ಮಧ್ಯಪ್ರದೇಶ: ಮರಕ್ಕೆ ಕಾರು ಡಿಕ್ಕಿ ಹೊಡೆದು ಐವರು ದುರ್ಮರಣ

ಕಾರೊಂದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
ಅಪಘಾತದಿಂದ ನಜ್ಜುಗುಜ್ಜಾಗಿರುವ ಕಾರು
ಅಪಘಾತದಿಂದ ನಜ್ಜುಗುಜ್ಜಾಗಿರುವ ಕಾರು
Updated on: 

ಉಮಾರಿಯಾ: ಕಾರೊಂದು ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿನ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನ್ನಪ್ಪಿರುವ ಘಟನೆ ಮಧ್ಯಪ್ರದೇಶದ ಉಮಾರಿಯಾ ಜಿಲ್ಲೆಯಲ್ಲಿ ಇಂದು ಮುಂಜಾನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಘುಂಗುಟಿ ಪೊಲೀಸ್ ಪೋಸ್ಟ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿ ಸಂಖ್ಯೆ 43 ರ ಮಜ್ಗಾವಾ ಗ್ರಾಮದ ಬಳಿ ಮುಂಜಾನೆ 3 ಗಂಟೆಗೆ ಈ ಘಟನೆ ಸಂಭವಿಸಿದೆ. ಡಿಕ್ಕಿ ಸಂಭವಿಸಿದಾಗ ಉಮಾರಿಯಾದಿಂದ ಶಹದೋಲ್‌ಗೆ ತೆರಳುತ್ತಿದ್ದ ಕಾರಿನಲ್ಲಿ ಐವರು ಪ್ರಯಾಣಿಸುತ್ತಿದ್ದರು ಎಂದು ಸಹಾಯಕ ಸಬ್ ಇನ್ಸ್‌ಪೆಕ್ಟರ್ ಶೈಲೇಂದ್ರ ಚತುರ್ವೇದಿ ತಿಳಿಸಿದ್ದಾರೆ.

ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತರೆಲ್ಲರೂ 30 ರಿಂದ 35 ವರ್ಷದೊಳಗಿನವರು. ಅವರಲ್ಲಿ ಹೆಚ್ಚಿನವರು ಸರ್ಕಾರಿ ನೌಕರರಾಗಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com