ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ, ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಬೆಂಗಳೂರು ವಿವಿಯಿಂದ ಗೌರವ ಡಾಕ್ಟರೇಟ್‌ 

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. 
ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ-ಇಸ್ರೋ ಅಧ್ಯಕ್ಷ ಸೋಮನಾಥ್
ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡ-ಇಸ್ರೋ ಅಧ್ಯಕ್ಷ ಸೋಮನಾಥ್
Updated on

ಬೆಂಗಳೂರು:  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹಾಗೂ ಇಸ್ರೋ ಅಧ್ಯಕ್ಷ ಸೋಮನಾಥ್ ಗೆ ಗೌರವ ಡಾಕ್ಟರೇಟ್ ನೀಡಲು ಬೆಂಗಳೂರು ವಿಶ್ವವಿದ್ಯಾಲಯ ನಿರ್ಧರಿಸಿದೆ. 

ಆಯ್ಕೆ ಸಮಿತಿ ಶಿಫಾರಸು ಮಾಡಿರುವ ಪಟ್ಟಿಗೆ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅನುಮೋದನೆ ನೀಡಿದ್ದಾರೆ. 58 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ.

ಈ ಹಿಂದೆ ಸೆ.29ರಂದು ಘಟಿಕೋತ್ಸವ ನಿಗದಿಯಾಗಿತ್ತು. ಆದರೆ, ಆ ದಿನ ಬಂದ್‌ ಇರುವ ಕಾರಣಕ್ಕೆ ಮುಂದೂಡಲಾಗಿದೆ. ಶೀಘ್ರದಲ್ಲೇ ಘಟಿಕೋತ್ಸವದ ದಿನಾಂಕ ಘೋಷಣೆ ಮಾಡುವುದಾಗಿ ಬೆಂಗಳೂರು ವಿಶ್ವವಿದ್ಯಾಲಯ ತಿಳಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com