ಭೋಪಾಲ್: ಪ್ರಧಾನಿ ರ‍್ಯಾಲಿಗೆ ತೆರಳುತ್ತಿದ್ದ ಖಾಸಗಿ ಬಸ್ ಟ್ರಕ್‌ಗೆ ಡಿಕ್ಕಿ, 39 ಮಂದಿಗೆ ಗಾಯ

ಭೋಪಾಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ  ರ‍್ಯಾಲಿ ಸ್ಥಳಕ್ಕೆ  ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಖಾರ್ಗೋನ್ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 39 ಮಂದಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಖರ್ಗೋನ್: ಭೋಪಾಲ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿಯವರ  ರ‍್ಯಾಲಿ ಸ್ಥಳಕ್ಕೆ  ಕರೆದೊಯ್ಯುತ್ತಿದ್ದ ಖಾಸಗಿ ಬಸ್ ಖಾರ್ಗೋನ್ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 39 ಮಂದಿ ಗಾಯಗೊಂಡಿದ್ದು, ಅವರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಕಾಸರವಾಡ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಈ ಘಟನೆ ನಡೆದಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಸೋಮವಾರ ಮಧ್ಯಾಹ್ನ ಮಧ್ಯಪ್ರದೇಶದ ರಾಜಧಾನಿಯಲ್ಲಿ ಬಿಜೆಪಿ ಕಾರ್ಯಕರ್ತರ ಮೆಗಾ ಸಭೆಯನ್ನು ಉದ್ದೇಶಿಸಿ ಪ್ರಧಾನಿ ಮಾತನಾಡುತ್ತಿದ್ದರು. ಗೋಪಾಲಪುರ ಗ್ರಾಮದ ಬಳಿ ನಿಂತಿದ್ದ ಟ್ರಕ್‌ಗೆ ಖಾಸಗಿ ಬಸ್ ಡಿಕ್ಕಿ ಹೊಡೆದಿದೆ ಎಂದು ಉಪವಿಭಾಗದ ಪೊಲೀಸ್ ಅಧಿಕಾರಿ  ಮನೋಹರ್ ಗಾವ್ಲಿ ಹೇಳಿದ್ದಾರೆ. 39 ಗಾಯಾಳುಗಳನ್ನು ಆಸ್ಪತ್ರೆಗೆ ಕರೆತರಲಾಗಿದೆ ಎಂದು ಖಾರ್ಗೋನ್ ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಅಮರ್ ಸಿಂಗ್ ಚೌಹಾಣ್ ತಿಳಿಸಿದ್ದಾರೆ.

"ಹೆಚ್ಚಿನ ಗಾಯಾಳುಗಳನ್ನು ಪ್ರಾಥಮಿಕ ಚಿಕಿತ್ಸೆಯ ನಂತರ ಡಿಸ್ಚಾರ್ಜ್ ಮಾಡಲಾಗಿದೆ. ಅವರಲ್ಲಿ ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದು,  ಹೆಚ್ಚಿನ ಚಿಕಿತ್ಸೆಗಾಗಿ ಇಂದೋರ್‌ಗೆ ಉಲ್ಲೇಖಿಸಲಾಗಿದೆ ಎಂದು ಅವರು ಹೇಳಿದರು. ಅಪಘಾತ ಸಂಭವಿಸಿದಾಗ ಗಾಯಾಳುಗಳು ತಾವು ಪ್ರಧಾನಿಯವರ ಸಮಾರಂಭದಲ್ಲಿ ಪಾಲ್ಗೊಳ್ಳಲು ಭೋಪಾಲ್‌ಗೆ ಹೋಗುತ್ತಿದ್ದಾಗಿ ವೈದ್ಯರಿಗೆ ತಿಳಿಸಿರುವುದಾಗಿ ಚೌಹಾಣ್ ಮಾಹಿತಿ ನೀಡಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com