ಜೆಡಿಯುಗೆ ಭಾರಿ ಹಿನ್ನಡೆ; ಪಕ್ಷದ ಕಾರ್ಯಕಾರಿ ಸಮಿತಿ ಸದಸ್ಯ ರಣವೀರ್ ನಂದನ್ ರಾಜೀನಾಮೆ

ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ(ಯುನೈಟೆಡ್)ದ ಮಾಜಿ ಎಂಎಲ್‌ಸಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯ ರಣವೀರ್ ನಂದನ್ ಅವರು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಂಘಟನೆಯಲ್ಲಿ ಅವರು ಹೊಂದಿದ್ದ...
ನಿತೀಶ್ ಕುಮಾರ್
ನಿತೀಶ್ ಕುಮಾರ್

ಪಾಟ್ನಾ: ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಜನತಾ ದಳ(ಯುನೈಟೆಡ್)ದ ಮಾಜಿ ಎಂಎಲ್‌ಸಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯ ರಣವೀರ್ ನಂದನ್ ಅವರು ಬುಧವಾರ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಮತ್ತು ಸಂಘಟನೆಯಲ್ಲಿ ಅವರು ಹೊಂದಿದ್ದ ಎಲ್ಲಾ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

ಜೆಡಿಯು(ಯು) ನಾಯಕರು ತಮ್ಮ ಪಕ್ಷ ಮತ್ತು ಬಿಜೆಪಿ ಸೇರಿದಂತೆ ಇತರ ಪಕ್ಷಗಳೊಂದಿಗೆ ಸಂಪರ್ಕದಲ್ಲಿದ್ದಾರೆ ಎಂದು ರಾಷ್ಟ್ರೀಯ ಲೋಕ ಜನತಾ ದಳ(ಆರ್‌ಎಲ್‌ಜೆಡಿ) ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ಉಪೇಂದ್ರ ಕುಶ್ವಾಹ ಅವರು ಹೇಳಿದ ಕೆಲವೇ ಗಂಟೆಗಳ ನಂತರ ನಂದನ್ ರಾಜೀನಾಮೆ ನೀಡಿದ್ದಾರೆ. ಇದರಿಂದ ಜೆಡಿಯುಗೆ ತೀವ್ರ ಹಿನ್ನಡೆಯಾಗಿದೆ.

ಜೆಡಿಯು(ಯು) ಮಾಜಿ ಎಂಎಲ್‌ಸಿ ರಣವೀರ್ ನಂದನ್ ಅವರು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಿದ್ದಾರೆ ಮತ್ತು ನೇರವಾಗಿ ಜೆಡಿ (ಯು) ಅಧ್ಯಕ್ಷ ರಾಜೀವ್ ರಂಜನ್ ಸಿಂಗ್ ಅಲಿಯಾಸ್ ಲಲನ್ ಸಿಂಗ್ ಮತ್ತು ನಿತೀಶ್ ಕುಮಾರ್ ಅವರಿಗೆ ರಾಜೀನಾಮೆ ಪತ್ರ ಕಳುಹಿಸಿದ್ದಾರೆ.

ನಂದನ್ ಅವರು ಬಿಜೆಪಿ ಸೇರುವ ನಿರೀಕ್ಷೆ ಇದೆ ಎಂದು ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ನಿಕಟವರ್ತಿ ಎಂದು ಪರಿಗಣಿಸಲಾದ ನಂದನ್ ಅವರು ಜೆಡಿಯು ವಕ್ತಾರರಾಗಿದ್ದರು.

ಮತ್ತೊಂದೆಡೆ, ಜೆಡಿಯು ರಾಜ್ಯ ಮುಖ್ಯಸ್ಥ ಉಮೇಶ್ ಕುಶ್ವಾಹಾ ಮಾತನಾಡಿ, ಪಕ್ಷ ನಂದನ್ ಅವರನ್ನು ಆರು ವರ್ಷಗಳ ಕಾಲ ಉಚ್ಚಾಟಿಸಿದೆ. ಪಕ್ಷ ವಿರೋಧಿ ಚಟುವಟಿಕೆ ಮತ್ತು ಪಕ್ಷದ ಉನ್ನತ ನಾಯಕತ್ವದ ವಿರುದ್ಧ ಮಾಧ್ಯಮಗಳಲ್ಲಿ ಹೇಳಿಕೆ ನೀಡಿದ್ದಕ್ಕಾಗಿ ನಂದನ್ ಅವರನ್ನು ಪಕ್ಷದಿಂದ ಉಚ್ಚಾಟಿಸಲಾಗಿದೆ ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com