ಮಣಿಪುರದಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್: 45 ಮಂದಿಗೆ ಗಾಯ!

ಮಣಿಪುರದಲ್ಲಿ ಜುಲೈ ನಲ್ಲಿ ಅಪಹರಣಕ್ಕೆ ಒಳಗಾಗಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 45 ವಿದ್ಯಾರ್ಥಿಗಳಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. 
ಪ್ರತಿಭತನಾ ನಿರತರ ಮೇಲೆ ಲಾಠಿ ಚಾರ್ಜ್
ಪ್ರತಿಭತನಾ ನಿರತರ ಮೇಲೆ ಲಾಠಿ ಚಾರ್ಜ್

ಇಂಫಾಲ: ಮಣಿಪುರದಲ್ಲಿ ಜುಲೈ ನಲ್ಲಿ ಅಪಹರಣಕ್ಕೆ ಒಳಗಾಗಿ ವಿದ್ಯಾರ್ಥಿಗಳು ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದು, 45 ವಿದ್ಯಾರ್ಥಿಗಳಿಗೆ ತೀವ್ರವಾಗಿ ಗಾಯಗೊಂಡಿದ್ದಾರೆ. 

ಪ್ರತಿಭಟನಾ ನಿರತರ ವಿರುದ್ಧ ಅಶ್ರುವಾಯು ಪ್ರಯೋಗಿಸಲಾಗಿದ್ದು, ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ಶುಕ್ರವಾರದ ವರೆಗೆ ರಾಜ್ಯದ ಎಲ್ಲಾ ಶಾಲೆಗಳನ್ನೂ ಮುಚ್ಚಲಾಗಿರುತ್ತದೆ.

ಇಬ್ಬರು ಯುವಕರ ಶವಗಳ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಕೆಲವೇ ಗಂಟೆಗಳ ನಂತರ ಇಂಫಾಲ್ ಮೂಲದ ಶಾಲೆಗಳು ಮತ್ತು ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನಾ ರ್ಯಾಲಿಗಳನ್ನು ಹೊರತಂದರು, ಹತ್ಯೆಯಲ್ಲಿ ಭಾಗಿಯಾದವರನ್ನು ಬಂಧಿಸುವಂತೆ ಒತ್ತಾಯಿಸಿದರು.

ಇಲ್ಲಿನ ಮುಖ್ಯಮಂತ್ರಿಗಳ ಸೆಕ್ರೆಟರಿಯೇಟ್‌ಗೆ ತೆರಳದಂತೆ ಭದ್ರತಾ ಪಡೆಗಳು ತಡೆಯೊಡ್ಡಿದಾಗ ಪ್ರತಿಭಟನಾಕಾರರು ಇಂಫಾಲ್ ಪೂರ್ವ ಜಿಲ್ಲೆಯ ಸಂಜೆಂಥೋಂಗ್ ಬಳಿ ಪೊಲೀಸರೊಂದಿಗೆ ಘರ್ಷಣೆಗೆ ಮುಂದಾದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಶೆಲ್ ಮತ್ತು ಲಾಠಿ ಪ್ರಹಾರ ನಡೆಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com