿಕೊಂಡು ಒಟ್ಟಾಗಿ ಕೆಲಸ ಮಾಡುತ್ತಿವೆ. 2024ರ ಸಾರ್ವತ್ರಿಕ ಚುನಾವಣೆಗಳಲ್ಲಿ ಬಿಜೆಪಿಗೆ ಅಚ್ಚರಿ ಕಾದಿದೆ ನೋಡುತ್ತಿರಿ ಎಂದರು. 

ಅಸ್ಸಾಂನ ಪ್ರತಿದಿನ್ ಮೀಡಿಯಾ ನೆಟ್‌ವರ್ಕ್ ಆಯೋಜಿಸಿದ್ದ ಸಮಾವೇಶದಲ್ಲಿ ಮಾತನಾಡಿದ ರಾಹುಲ್ ಗಾಂಧಿ, 'ಒಂದು ರಾಷ್ಟ್ರ, ಒಂದು ಚುನಾವಣೆ' ಕಲ್ಪನೆಯು ಜನರ ನೈಜ ಸಮಸ್ಯೆಗಳಿಂದ ಗಮನವನ್ನು ಬೇರೆಡೆ ಸೆಳೆಯುವ ಗುರಿಯನ್ನು ಹೊಂದಿದೆ. ಇದು ಬಿಜೆಪಿಯ ಗೊಂದಲದ ತಂತ್ರಗಳಲ್ಲಿ ಒಂದಾಗಿದೆ ಎಂದು ಅವರು ಪ್ರತಿಪಾದಿಸಿದರು.

ಭಾರತದಲ್ಲಿನ ಪ್ರಮುಖ ಸಮಸ್ಯೆಗಳೆಂದರೆ ಸಂಪತ್ತಿನ ಕೇಂದ್ರೀಕರಣ, ಸಂಪತ್ತಿನಲ್ಲಿ ಭಾರಿ ಅಸಮಾನತೆ, ಬೃಹತ್ ನಿರುದ್ಯೋಗ, ಕೆಳಜಾತಿ, ಒಬಿಸಿ ಮತ್ತು ಬುಡಕಟ್ಟು ಸಮುದಾಯಗಳಿಗೆ ಭಾರಿ ಅನ್ಯಾಯ ಮತ್ತು ಬೆಲೆ ಏರಿಕೆಯಾಗಿದೆ ಎಂದು ರಾಹುಲ್ ಗಾಂಧಿ ಹೇಳಿದರು. 

ಈಗ, ಬಿಜೆಪಿಯು ಅವರ ವಿರುದ್ಧ ಸ್ಪರ್ಧಿಸಲು ಸಾಧ್ಯವಿಲ್ಲ. ನಾವು ಒಟ್ಟಾಗಿ ಚುನಾವಣೆಗಳನ್ನು ನಡೆಸೋಣ. ಭಾರತದ ಹೆಸರನ್ನು ಬದಲಾಯಿಸೋಣ'. ಇದು ಎಲ್ಲಾ ಗೊಂದಲವಾಗಿದೆ ಎಂದು ಟೀಕಿಸಿದರು.  

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ಮಿಜೋರಾಂನಲ್ಲಿ ಸದ್ಯದಲ್ಲಿಯೇ ವಿಧಾನಸಭೆ ಚುನಾವಣೆ ನಡೆಯಲಿದೆ.

ಪಕ್ಷದ ಅವಕಾಶಗಳ ಬಗ್ಗೆ ಕೇಳಿದ ಪ್ರಶ್ನೆಗೆ, ಬಹುಶಃ ತೆಲಂಗಾಣವನ್ನು ಗೆಲ್ಲುತ್ತೇವೆ, ನಾವು ಖಂಡಿತವಾಗಿಯೂ ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢವನ್ನು ಗೆಲ್ಲುತ್ತೇವೆ. ರಾಜಸ್ಥಾನದಲ್ಲಿ ಕಠಿಣ ಸ್ಪರ್ಧೆಯಿದೆ. ರಾಜಸ್ತಾನ ಗೆಲ್ಲುವ ವಿಶ್ವಾಸವಿದೆ. ಕರ್ನಾಟಕದಲ್ಲಿ ನಾವು ಬಿಜೆಪಿಗೆ ಪಾಠ ಕಲಿಸಿದ್ದೇವೆ ಎಂದರು. 

ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ರೀತಿಯ ವಿಷಯವನ್ನು ಬಳಸುತ್ತಾರೆ. ಅದನ್ನು ಹೇಗೆ ಎದುರಿಸಬೇಕೆಂದು ನಾವು ಈಗ ಕಲಿತಿದ್ದೇವೆ ಎಂದು ಅವರು ಹೇಳಿದರು.

ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದಲ್ಲಿ ಚುನಾವಣಾ ಪೂರ್ವದಲ್ಲಿ ಕಾಂಗ್ರೆಸ್ ನಿರೂಪಣೆಯನ್ನು ನಿಯಂತ್ರಿಸುತ್ತಿದೆ ಎಂದು ಅವರು ಹೇಳಿದ್ದಾರೆ.

ಮಹಿಳಾ ಮೀಸಲಾತಿ ಮಸೂದೆಯನ್ನು ನಾಳೆ ಬೆಳಿಗ್ಗೆ ಜಾರಿಗೆ ತರಬಹುದು. ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಶೇಕಡಾ 33ರಷ್ಟು ಸ್ಥಾನಗಳನ್ನು ಮೀಸಲಿಡಲಾಗುವುದು ಎಂದು ಹೇಳುವುದು ಚುನಾವಣಾ ತಂತ್ರ. ಮಹಿಳಾ ಮೀಸಲಾತಿ ಮತ್ತು ಜನಗಣತಿ ನಡುವೆ ಅಥವಾ ಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಮರುವಿಂಗಡಣೆ ನಡುವೆ ಯಾವುದೇ ಸಂಬಂಧವಿಲ್ಲ ಎಂದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com