ಉತ್ತರ ಪ್ರದೇಶ: ಹಿಂದೂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡುವಂತೆ ಮುಸ್ಲಿಂ ವಿದ್ಯಾರ್ಥಿಗೆ ಸೂಚಿಸಿದ ಶಿಕ್ಷಕಿಯ ಬಂಧನ

ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲಾ ಶಿಕ್ಷಕಿಯೊಬ್ಬರು ಹಿಂದೂ ವಿದ್ಯಾರ್ಥಿಗಳಿಂದ ತರಗತಿಯ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಒಂದು ತಿಂಗಳ ನಂತರ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಸಂಭಾಲ್: ಉತ್ತರ ಪ್ರದೇಶದ ಮುಜಾಫರ್‌ನಗರದ ಶಾಲಾ ಶಿಕ್ಷಕಿಯೊಬ್ಬರು ಹಿಂದೂ ವಿದ್ಯಾರ್ಥಿಗಳಿಂದ ತರಗತಿಯ ಮುಸ್ಲಿಂ ವಿದ್ಯಾರ್ಥಿಗೆ ಕಪಾಳಮೋಕ್ಷ ಮಾಡಿದ ಒಂದು ತಿಂಗಳ ನಂತರ, ಈಗ ಸಂಭಾಲ್‌ನಲ್ಲಿ ಶಾಲಾ ಶಿಕ್ಷಕಿಯೊಬ್ಬರು ಹಿಂದೂ ವಿದ್ಯಾರ್ಥಿಯ ಕಪಾಳಕ್ಕೆ ಹೊಡೆಯುವಂತೆ ಮುಸ್ಲಿಂ ವಿದ್ಯಾರ್ಥಿಗೆ ಸೂಚಿಸಿದ ಆರೋಪದ ಮೇಲೆ ಗುರುವಾರ ಬಂಧಿಸಲಾಗಿದೆ.

ಸಂಭಾಲ್ ಜಿಲ್ಲೆಯ ಅಸ್ಮೋಲಿ ಪೊಲೀಸ್ ಠಾಣೆ ವ್ಯಾಪ್ತಿಯ ದುಗಾವಾರ್ ಗ್ರಾಮದ ಖಾಸಗಿ ಶಾಲೆಯಲ್ಲಿ ಮಂಗಳವಾರ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹಿಂದೂ ಹುಡುಗನ ತಂದೆ ನೀಡಿದ ದೂರಿನ ಆಧಾರದ ಮೇಲೆ, ಶಿಕ್ಷಕಿ ಶೈಸ್ತಾ ವಿರುದ್ಧ ಐಪಿಸಿ ಸೆಕ್ಷನ್ 153 ಎ (ಧರ್ಮ, ಜನಾಂಗ ಇತ್ಯಾದಿಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು) ಮತ್ತು 323 (ಸ್ವಯಂಪ್ರೇರಿತವಾಗಿ ನೋವುಂಟುಮಾಡುವುದು) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಎಸ್ಪಿ ಶ್ರೀಶ್ ಚಂದ್ರ ಅವರು ಹೇಳಿದ್ದಾರೆ.

ನನ್ನ ಮಗ ಶಾಲೆಯಲ್ಲಿ 5ನೇ ತರಗತಿ ಓದುತ್ತಿದ್ದು, ತರಗತಿಯ ಶಿಕ್ಷಕಿ ಕೇಳಿದ ಪ್ರಶ್ನೆಗೆ ಉತ್ತರಿಸಲು ಸಾಧ್ಯವಾಗದ ಕಾರಣ ಆತನಿಗೆ ಮುಸ್ಲಿಂ ವಿದ್ಯಾರ್ಥಿಯಿಂದ ಕಪಾಳಮೋಕ್ಷ ಮಾಡಿಸಿದ್ದಾರೆ. ಇದರಿಂದ ಮಗನ ಧಾರ್ಮಿಕ ಭಾವನೆಗೆ ಧಕ್ಕೆಯಾಗಿದೆ ಎಂದು ಬಾಲಕನ ತಂದೆ ಆರೋಪಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com