ಪ್ರಧಾನಿ ನರೇಂದ್ರ ಮೋದಿ
ಪ್ರಧಾನಿ ನರೇಂದ್ರ ಮೋದಿ

ವಾಟ್ಸಾಪ್‌ನಲ್ಲೂ ಪ್ರಧಾನಿ ಮೋದಿ ಜಾದೂ: ಕೇವಲ 6 ದಿನಗಳಲ್ಲಿ 50 ಲಕ್ಷಕ್ಕೂ ಹೆಚ್ಚು ಫಾಲೋವರ್ಸ್ ಸೇರ್ಪಡೆ

ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ 6 ದಿನಗಳಲ್ಲಿ ವಾಟ್ಸಾಪ್‌ ಚಾನಲ್ ನಲ್ಲಿ 5 ಮಿಲಿಯನ್ ಫಾಲೋವರ್‌ಗಳನ್ನು ಪಡೆದಿದ್ದಾರೆ. ಪ್ರಸ್ತುತ, ಪಿಎಂ ಮೋದಿ ವಾಟ್ಸಾಪ್ ಚಾನೆಲ್‌ನಲ್ಲಿ ಅತಿ ಹೆಚ್ಚು ಮತ್ತು ವೇಗವಾಗಿ ಬೆಳೆಯುತ್ತಿರುವ ಅನುಯಾಯಿಗಳನ್ನು ಹೊಂದಿರುವ ವಿಶ್ವದ ನಾಯಕರಾಗಿದ್ದಾರೆ.

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಕೇವಲ 6 ದಿನಗಳಲ್ಲಿ ವಾಟ್ಸಾಪ್‌ ಚಾನಲ್ ನಲ್ಲಿ 5 ಮಿಲಿಯನ್ ಫಾಲೋವರ್‌ಗಳನ್ನು ಪಡೆದಿದ್ದಾರೆ. ಪ್ರಸ್ತುತ, ಪಿಎಂ ಮೋದಿ ವಾಟ್ಸಾಪ್ ಚಾನೆಲ್‌ನಲ್ಲಿ ಅತಿ ಹೆಚ್ಚು ಮತ್ತು ವೇಗವಾಗಿ ಬೆಳೆಯುತ್ತಿರುವ ಅನುಯಾಯಿಗಳನ್ನು ಹೊಂದಿರುವ ವಿಶ್ವದ ನಾಯಕರಾಗಿದ್ದಾರೆ.

ತಮ್ಮ ಚಾನಲ್‌ಗೆ ಸೇರಿದ್ದಕ್ಕಾಗಿ ವಾಟ್ಸಾಪ್ ಗುಂಪಿನಲ್ಲಿ ತಮ್ಮ ಅನುಯಾಯಿಗಳಿಗೆ ಪ್ರಧಾನಿ ಮೋದಿ ಧನ್ಯವಾದ ತಿಳಿಸಿದ್ದಾರೆ. ನಾವು 50 ಲಕ್ಷಕ್ಕೂ ಹೆಚ್ಚು ಜನರ ಗುಂಪಾಗಿರುವುದರಿಂದ, ನನ್ನ ವಾಟ್ಸಾಪ್ ಚಾನೆಲ್ ಮೂಲಕ ನನ್ನೊಂದಿಗೆ ಸಂಪರ್ಕ ಹೊಂದಿದ ಪ್ರತಿಯೊಬ್ಬರಿಗೂ ನಾನು ಕೃತಜ್ಞನಾಗಿದ್ದೇನೆ! ನಿಮ್ಮ ಪ್ರತಿಯೊಬ್ಬರ ನಿರಂತರ ಬೆಂಬಲಕ್ಕೆ ನಾನು ಕೃತಜ್ಞನಾಗಿದ್ದೇನೆ. ನಾವು ಸಂವಾದವನ್ನು ಮುಂದುವರಿಸುತ್ತೇನೆ ಎಂದು ಹೇಳಿದ್ದಾರೆ.

ಸೆಪ್ಟೆಂಬರ್ 20ರಂದು, ಪಿಎಂ ಮೋದಿ ಅವರ ವಾಟ್ಸಾಪ್ ಚಾನೆಲ್ ಕೇವಲ ಒಂದು ದಿನದಲ್ಲಿ 10 ಲಕ್ಷ ಚಂದಾದಾರರ ಗಡಿಯನ್ನು ದಾಟಿದಾಗ ಒಂದು ಮೈಲಿಗಲ್ಲು ಸಾಧಿಸಿತ್ತು. 91 ಮಿಲಿಯನ್‌ಗಿಂತಲೂ ಹೆಚ್ಚು ಹಿಂಬಾಲಕರನ್ನು ಹೊಂದಿರುವ X (ಹಿಂದೆ ಟ್ವಿಟ್ಟರ್) ನಲ್ಲಿ ಪ್ರಧಾನಿ ಮೋದಿ ಅತಿ ಹೆಚ್ಚು ಅನುಸರಿಸುವ ಭಾರತೀಯರಾಗಿದ್ದಾರೆ. 

ಅದೇ ಸಮಯದಲ್ಲಿ, ಪಿಎಂ ಮೋದಿ ಅವರು ಫೇಸ್‌ಬುಕ್‌ನಲ್ಲಿ 48 ಮಿಲಿಯನ್ ಅನುಯಾಯಿಗಳನ್ನು ಹೊಂದಿದ್ದರೆ, ಅವರು ಇನ್‌ಸ್ಟಾಗ್ರಾಮ್‌ನಲ್ಲಿ 79 ಮಿಲಿಯನ್‌ಗಿಂತಲೂ ಹೆಚ್ಚು ಅನುಯಾಯಿಗಳನ್ನು ಹೊಂದಿದ್ದಾರೆ. ವಾಟ್ಸಾಪ್ ಚಾನೆಲ್‌ಗಳ ವೈಶಿಷ್ಟ್ಯವನ್ನು ಪರಿಚಯಿಸಿದ ದಿನಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ವಾಟ್ಸಾಪ್ ಚಾನೆಲ್‌ಗಳನ್ನು ಸೇರಿಕೊಂಡಿದ್ದರು.

Related Stories

No stories found.

Advertisement

X
Kannada Prabha
www.kannadaprabha.com